ಸರ್ಕಾರಿ ಕಾರು ಬೇಡವೆಂದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ!

Recommended Video

      ಸರ್ಕಾರೀ ಕಾರು ಬೇಡ ನನ್ನ ಸ್ವಂತ ಕಾರ್ ನಲ್ಲೆ ಓಡಾಡ್ತೀನಿ ಅಂದ್ರು ಎಚ್ ಡಿ ಕೆ

      ಬೆಂಗಳೂರು, ಮೇ 25 : ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸದ್ಯಕ್ಕೆ ಸರ್ಕಾರಿ ಕಾರು ಬಳಕೆ ಮಾಡುವುದಿಲ್ಲ. ರೇಂಜ್ ರೋವರ್ ಕಾರಿನಲ್ಲಿಯೇ ಪ್ರಯಾಣ ಮಾಡುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.

      ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಟೊಯೋಟಾ ಫಾರ್ಚುನರ್ ಕಾರನ್ನು ನೀಡಿತ್ತು. ಆದರೆ, ಕುಮಾರಸ್ವಾಮಿ ಅವರು ಸದ್ಯಕ್ಕೆ ಸರ್ಕಾರಿ ಕಾರು ಬಳಕೆ ಮಾಡುವುದಿಲ್ಲ ಎಂದು ಹೇಳಿದ್ದಾರೆ.

      ಕುಮಾರಸ್ವಾಮಿ ಅವರು ಚುನಾವಣಾ ಫಲಿತಾಂಶದ ಬಳಿಕ ರೇಂಜ್ ರೋವರ್ ಕಾರಿನಲ್ಲಿ ಸಂಚಾರ ನಡೆಸುತ್ತಿದ್ದಾರೆ. ಆದ್ದರಿಂದ ಅದನ್ನು ಅದೃಷ್ಟದ ಕಾರು ಎಂದು ಪರಿಗಣಿಸಿದ್ದು, ಅದರಲ್ಲಿಯೇ ಸಂಚಾರ ನಡೆಸಲು ನಿರ್ಧರಿಸಿದ್ದಾರೆ.

      Chief Minister HD Kumaraswamy to use private car

      ಕರ್ನಾಟಕ ಸರ್ಕಾರ ಮುಖ್ಯಮಂತ್ರಿಗಳ ಸಂಚಾರಕ್ಕಾಗಿ ಟೊಯೋಟಾ ಫಾರ್ಚುನರ್ ಕಾರನ್ನು ನೀಡಲಿದೆ. ಹಿಂದೆ ಸಿದ್ದರಾಮಯ್ಯ ಅವರು ಸಹ ಟೊಯೋಟಾ ಫಾರ್ಚುನರ್ ಕಾರು ಬಳಕೆ ಮಾಡುತ್ತಿದ್ದರು. ಆದರೆ, ಬಿ.ಎಸ್.ಯಡಿಯೂರಪ್ಪ ಎರಡು ದಿನಗಳ ಕಾಲ ಹುಂಡೈ ಕಾರು ಬಳಸಿದ್ದರು.

      ರಾಜ್ಯದಲ್ಲಿ ಹೊಸ ಸರ್ಕಾರ ಬಂದ ಬಳಿಕ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸಚಿವರಿಗೆ ಅಧಿಕಾರಿಗಳಿಗೆ ಎಂದು ಹೊಸ ಕಾರುಗಳನ್ನು ಖರೀದಿ ಮಾಡುತ್ತದೆ. ಮುಖ್ಯಮಂತ್ರಿಗಳಿಗೂ ಸರ್ಕಾರಿ ಕಾರಿನ ಸೌಲಭ್ಯವನ್ನು ನೀಡುವ ಜವಾಬ್ದಾರಿ ಇಲಾಖೆಯದ್ದಾಗಿದೆ.

      ಆದರೆ, ಕುಮಾರಸ್ವಾಮಿ ಅವರು ಸಂಪೂರ್ಣ ಸಚಿವ ಸಂಪುಟ ಅಸ್ತಿತ್ವಕ್ಕೆ ಬಂದ ಬಳಿಕ ಸರ್ಕಾರಿ ಕಾರು ಬಳಕೆ ಮಾಡುವ ಸಾಧ್ಯತೆ ಇದೆ. ಸದ್ಯಕ್ಕೆ ಅವರು ಕಪ್ಪು ಬಣ್ಣದ ರೇಂಜ್ ರೋವರ್ ಕಾರಿನಲ್ಲಿಯೇ ಸಂಚಾರ ನಡೆಸಲಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+