Siddaramaiah: ಭರ್ಜರಿ ಬ್ಯಾಟಿಂಗ್‌ ಮಾಡಿದ ಸಿದ್ದರಾಮಯ್ಯ

ತುಮಕೂರು, ಡಿಸೆಂಬರ್‌ 02: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತುಮಕೂರಿನಲ್ಲಿ ಬ್ಯಾಟಿಂಗ್ ಆಡುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಚಾಲನೆ ನೀಡಿದರು.

ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣ ಆಗುವುದರಿಂದ ಜಿಲ್ಲೆಯ ಅಭಿವೃದ್ಧಿ ಸಾಧ್ಯವಾಗುತ್ತದೆ. ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕಾಗಿ ಒಟ್ಟು 50 ಎಕರೆ ಜಾಗವನ್ನು ಕರ್ನಾಟಕ ಕ್ರಿಕೆಟ್ ಸಂಸ್ಥೆಗೆ ನೀಡಿದ್ದೇವೆ. ಇದು ಜಿಲ್ಲೆಯ ಆರ್ಥಿಕ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಪೂರಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

Chief Minister Siddaramaiah Batting At A Cricket Stadium

ಆದಷ್ಟು ಶೀರ್ಘದಲ್ಲಿ ಕ್ರೀಡಾಂಗಣ ನಿರ್ಮಾಣ ಮುಗಿಸಿ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆ ಪೂರೈಸಿ ಎಂದು ಅವರು, ಮೈಸೂರಿನಲ್ಲೂ ಕ್ರೀಡಾಂಗಣ ನಿರ್ಮಾಣಕ್ಕೆ ಕರ್ನಾಟಕ ಕ್ರಿಕೆಟ್ ಸಂಸ್ಥೆ ಬೇಡಿಕೆ ಮುಂದಿಟ್ಟಿದೆ. ಮೈಸೂರಿನಲ್ಲೂ ಜಾಗ ಕೊಡುತ್ತೇವೆ ಎಂದು ಹೇಳಿದರು.

41 ವರ್ಷದಿಂದ ಮಂತ್ರಿ ಆಗಿದ್ದೀನಿ. ಇಂಥಾದ್ದಕ್ಕೆಲ್ಲಾ ಹೆದರುವ ಪ್ರಶ್ನೆಯೇ ಇಲ್ಲ. ತುಮಕೂರು ಜಿಲ್ಲೆಯ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಸಂದರ್ಭದಲ್ಲಿ ಪ್ರತಿಭಟನೆ ನಡೆಸಲು ಹಣದ ಆಮಿಷ ತೋರಿಸಿ ಸಾರ್ವಜನಿಕ ಮುಜುಗರಕ್ಕೆ ಒಳಗಾಗಿರುವ ಗ್ರಾಮಾಂತರ ಶಾಸಕ ಸುರೇಶ್ ಗೌಡ ಅವರಿಗೆ ಮುಖ್ಯಮಂತ್ರಿಗಳು ವೇದಿಕೆಯಲ್ಲೇ ಟಾಂಗ್ ಕೊಟ್ಟರು.

ನಾನು 41 ವರ್ಷದಿಂದ ಮಂತ್ರಿ ಆಗಿದ್ದೇನೆ. ಎರಡು ಬಾರಿ ವಿರೋಧ ಪಕ್ಷದ ನಾಯಕ, ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೀನಿ. ಇಂಥಾದ್ದಕ್ಕೆಲ್ಲಾ ಹೆದರಿದ್ದರೆ ರಾಜಕಾರಣದಲ್ಲಿ ಉಳಿಯೋಕೆ ಆಗ್ತಿರಲಿಲ್ಲ. ಯಾವ ತಪ್ಪು ಮಾಡದ ನಾನು ಯಾವುದಕ್ಕೂ ಹೆದರುವ ಪ್ರಶ್ನೆಯೇ ಇಲ್ಲ ಎಂದು ವೇದಿಕೆಯಲ್ಲೆ ಉತ್ತರಿಸಿದರು.

