Congress Government: 2025ರಲ್ಲಿ ಸಿಎಂ ಬದಲಾವಣೆ ಫಿಕ್ಸ್? ಯಾರಿಗೆಲ್ಲಾ ಸಿಗಲಿದೆ ಮಂತ್ರಿಗಿರಿ: ಇಲ್ಲಿದೆ ಪಟ್ಟಿ

ಬೆಂಗಳೂರು, ಜನವರಿ 07: 2023 ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುತದೊಂದಿಗೆ ಅಧಿಕಾರಕ್ಕೆ ಬಂದ ದಿನವೇ ಸಿಎಂ ಸ್ಥಾನಕ್ಕಾಗಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಬಿಗ್ ಫೈಟ್ ಏರ್ಪಟ್ಟಿತ್ತು. ಅಂತಿಮವಾಗಿ ಸಿಎಂ ಪಟ್ಟ ಸಿದ್ದರಾಮಯ್ಯ ಪಾಲಾಯಿತು. ಸದ್ಯ ಸರ್ಕಾರ ಸುಭದ್ರವಾಗಿದ್ದು, ಮುಖ್ಯಮಂತ್ರಿ ಸ್ಥಾನಕ್ಕಾಗಿ ಭರ್ಜರಿ ಪೈಪೋಟಿ ಶುರುವಾಗಿದೆ.

ಕಳೆದ ಉಪಚುನಾವಣೆಯ ಸಂದರ್ಭದಲ್ಲಿ ಎರಡುವರೆ ವರ್ಷಗಳ ಅವಧಿಯ ಹಂಚಿಕೆಯಾಗಿದೆ ಎನ್ನುವ ಮಾತುಗಳನ್ನ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು ಹೇಳಿಕೆ. ರಾಜ್ಯ ರಾಜಕೀಯ ಸಂಚಲನವನ್ನ ಸೃಷ್ಟಿಸಿದ್ದು, ಇದೀದ 2025 ರಂದು ಮುಖ್ಯಮಂತ್ರಿ ಬದಲಾವಣೆಯಾಗಲಿದ್ದಾರೆ ಎನ್ನುವ ಮಾತು ಕೈ ಪಾಳಯದಲ್ಲಿ ಕೇಳಿ ಬರುತ್ತಿದೆ.

Chief Minister Change Likely Fixed In 2025

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಬದಲಾವಣೆ ವಿಚಾರ ಆಗಾಗ ಸದ್ದು ಮಾಡುತ್ತಲೇ ಇರುತ್ತದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಖುರ್ಚಿ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ. ಇತ್ತ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದರೆ ಅದರಿಂದ ಪಕ್ಷದಲ್ಲಾಗುವ ಸಾಧಕ-ಬಾಧಕಗಳ ಬಗ್ಗೆ ಹೈಕಮಾಂಡ್ ಲೆಕ್ಕಾ ಹಾಕುತ್ತಿದೆ.

ಇತ್ತೀಚೆಗೆ ಸುದ್ದಿವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದ ಡಿಕೆ ಶಿವಕುಮಾರ್ ಅವರು, ಕರ್ನಾಟಕದಲ್ಲಿ ಸದ್ಯಕ್ಕೆ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ. ಅಧಿಕಾರ ಹಂಚಿಕೆಗೆ ಸಂಬಂಧಿಸಿ ನಮ್ಮ ನಡುವೆ ಒಪ್ಪಂದವಾಗಿರುವುದು ನಿಜ. ಸಮಯ ಬಂದಾಗ ಆ ಬಗ್ಗೆ ಬಹಿರಂಗಪಡಿಸುವೆ ಎಂದು ಹೇಳಿದ್ದರು. ನಾನೀಗ ಉಪ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಮುಖ್ಯಮಂತ್ರಿ ಹುದ್ದೆ ಬಗ್ಗೆ ಈಗ ಮಾತನಾಡುವುದಿಲ್ಲ. ರಾಜ್ಯದ ಹಿತಕ್ಕಾಗಿ ಸಿದ್ದರಾಮಯ್ಯ ಹಾಗೂ ನಾನು ಜತೆಯಾಗಿ ಕೆಲಸ ಮಾಡುತ್ತಿದ್ದೇವೆ.

ನಮ್ಮ ಮಧ್ಯೆ ಹಾಗೂ ಸಿದ್ದರಾಮಯ್ಯ ಅವರ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಹಾಗೆಂದು, ಅಧಿಕಾರ ಹಂಚಿಕೆ ಬಗ್ಗೆ ಒಪ್ಪಂದವಾಗಿದ್ದು ನಿಜ. ಆ ಕುರಿತು ಈಗ ಮಾತನಾಡುವುದಿಲ್ಲ. ಸಮಯ ಬಂದಾಗ ತಿಳಿಸುವೆ ಎಂದಿದ್ದರು. ಆದರೆ, ಡಿಕೆ ಶಿವಕುಮಾರ್ ಅವರ ಈ ಹೇಳಿಕೆಯನ್ನು ಒಪ್ಪದ ಸಿಎಂ ಸಿದ್ದರಾಮಯ್ಯ ಅವರು ನಮ್ಮ ಮಧ್ಯೆ ಯಾವುದೇ ಒಪ್ಪಂದವಾಗಿಲ್ಲ ಎಂದು ಅಲ್ಲಗೆಳೆದರು. ಈ ಎಲ್ಲಾ ಬೆಳವಣೆಗೆಗಳ ನಡುವೆ 2025 ರಂದು ಸಿಎಂ ಬದಲಾವಣೆ ಖಚಿತ ಎನ್ನುವ ಮಾತುಗಳು ಕೇಳಿ ಬರುತ್ತಿದೆ.

