ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೋವ್ಯಾಕ್ಸಿನ್ ಕೊರೊನಾ ಲಸಿಕೆ ಹಾಕಿಸಿಕೊಂಡ ಸಿಎಂ ಯಡಿಯೂರಪ್ಪ

|
Google Oneindia Kannada News

ಬೆಂಗಳೂರು, ಮಾರ್ಚ್ 12: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಂದು ಕೊರೊನಾ ಲಸಿಕೆಯ ಮೊದಲ ಡೋಸ್ ಪಡೆದಿದ್ದಾರೆ.

Recommended Video

ಯಡಿಯುರಪ್ಪನೆ ಲಸಿಕೆ ಹಾಕಿಸಿ ಕೊಂಡ ಮೇಲೆ tension ಯಾಕೆ? | Oneindia Kannada

ದೇಶಾದ್ಯಂತ ಮಾರ್ಚ್ 1ರಿಂದ ಎರಡನೇ ಹಂತದ ಕೊರೊನಾ ಲಸಿಕಾ ಅಭಿಯಾನ ಆರಂಭಗೊಂಡಿದೆ. ಶುಕ್ರವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೂ ಕೂಡ ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದಾರೆ.

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ಪಡೆಯಲಿರುವ ಬಿ.ಎಸ್. ಯಡಿಯೂರಪ್ಪ!ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ಪಡೆಯಲಿರುವ ಬಿ.ಎಸ್. ಯಡಿಯೂರಪ್ಪ!

ಇಂದು ಸಂಜೆ 4 ಗಂಟೆಗೆ ಯಡಿಯೂರಪ್ಪ ಅವರು ಕೋವಿಡ್ ಲಸಿಕೆ ಪಡೆದಿದ್ದಾರೆ, . ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಆವರಣದಲ್ಲಿನ ಪ್ರಧಾನಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನಾ ಆಸ್ಪತ್ರೆಯಲ್ಲಿ ಲಸಿಕೆ ಪಡೆದಿದ್ದು, ವಿಶ್ರಾಂತಿ ಪಡೆಯಲಿದ್ದಾರೆಂದು ಹೇಳಲಾಗುತ್ತಿದೆ.

Chief Minister BS Yediyurappa Takes His First Doses Of The Covid 19 Vaccine

2ನೇ ಹಂತದ ಲಸಿಕಾ ಅಭಿಯಾನದಲ್ಲಿ ಸಾರ್ವಜನಿಕರಿಗೂ ಲಸಿಕೆ ನೀಡಿಕೆ ಪ್ರಾರಂಭಗೊಂಡಿದೆ. ಈಗಾಗಲೇ ಪ್ರಧಾನಿ ನರೇಂದ್ರ ಮೋದಿ, ರಾಜ್ಯದ ಅನೇಕ ಸಚಿವರು ಕೊರೋನಾ ಲಸಿಕೆಯನ್ನು ಪಡೆದಿದ್ದರು. ಆ ಮೂಲಕ ಜನ ಸಾಮಾನ್ಯದಲ್ಲಿನ ಅನಗತ್ಯ ಆತಂಕವನ್ನು ದೂರ ಮಾಡಿದ್ದರು.

ಜನಪ್ರತಿನಿಧಿಗಳೂ ಹಾಗೂ ಸಚಿವರು ಕೊರೊನಾ ಲಸಿಕೆಗಳನ್ನು ಹಾಕಿಸಿಕೊಂಡ ಬಳಿಕ ಇತ್ತೀಚಿನ ದಿನಗಳಲ್ಲಿ ಲಸಿಕೆ ಹಾಕಿಸಿಕೊಳ್ಳುತ್ತಿರುವವರ ಪ್ರಮಾಣ ಹೆಚ್ಚಾಗುತ್ತಿದೆ. ಈ ವರೆಗೂ ದೇಶದಲ್ಲಿ ಒಟ್ಟಾರೆ 2,61,64,920 ಮಂದಿ ಲಸಿಕೆಯನ್ನು ಪಡೆದುಕೊಂಡಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಜತೆಗೆ ಸಚಿವ ಡಾ. ಸುಧಾಕರ್ ಕೂಡ ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದಾರೆ.

English summary
Karnataka Chief Minister BS Yediyurappa takes First Doses Of The Covid 19 Vaccine at Victoria Hospital Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X