ನಮ್ಮ ಐದಕ್ಕೆ ಐದೂ ಗ್ಯಾರಂಟಿಗಳು ಮತ್ತು ನಮ್ಮ ಸರ್ಕಾರದ ಅಭಿವೃದ್ಧಿ ಯೋಜನೆಗಳು ಎಲ್ಲಾ ಜಾತಿ, ಎಲ್ಲಾ ಧರ್ಮದವರಿಗೂ ಸೇರಿವೆ. ನಾವು ಸಕಲರ ಅಭಿವೃದ್ಧಿ ರೂಪಿಸಿದ್ದರಿಂದಲೇ ರಾಜ್ಯದ ಆರ್ಥಿಕತೆ ವೇಗ ಪಡೆದುಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಜಿಲ್ಲಾಡಳಿತ ವತಿಯಿಂದ ಆಯೋಜಿಸಲಾಗಿದ್ದ ಸರ್ಕಾರದ ನಾನಾ ಯೋಜನೆಗಳ 750 ಕೋಟಿ ರೂಪಾಯಿ ಮೊತ್ತದ 23000 ಕ್ಕೂ ಅಧಿಕ ಮಂದಿ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ, ಹಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಇಡೀ ದೇಶದಲ್ಲಿ ರಾಜ್ಯದ GDP ನಂಬರ್ ಒನ್ ಆಗಿದೆ. ದೇಶದ GDP ಇನ್ನೂ 8 ಇದೆ. ಆದರೆ ರಾಜ್ಯದ GDP 10 ಕ್ಕೆ ತಲುಪಿದೆ. ವಿದೇಶಿ ಬಂಡವಾಳ ಆಕರ್ಷಣೆ ಮತ್ತು ಕೇಂದ್ರಕ್ಕೆ ತೆರಿಗೆ ಪಾವತಿಸುವುದರಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಇದು ಸಾಧ್ಯವಾಗಿದ್ದು ರಾಜ್ಯದ ಎಲ್ಲಾ ಜಾತಿ ಮತ್ತು ಎಲ್ಲಾ ಧರ್ಮದವರ ಒಟ್ಟಾರೆ ಕೊಡುಗೆಯಿಂದ ಎಂದು ತಿಳಿಸಿದರು.

ತುಮಕೂರು ಜಿಲ್ಲೆಯಲ್ಲಿ ಒಂದೂವರೆ ಲಕ್ಷ ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳು ಇಂದು ನೇರವಾಗಿ ತಲುಪಿವೆ. ಪ್ರತೀ ಜಿಲ್ಲೆಯಲ್ಲೂ ಲಕ್ಷ ಲಕ್ಷ ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳು ತಲುಪುತ್ತಲೇ ಇವೆ. ರಾಜ್ಯದ ಪ್ರತಿಯೊಬ್ಬರಿಗೂ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಕಾರ್ಯಕ್ರಮಗಳನ್ನು ನಾವು ಕೊಡುತ್ತಲೇ ಹೋಗುತ್ತೇವೆ. ಜೊತೆಗೆ ಹಿಂದುಳಿದವರ, ದುರ್ಬಲರ ಏಳಿಗೆಗೆ ವಿಶೇಷ ಯೋಜನೆಗಳನ್ನೂ ರೂಪಿಸುತ್ತೇವೆ. scp/tsp ಕಾಯ್ದೆಯನ್ನು ಜಾರಿ ಮಾಡಿದ್ದು ನಮ್ಮ ಸರ್ಕಾರ ಮಾತ್ರ ಎಂದು ಹೇಳಿದರು.

ರಾಜ್ಯಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ರಾಜ್ಯಗಳ ಅಭಿವೃದ್ಧಿಯಿಂದ ಮಾತ್ರ ದೇಶದ GDP ಪ್ರಗತಿ ಕಾಣಲು ಸಾಧ್ಯ. ಎಲ್ಲಾ ಧರ್ಮದ, ಎಲ್ಲಾ ಜಾತಿಯ ಜನರು ಆರ್ಥಿಕವಾಗಿ ಪ್ರಗತಿ ಹೊಂದಿದರೆ ಮಾತ್ರ ದೇಶದ ಜಿಡಿಪಿ ಬೆಳವಣಿಗೆಯಾಗುತ್ತದೆ ಎಂದರು‌.

ಹೀಗಾಗಿ ನಮ್ಮ ಸರ್ಕಾರ ಅಭಿವೃದ್ಧಿ ಕಾರ್ಯಕ್ರಮಗಳನ್ನು ರೂಪಿಸುವಾಗ ಎಲ್ಲಾ ಜಾತಿ, ಎಲ್ಲಾ ಧರ್ಮ, ಎಲ್ಲಾ ವರ್ಗದವರನ್ನೂ ಒಳಗೊಳ್ಳುವಂತೆ ರೂಪಿಸುತ್ತೇವೆ. ನಮ್ಮ ಐದಕ್ಕೆ ಐದೂ ಗ್ಯಾರಂಟಿಗಳು ಎಲ್ಲಾ ಜಾತಿ, ಎಲ್ಲಾ ಧರ್ಮದವರಿಗೂ ಸೇರಿದ್ದಾಗಿದೆ. ಈ ರೀತಿ ಸಕಲರ ಅಭಿವೃದ್ಧಿ ರೂಪಿಸಿದ್ದರಿಂದಲೇ ರಾಜ್ಯದ ಆರ್ಥಿಕತೆ ವೇಗ ಪಡೆದುಕೊಂಡಿದೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+