• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಅಪಘಾತದಲ್ಲಿ ಕೇಂದ್ರ ಸಚಿವರ ಪತ್ನಿ ಸಾವು; ಸಿಎಂ ಯಡಿಯೂರಪ್ಪ ಸಂತಾಪ

|

ಬೆಂಗಳೂರು, ಜ. 11: ಅಂಕೋಲಾ ಬಳಿ ನಡೆದ ರಸ್ತೆ ಅಪಘಾತದಲ್ಲಿ ಕೇಂದ್ರ ಆಯುಷ್ ಸಚಿವ ಶ್ರೀಪಾದ ನಾಯಕ್ ಅವರ ಪತ್ನಿ ವಿಜಯಾ ನಾಯಕ್ ಅವರ ನಿಧನ ಹೊಂದಿರುವ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಕಾರು ಪಲ್ಟಿ: ಪತ್ನಿ ಸಾವು

ವಿಜಯಾ ನಾಯಕ್ ಅವರ ನಿಧನ ಅತ್ಯಂತ ದುರದೃಷ್ಟಕರ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ. ಈ ಆಘಾತವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗದವರು ಹಾಗೂ ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡಿರುವ ಸಚಿವ ನಾಯಕ್ ಅವರು ಶೀಘ್ರ ಗುಣಮುಖರಾಗಲಿ ಎಂದು ಯಡಿಯೂರಪ್ಪ ಅವರು ಹಾರೈಸಿದ್ದಾರೆ. ಸಚಿವರಿಗೆ ಎಲ್ಲ ಅಗತ್ಯ ನೆರವು ನೀಡುವ ಬಗ್ಗೆ ಜಿಲ್ಲಾಡಳಿತ ಹಾಗೂ ಪೊಲೀಸರಿಗೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕೇಂದ್ರ ಆಯುಷ್ ಸಚಿವ ಶ್ರೀಪಾದ ನಾಯಕ್ ಅವರು ಕುಟುಂಬಸ್ಥರ ಜೊತೆ ಯಲ್ಲಾಪುರ ಚಂದಗುಳಿ ದೇವಸ್ಥಾನಕ್ಕೆ ಬೇಟಿ ನೀಡಿ ದೇವರ ದರ್ಶನ ಪಡೆದು ಬಳಿಕ, ಗೋಕರ್ಣದ ಮಹಾಬಲೇಶ್ವರ ದೇಗುಲಕ್ಕೆ ತೆರಳುತ್ತಿದ್ದ ವೇಳೆ‌ ಕಾರು ಪಲ್ಟಿಯಾಗಿತ್ತು. ಅಂಕೋಲಾ ಸಮೀಪದ ಹೊಸಕಂಬಿ‌ ಹೆದ್ದಾರಿಯಲ್ಲಿ ದುರ್ಘಟನೆ ನಡೆದಿತ್ತು. ಸಚಿವರ ಪತ್ನಿ ಸ್ಥಳದಲ್ಲೇ‌ ಸಾವನ್ನಪ್ಪಿದ್ದರು. ಇದೀಗ ಸಚಿವರ ಆಪ್ತ ಕಾರ್ಯದರ್ಶಿ ದೀಪಕ ರಾಮದಾದ ಗೂಮೆ ಅವರು ಕೂಡ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಗಂಭೀರವಾಗಿ ಗಾಯಗೊಂಡಿರುವ ಚಾಲಕ ಹಾಗೂ ಸಚಿವರಿಗೆ ಅಂಕೋಲಾ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಸಚಿವ ಶ್ರೀಪಾದ್ ನಾಯ್ಕ್ ಅವರನ್ನು ಗೋವಾದ ಆಸ್ಪತ್ರೆಗೆ ಸಾಗಿಸಲಾಗುತ್ತಿದೆ ಎಂದು ತಿಳಿದು ಬಂದಿದೆ.

English summary
Chief Minister BS Yediyurappa condolenses The death of Vijay Nayak, wife of Union Ayush Minister Sripada Nayak, in a road accident near Ankola. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X