76 ನೇ ವಸಂತಕ್ಕೆ ಕಾಲಿಟ್ಟ ಸಿಎಂ ಸಿದ್ದರಾಮಯ್ಯ; ಡಿಕೆಶಿ, ವಿಜಯೇಂದ್ರ ಸೇರಿ ಗಣ್ಯರಿಂದ ಶುಭಾಶಯ!
ಬೆಂಗಳೂರು, ಆಗಸ್ಟ್ 03: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. 76ನೇ ವಸಂತಕ್ಕೆ ಕಾಲಿಟ್ಟ ಸಿದ್ದರಾಮಯ್ಯ ಅವರಿಗೆ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್, ಬಿಜೆಪಿ ಶಾಸಕ ವಿಜಯೇಂದ್ರ ಸೇರಿದಂತೆ ಅನೇಕ ಗಣ್ಯರು ಶುಭಾಶಯಗಳನ್ನು ತಿಳಿಸಿದ್ದಾರೆ.
ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @Siddaramaiah ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ದೇವರು ನಿಮಗೆ ಉತ್ತಮ ಆಯುರಾರೋಗ್ಯ ಕರುಣಿಸಲಿ ಎಂದು ಹಾರೈಸುತ್ತೇನೆ. ರಾಜ್ಯದ ಪ್ರಗತಿಗಾಗಿ, ಕನ್ನಡಿಗರ ಆಶೋತ್ತರಗಳನ್ನು ಈಡೇರಿಸಲು ಜೊತೆಯಾಗಿ ಸಾಗೋಣ. pic.twitter.com/8u5QHXsKcc
— DK Shivakumar (@DKShivakumar) August 3, 2023
ಟ್ವಿಟರ್ ಮೂಲಕ ಉಪಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು,ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ದೇವರು ನಿಮಗೆ ಉತ್ತಮ ಆಯುರಾರೋಗ್ಯ ಕರುಣಿಸಲಿ ಎಂದು ಹಾರೈಸುತ್ತೇನೆ. ರಾಜ್ಯದ ಪ್ರಗತಿಗಾಗಿ, ಕನ್ನಡಿಗರ ಆಶೋತ್ತರಗಳನ್ನು ಈಡೇರಿಸಲು ಜೊತೆಯಾಗಿ ಸಾಗೋಣ ಎಂದು ಡಿ ಕೆ ಶಿವಕುಮಾರ್ ಶುಭಕೋರಿದ್ದಾರೆ.

ಇನ್ನೂ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ಹಾಗೂ ಶಿಕಾರಿಪುರ ಬಿಜೆಪಿ ಶಾಸಕ ಬಿ ವೈ ವಿಜಯೇಂದ್ರ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರ ಅನುಗ್ರಹ ಸದಾ ಇರಲಿ ಎಂದು ಶುಭಕೋರಿದ್ದಾರೆ.
ಇನ್ನೂ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಸಹ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು ತಿಳಿಸಿದ್ದು, ದೇವರ ಅನುಗ್ರಹ ಸದಾ ಇರಲಿ ಟ್ವೀಟ್ ಮೂಲಕ ಶುಭಕೋರಿದ್ದಾರೆ.
ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರ ಅನುಗ್ರಹ ಸದಾ ಇರಲಿ ಎಂದು ಹಾರೈಸುತ್ತೇನೆ.@siddaramaiah
— B.S.Yediyurappa (@BSYBJP) August 3, 2023












Click it and Unblock the Notifications