ಹೈಕಮಾಂಡ್ ಮಧ್ಯಸ್ಥಿಕೆಯಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಅಧಿಕಾರ ಹಂಚಿಕೆಯ ಒಪ್ಪಂದ ನಡೆದಿರುವುದೇ ನಿಜವಾಗಿದ್ದರೆ, 2025ರಲ್ಲಿ ಸಿದ್ದರಾಮಯ್ಯ ಅವರು ಸಿಎಂ ಸ್ಥಾನದಿಂದ ಕೆಳಗಿಳಿಯುವುದು ಫಿಕ್ಸ್ ಅಂತಲೇ ಹೇಳಲಾಗುತ್ತಿದೆ. ಒಂದು ವೇಳೆ ಸಿಎಂ ಬದಲಾವಣೆಯಾಗಿ ಡಿ ಕೆ ಶಿವಕುಮಾರ್‌ ಅವರು ಸಿಎಂ ಅಭ್ಯರ್ಥಿಯಾದರೇ ಕೈ ಪಾಳಯದಲ್ಲಿ ಸಿದ್ದರಾಮಯ್ಯ ಅವರ ಬಣದವರು ತೀವ್ರ ವಿರೋಧ ವ್ಯಕ್ತಪಡಿಸಲಿದ್ದಾರೆ ಎನ್ನಲಾಗಿದೆ.

ಇನ್ನು ಉಪಚುನಾವಣೆಯ ಬಳಿಕ ಸಚಿವ ಸಂಪುಟ ಪುನಾರಚನೆಯಾಗಲಿದೆ ಎಂದು ರಾಜಕೀಯ ವಲಯದಲ್ಲಿ ಕೇಳಿ ಬಂದಿತ್ತು. ಆದರೆ, ಸಿದ್ದರಾಮಯ್ಯನವರು ವಿಧಾನಸಭೆ ಅಧಿವೇಶನಕ್ಕೆ ಮುನ್ನ ಪುನರ್ ರಚನೆ ಮಾಡಿದರೆ, ಒಡೆದ ಮನೆಯಾಗಿರುವ ಬಿಜೆಪಿಗೆ ಪ್ರಬಲ ಅಸ್ತ್ರ ನೀಡಿದಂತಾಗುತ್ತದೆ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಸಂಪುಟ ವಿಸ್ತರಣೆಯ ಗೋಜಿಗೆ ಹೋಗಿರಲಿಲ್ಲ.

ಇತ್ತ ಕಾಂಗ್ರೆಸ್‌ ಹೈಕಮಾಂಡ್‌ ಮಾರ್ಚ್‌ ಬಳಿಕ ಸಂಪುಟ ಪುನರ್‌ ರಚನೆ ಮಾಡಲಿದೆ ಎನ್ನುವ ಮಾತುಗಳು ಕೇಳಿ ಬಂದಿದೆ. ಸಿದ್ದರಾಮಯ್ಯ ಸಂಪುಟದಲ್ಲಿ ಮಂತ್ರಿಗಿರಿಗಾಗಿ ಹಲವು ನಾಯಕರು ಬೇಡಿಕೆ ಇಟ್ಟಿದ್ದು, ವಾಲ್ಮೀಕಿ ನಿಗಮ ಹಗರಣದ ಆರೋಪ ಹೊತ್ತು ಸಚಿವ ಸ್ಥಾನ ಕಳೆದುಕೊಂಡಿರುವ ಬಿ ನಾಗೇಂದ್ರ ಅವರಿಗೆ ಮತ್ತೆ ಸಚಿವ ಸ್ಥಾನ ಸಿಗಲಿದೆ ಎಂದು ಹೇಳಲಾಗುತ್ತಿದೆ. ಸಿದ್ದರಾಮಯ್ಯ ಆಪ್ತರಾಗಿರುವ ಮಂಡ್ಯ ಜಿಲ್ಲೆಯ ಮಳವಳ್ಳಿ ಶಾಸಕ ನರೇಂದ್ರ ಸ್ವಾಮಿ ಸಚಿವ ಸ್ಥಾನದ ಪ್ರಮುಖ ಆಕಾಂಕ್ಷಿಯಾಗಿದ್ದಾರೆ.

ಇನ್ನೂ ಬಿ.ಕೆ ಹರಿಪ್ರಸಾದ್, ಅನಿಲ್ ಚಿಕ್ಕಮಾದು, ವಿಜಯಾನಂದ ಕಾಶಪ್ಪನವರ್, ವಿನಯ್ ಕುಲಕರ್ಣಿ ಸೇರಿದಂತೆ ಇನ್ನೂ ಅನೇಕ ಶಾಸಕರು ಸಚಿವ ಸ್ಥಾನ ಬೇಕೆ ಬೇಕು ಎಂದು ಪಟ್ಟು ಹಿಡಿದಿದ್ದಾರೆ.. ಸಚಿವ ಸ್ಥಾನಕ್ಕೆ ಕೆಲವರು ಬಹಿರಂಗ ಬೇಡಿಕೆ ಇಟ್ಟರೆ, ಮತ್ತೆ ಕೆಲವರು ಪ್ರಭಾವಗಳನ್ನು ಬಳಸಿಕೊಂಡು ತಮ್ಮ ಬೇಡಿಕೆಯನ್ನು ಇಡುತ್ತಿದ್ದಾರೆ. ಹೀಗಾಗಿ ಈ ಬಾರಿ ಸಚಿವ ಸಂಪುಟ ಪುನರ್‌ ರಚನೆಯಾದರೇ ಕೆಲ ಹಿರಿಯ ಸಚಿವರಿಗೆ ಕೋಕ್‌ ಕೊಟ್ಟು ಹೊಸಬರಿಗೆ ಅವಕಾಶ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+