ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರೈಲ್ವೆ ಅಧಿಕಾರಿಗಳ ಸೋಗಿನಲ್ಲಿ ಐಟಿ ಅಧಿಕಾರಿಗಳು: ಮತ್ತೊಂದು ಬಾಂಬ್ ಸಿಡಿಸಿದ ಎಚ್‌ಡಿಕೆ

|
Google Oneindia Kannada News

Recommended Video

ಐಟಿ ದಾಳಿ ವಿಷಯದಲ್ಲಿ ಮತ್ತೊಂದು ಆಘಾತಕಾರಿ ಸುದ್ದಿ ನೀಡಿದ ಎಚ್ ಡಿ ಕುಮಾರಸ್ವಾಮಿ | Oneindia Kannada

ಬೆಂಗಳೂರು, ಮಾರ್ಚ್ 30: ರಾಜ್ಯದಲ್ಲಿ ಐಟಿ ಅಧಿಕಾರಿಗಳು ಗುರುವಾರ ದಾಳಿ ನಡೆಸಲಿದ್ದಾರೆ ಎಂದು ಬುಧವಾರವೇ ಹೇಳಿಕೆ ನೀಡುವ ಮೂಲಕ ಅಚ್ಚರಿ ಮೂಡಿಸಿದ್ದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಈಗ ಮತ್ತೊಂದು ಬಾಂಬ್ ಸಿಡಿಸಿದ್ದಾರೆ.

ರೈಲ್ವೆ ಅಧಿಕಾರಿಗಳ ಸೋಗಿನಲ್ಲಿ ಮೈಸೂರಿನಲ್ಲಿ ತಂಗಿರುವ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮಂಡ್ಯದ ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಅಕ್ಕಿ ಗಿರಣಿಗಳ ಮೇಲೆ ನಸುಕಿನ 4 ಗಂಟೆವರೆಗೆ ದಾಳಿ ಮಾಡಿ ಅವುಗಳಲ್ಲಿ ಸ್ಪೈ ಕ್ಯಾಮೆರಾಗಳನ್ನು ಅಳವಡಿಸಿದ್ದಾರೆ ಎಂದು ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ದೂರಿದ್ದಾರೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ದೋಸ್ತಿ ಪಕ್ಷಗಳ ಕಾರ್ಯಕರ್ತರನ್ನು ಬೆದರಿಸಲು ಕೇಂದ್ರಸರ್ಕಾರವು ಐಟಿ ಅಧಿಕಾರಿಗಳನ್ನು ಬಳಸಿಕೊಂಡು ಈ ತಂತ್ರ ಮಾಡುತ್ತಿದೆ ಎಂದು ಕೂಡ ಅವರು ಆರೋಪಿಸಿದ್ದಾರೆ.

ಗುರುವಾರ ರಾಜ್ಯದಲ್ಲಿ ಕೆಲವು ಮುಖಂಡರ ಮೇಲೆ ಐಟಿ ದಾಳಿ ನಡೆಯಲಿದೆ ಎಂದು ಕುಮಾರಸ್ವಾಮಿ ಮಾಹಿತಿ ನೀಡಿದ್ದರು. 200-300 ಐಟಿ ಅಧಿಕಾರಿಗಳು ರಾಜ್ಯಕ್ಕೆ ಬರುತ್ತಿದ್ದಾರೆ. ಅವರನ್ನು ವಿಮಾನ ನಿಲ್ದಾಣದಿಂದ ಕರೆತರಲು ಕ್ಯಾಬ್‌ಗಳು ಕೂಡ ತಯಾರಾಗಿವೆ ಎಂದು ಕುಮಾರಸ್ವಾಮಿ ಹೇಳಿದ್ದರು.

ಸಹೋದರ ರೇವಣ್ಣ ಮನೆ ಮೇಲೆ ಐಟಿ ದಾಳಿ: ಕುಮಾರಸ್ವಾಮಿ ಏನಂದ್ರು? ಸಹೋದರ ರೇವಣ್ಣ ಮನೆ ಮೇಲೆ ಐಟಿ ದಾಳಿ: ಕುಮಾರಸ್ವಾಮಿ ಏನಂದ್ರು?

ಅವರು ಹೇಳಿದಂತೆಯೇ ಮರುದಿನ ಐಟಿ ಅಧಿಕಾರಿಗಳು ಸುಮಾರು 22 ಕಡೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ಮಾಡಿದ್ದರು.

