ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಾಲೆಗಳ ಆರಂಭದ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ಧಾರ!

|
Google Oneindia Kannada News

ಬೆಂಗಳೂರು, ಆ. 30: ರಾಜ್ಯದಲ್ಲಿ ಶಾಲೆಗಳ ಆರಂಭದ ಕುರಿತು ತಾಂತ್ರಿಕ ಸಮಿತಿ ಸಭೆಯಲ್ಲಿ ಚರ್ಚಿಸಿದ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ಧಾರ ತೆಗೆದು ಕೊಳ್ಳಲಿದ್ದಾರೆ. ಶಾಲೆಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.

ಸೋಮವಾರ ಮಲ್ಲೇಶ್ವರದ ರಾಜ್ಯ ಬಿಜೆಪಿ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರು ಮತ್ತು ಸಾರ್ವಜನಿಕರನ್ನು ಭೇಟಿ ಮಾಡಿದರು. ನಂತರ ಮಾತನಾಡಿದ ನಾಗೇಶ್, ಒಂದನೇ ತರಗತಿಯಿಂದ ಶಾಲೆಗಳನ್ನು ಆರಂಭಿಸಬೇಕೇ ಎಂಬ ಬಗ್ಗೆ ತಾಂತ್ರಿಕ ಶಿಕ್ಷಣ ಸಮಿತಿ ನಿರ್ಧಾರದಡಿ ನಿರ್ಣಯಿಸಬೇಕಾಗಿದೆ. ತಾಂತ್ರಿಕ ಸಲಹಾ ಸಮಿತಿ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆಯ ಬಳಿಕ ಶಾಲಾ ತರಗತಿಗಳ ಕುರಿತು ನಿರ್ಧರಿಸಲಿದ್ದೇವೆ. ಶಾಲೆಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ಸಂಪೂರ್ಣವಾಗಿ ಸಜ್ಜಾಗಿದೆ. ಶಿಕ್ಷಕರೂ ಶಾಲೆಗಳ ಆರಂಭಕ್ಕೆ ಉತ್ಸುಕರಾಗಿ ಕಾಯುತ್ತಿದ್ದಾರೆ ಎಂದರು. ಯಾಕೆ ಶಾಲೆಗಳನ್ನು ಆರಂಭಿಸುತ್ತಿಲ್ಲ ಎಂದು ಪೋಷಕರೂ ಶಾಲೆಗಳಿಗೆ ಬಂದು ಪ್ರಶ್ನಿಸುತ್ತಿದ್ದಾರೆ ಎಂಬ ಮಾಹಿತಿ ಲಭಿಸಿದೆ ಎಂದು ತಿಳಿಸಿದರು.

ಮುಖ್ಯಮಂತ್ರಿ ಬೊಮ್ಮಾಯಿ ಮತ್ತು ಶಾಸಕರ ಇಚ್ಛಾಶಕ್ತಿಯ ಪರಿಣಾಮವಾಗಿ ರಾಜ್ಯದಲ್ಲಿ ದೊಡ್ಡ ತರಗತಿಗಳು ಆರಂಭಗೊಂಡಿವೆ. ಮಕ್ಕಳ ಸಹಭಾಗಿತ್ವ ಮತ್ತು ಪೋಷಕರ ಸಹಕಾರ ಪೂರ್ಣವಾಗಿ ಲಭಿಸಿದೆ. ಬಹುತೇಕ ಶೇ 70ರಷ್ಟು ಮಕ್ಕಳು ಶಾಲೆಗಳಿಗೆ ಬರುತ್ತಿದ್ದಾರೆ ಎಂದು ವಿವರಿಸಿದರು.

Chief Minister Basavaraj Bommai will decide on reopening the schools: BC Nagesh

ಮುಖ್ಯಮಂತ್ರಿಗಳು ಮಕ್ಕಳ ಜೊತೆ ಸಂವಾದ ನಡೆಸಿದಾಗ ಆನ್‌ಲೈನ್‌ ತರಗತಿಗಳಿಂದ ಹೆಚ್ಚಿನ ಪ್ರಯೋಜನ ಆಗುತ್ತಿಲ್ಲ ಎಂಬುದು ಗೊತ್ತಾಗಿದೆ. ಅನೇಕ ಮಕ್ಕಳು ಇಡೀ ದಿನ ಶಾಲಾ ತರಗತಿ ನಡೆಸಲು ಮತ್ತು ಕುಡಿಯುವ ನೀರು ಹಾಗೂ ಬುತ್ತಿ ತರಲು ಅವಕಾಶ ಕೊಡುವಂತೆ ಸಿಎಂ ಅವರಲ್ಲಿ ಮನವಿ ಮಾಡಿದ್ದಾರೆ ಎಂದರು.

Recommended Video

ಈಗಿನ ಹೊಸ ಶಿಕ್ಷಣ ನೀತಿ ಸರಿಯಿಲ್ಲ ,ಸರ್ಕಾರಗಳು ಬದಲಾದಂತೆ ಶಿಕ್ಷಣ ನೀತಿ ಬದಲಾಗಬಾರದು | Basavaraj Horatti
Chief Minister Basavaraj Bommai will decide on reopening the schools: BC Nagesh

ಗ್ರಾಮೀಣ ಪ್ರದೇಶಗಳ ಶಾಲೆಗಳಲ್ಲಿ ಮೂಲಸೌಕರ್ಯ ಚೆನ್ನಾಗಿದ್ದು, ಕೋವಿಡ್ ಮಾರ್ಗಸೂಚಿ ಪಾಲನೆ ಕಷ್ಟವಾಗಲಾರದು. ಶಾಲೆಗಳ ಆರಂಭದ ಬಳಿಕ ಕೋವಿಡ್ ಸಂಖ್ಯೆಯಲ್ಲಿ ಹೆಚ್ಚಳ ಆಗಿಲ್ಲ ಎಂದೂ ಅವರು ಪ್ರಶ್ನೆಗೆ ಉತ್ತರ ನೀಡಿದರು. ಜನಸಾಮಾನ್ಯರ ಕುಂದುಕೊರತೆ ಪರಿಹಾರಕ್ಕಾಗಿ ತಿಂಗಳಿಗೆ ಎರಡು ಬಾರಿ ಎಲ್ಲ ಸಚಿವರು ಪಕ್ಷದ ಕಾರ್ಯಾಲಯಕ್ಕೆ ಭೇಟಿ ಕೊಡಬೇಕೆಂಬ ಆಶಯಕ್ಕೆ ಅನುಗುಣವಾಗಿ ಇಲ್ಲಿಗೆ ಬಂದಿದ್ದೇನೆ. ಸಾಕಷ್ಟು ಜನ ಅಹವಾಲಯಗಳ ಜೊತೆ ಶಿಕ್ಷಣ ಕ್ಷೇತ್ರದ ಬಗ್ಗೆ ಒಂದಷ್ಟು ಒಳ್ಳೆಯ ವಿಚಾರಗಳನ್ನೂ ತಿಳಿಸಿದ್ದಾರೆ. ಕಾರ್ಯಕರ್ತರ ಭೇಟಿಗೂ ಇದು ಸದವಕಾಶ ಎಂದರು.

English summary
Chief Minister Basavaraj Bommai will decide on reopening the schools: Education minister B.C. Nagesh. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X