• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕಲಬುರಗಿಯಿಂದಲೇ ಯಡಿಯೂರಪ್ಪ ತುರ್ತು ದೆಹಲಿಗೆ ಪ್ರಯಾಣ!

|

ಬೆಂಗಳೂರು, ಸೆ. 16: ರಾಜ್ಯ ಬಿಜೆಪಿ ನಾಯಕತ್ವ ಬದಲಾವಣೆ ಚರ್ಚೆಯ ಬೆನ್ನಲ್ಲೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ದಿಢೀರ್ ದೆಹಲಿಗೆ ತೆರಳುತ್ತಿದ್ದಾರೆ. ಅಧಿವೇಶನಕ್ಕೆ ಮೊದಲು ದೆಹಲಿಗೆ ಹೋಗುವುದಾಗಿ ಹೇಳಿದ್ದರಾದರೂ ನಾಳೆ ಮಧ್ಯಾಹ್ನವೇ ವಿಶೇಷ ವಿಮಾನದ ಮೂಲಕ ಕಲಬುರಗಿಯಿಂದ ಯಡಿಯೂರಪ್ಪ ಅವರು ದೆಹಲಿಗೆ ತೆರಳಲಿದ್ದಾರೆ. ಅವರು ದೆಹಲಿಗೆ ತೆರಳಿ, ನಾಳೆ ಸಂಜೆಯೆ ಹೈಕಮಾಂಡ್ ಭೇಟಿ ಮಾಡಲಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅನಾರೋಗ್ಯಕ್ಕೆ ಈಡಾಗಿದ್ದಾರೆ. ಹೀಗಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೇರಿದಂತೆ ಬಿಜೆಪಿ ಹಿರಿಯ ನಾಯಕರನ್ನು ಸಿಎಂ ಯಡಿಯೂರಪ್ಪ ಭೇಟಿ ಮಾಡಿ ಚರ್ಚೆ ಮಾಡಲಿದ್ದಾರೆ. ಸಂಪುಟ ವಿಸ್ತರಣೆ ಕುರಿತು ಒತ್ತಡಗಳು ಹೆಚ್ಚಾಗುತ್ತಿರುವುದರಿಂದ ಮಳೆಗಾಲದ ಅಧಿವೇಶನಕ್ಕೂ ಮೊದಲೇ ಸಂಪುಟ ವಿಸ್ತರಣೆಗೆ ಅವಕಾಶವನ್ನು ಸಿಎಂ ಕೇಳಲಿದ್ದಾರೆ ಎನ್ನಲಾಗಿದೆ.

   Corona ಸೋಂಕಿನ ಅನುಭವ ಹಂಚಿಕೊಂಡ Siddramaiah | Oneindia Kannada

   ಜೊತೆಗೆ ಕೇಂದ್ರ ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ರಾಜ್ಯದ ಜಿಎಸ್‌ಟಿ ಬಾಕಿ ಕುರಿತು ಯಡಿಯೂರಪ್ಪ ಚರ್ಚೆ ನಡೆಸಲಿದ್ದಾರೆ. ಹಾಗೆಯೆ ರಾಜ್ಯದಲ್ಲಿ ಅತಿವೃಷ್ಟಿಯಿಂದ ಆಗಿರುವ ಬೆಳೆ ಹಾನಿಯ ಬಗ್ಗೆಯೂ ಚರ್ಚೆ ನಡೆಸಲಿದ್ದಾರೆ.

   English summary
   Chief Minister B.S. Yediyurappa is scheduled to fly to Delhi by a special flight tomorrow afternoon from Kalaburgi. He will travel to Delhi and meet the High Command tomorrow evening. Know more
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X