ರೈಲ್ವೆ ಅಧಿಕಾರಿಗಳ ಸೋಗು

ಐಟಿ ಅಧಿಕಾರಿಗಳು ತಮ್ಮ ಅಧಿಕಾರ ದುರುಪಯೋಗ ಪಡಿಸಿಕೊಂಡು ದಾಳಿ ಮುಂದುವರಿಸಿದ್ದಾರೆ. ಮಂಡ್ಯದ ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಅಕ್ಕಿ ಗಿರಣಿಗಳ ಮೇಲೆ ಬೆಳಗಿನ ಜಾವ 4 ಗಂಟೆ ವರೆಗೆ ದಾಳಿ ಮಾಡಿ ಸ್ಪೈ ಕ್ಯಾಮೆರಾ ಅಳವಡಿಸಿದ್ದಾರೆ. ರೈಲ್ವೆ ಅಧಿಕಾರಿಗಳ ಸೋಗಿನಲ್ಲಿ ಕಾರು ಕಾರು ಬಾಡಿಗೆ ಪಡೆದಿದ್ದಾರೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಗುರುವಾರ ರಾಜ್ಯದಲ್ಲಿ ಐಟಿ ದಾಳಿ: ಕುಮಾರಸ್ವಾಮಿಯಿಂದ ಸ್ಪೋಟಕ ಮಾಹಿತಿ

ಬೆದರಿಸಲು ತಂತ್ರ

ಮೈಸೂರಿನ ಸಿಎಫ್ ಟಿಆರ್ ಐ ನಲ್ಲಿ ತಂಗಿರುವ ಅಧಿಕಾರಿಗಳು ಕಾರ್ಯಕರ್ತರನ್ನು ಬೆದರಿಸಲು ಈ ತಂತ್ರ ಹೆಣೆದಿದ್ದಾರೆ. ಕೇಂದ್ರ ಸರ್ಕಾರದ ನೇರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಈ ತಂತ್ರವನ್ನು ಬಲವಾಗಿ ಖಂಡಿಸುತ್ತೇನೆ. ಚುನಾವಣಾ ಆಯೋಗ ಕೂಡಲೇ ಮಧ್ಯ ಪ್ರವೇಶಿಸುವ ಅಗತ್ಯವಿದೆ ಎಂದು ಹೇಳಿದ್ದಾರೆ.

ಇದೇ ಸರ್ಜಿಕಲ್ ಸ್ಟ್ರೈಕ್

"ಪ್ರಧಾನಿ ನರೇಂದ್ರ ಮೋದಿ ಅವರ ನಿಜವಾದ ಸರ್ಜಿಕಲ್ ಸ್ಟ್ರೈಕ್ ಅಂದ್ರೆ ಇದೇ. ಐಟಿ ಅಧಿಕಾರಿ ಬಾಲಕೃಷ್ಣ ಅವರು ತಮ್ಮ ಪ್ರತೀಕಾರಿ ತೀರಿಸಿಕೊಳ್ಳುವ ಸಲುವಾಗಿ ಪ್ರಧಾನಿ ನರೇಂದ್ರ ಮೊದಿ ಅವರಿಗೆ ಸಹಾಯ ಮಾಡಿದ್ದಾರೆ. ಚುನಾವಣೆಯ ಸಮಯದಲ್ಲಿ ಸಾಂವಿಧಾನಿಕ ಸಂಸ್ಥೆಗಳನ್ನು ಉಪಯೋಗಿಸಿಕೊಂಡು ಹೀಗೆ ದಾಳಿ ನಡೆಸುವುದು ಶೋಚನೀಯ" ಎಂದು ಐಟಿ ದಾಳಿ ನಡೆದ ಸಂದರ್ಭದಲ್ಲಿ ಎಚ್ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದರು.

ಸೇಡಿನ ರಾಜಕೀಯ

ಕರ್ನಾಟಕದ ಕಾಂಗ್ರೆಸ್ ಮತ್ತು ಜೆಡಿಎಸ್ ರಾಜಕೀಯ ಮುಖಂಡರನ್ನು ಬೆದರಿಸಲು ನರೇಂದ್ರ ಮೋದಿ ಅವರು ಆದಾಯ ತೆರಿಗೆ ಅಧಿಕಾರಿಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಅವರು ನಮ್ಮ ಪ್ರಭಾವಿ ಮುಖಂಡರ ಮೇಲೆ ಐಟಿ ರೇಡ್ ಮಾಡಲು ಯೋಜನೆ ರೂಪಿಸಿದ್ದಾರೆ. ಇದನ್ನು ಸೇಡಿನ ರಾಜಕೀಯ ಎನ್ನುತ್ತಾರೆ. ಇಂಥದ್ದಕ್ಕೆಲ್ಲ ನಾವು ಹೆದರಿ, ಬಗ್ಗುವುದಿಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದರು.

English summary
Chief Minister HD Kumaraswamy said that IT officials continues their raid. They disguising themselves as railway officials, they borrowed vehicles and are now staying at CFTRI Mysuru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X