ಸಿದ್ದರಾಮಯ್ಯನವರೇ ನಿಮಗೊಂದು ನೇರ ಸವಾಲು: ಸುನೀಲ್ ಕುಮಾರ್
ಬೆಂಗಳೂರು, ಮೇ 25: ಸಿದ್ದರಾಮಯ್ಯನವರೇ ನಿಮಗೊಂದು ನೇರ ಸವಾಲು ಈ ಘಟನೆಗೆ ಕಾರಣವಾದ ಗ್ಯಾಂಗ್ ಸ್ಟಾರ್ ಗಳನ್ನು ಎಷ್ಟು ಗಂಟೆಯೊಳಗೆ ಬಲಿ ಹಾಕುತ್ತೀರಿ ? ಸಣ್ಣ ಕಾರಣಕ್ಕೆ ಶಾಸಕರ ನ್ನು ಬಂದಿಸಲು ದಂಡು ಕಳುಹಿಸುವ ನಿಮ್ಮ ಸರ್ಕಾರಕ್ಕೆ ಪುಂಡರನ್ನು ಬಂದಿಸುವ ಗಂಡೆದೆ ಇಲ್ಲವೇ? ಎಂದು ಮಾಜಿ ಸಚಿವ ಸುನೀಲ್ ಕುಮಾರ್ ಪ್ರಶ್ನಿಸಿದ್ದಾರೆ.
ಶಿಕ್ಷಣ ಕ್ಷೇತ್ರ ಮಣಿಪಾಲದಲ್ಲಿ ರಾಜಾರೋಶವಾಗಿ ರೌಡಿಗಳು ಗ್ಯಾಂಗ್ ವಾರ್ ನಡೆಸಿದ್ದಾರೆ. ಸಿನಿಮೀಯ ರೀತಿಯಲ್ಲಿ ಕಾರುಗಳನ್ನು ಬಳಸಿ ಕಾದಾಡಿದ್ದಾರೆ. ಕ್ರಿಮಿನಲ್ ಗಳಿಗೆ ಆಳುವ ಸರ್ಕಾರದ ಕಾನೂನಿನ ಭಯ ಇಲ್ಲದಂತಾಗಿದೆ ಎಂಬುದಕ್ಕೆ ಇದೊಂದು ಜ್ವಲಂತ ಉದಾಹರಣೆ ಎಂದು ರಾಜ್ಯ ಸರ್ಕಾರದ ವಿರುದ್ಧ ನಡೆಸಿದ್ದಾರೆ.

ಉಡುಪಿ, ದಕ್ಷಿಣ ಕನ್ನಡದಂಥ ಜಿಲ್ಲೆಗಳಲ್ಲಿ ಮಾತ್ರವಲ್ಲ ಇಡಿ ರಾಜ್ಯದಲ್ಲಿ ಈಗ ಕಾನೂನು- ಸುವ್ಯವಸ್ಥೆ ಕುಸಿದು ಬಿದ್ದಿದೆ. ಪೊಲೀಸ್ ಠಾಣೆಗಳನ್ನು ರಾಜಕೀಯ ದ್ವೇಷ ತೀರಿಸಿಕೊಳ್ಳುವ ಅಸ್ತ್ರವಾಗಿ ಬಳಸಿಕೊಳ್ಳುವುದಕ್ಕೆ ಕಾಂಗ್ರೆಸ್ ಸರ್ಕಾರ ಮುಂದಾಗಿದ್ದರ ಪರಿಣಾಮವಾಗಿ ಇಂದು ಕ್ರಿಮಿನಲ್ ಗಳು ವಿಜೃಂಭಿಸುವಂತಾಗಿದೆ.ಇದು ಗೃಹ ಇಲಾಖೆ ಹಾಗೂ ಗೃಹ ಸಚಿವರ ವೈಫಲ್ಯಕ್ಕೆ ಹಿಡಿದ ಕೈಗನ್ನಡಿ. ಸಿದ್ದರಾಮಯ್ಯನವರೇ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿರುವ ನಿಮಗೆ ಸ್ವಾಗತ. ಆದರೆ ಇಲ್ಲಿಂದ ಹೊರಡುವುದಕ್ಕೆ ಮೊದಲು ಕೆಲ ಪ್ರಶ್ನೆಗಳಿಗೆ ಉತ್ತರಿಸಿ ಹೋಗಿ ಎಂದು ಹೇಳಿದ್ದಾರೆ.
ಕಾನೂನು-ಸುವ್ಯವಸ್ಥೆ ಕಾಪಾಡಲಾರದ ಗೃಹ ಸಚಿವರಿಂದ ಎಂದು ರಾಜೀನಾಮೆ ಪಡೆಯುತ್ತೀರಿ ? ಪೊಲೀಸ್ ಠಾಣೆಯನ್ನು ಆಳುವ ಸರ್ಕಾರದ ಆಳಾಗಿಸಿಕೊಂಡಿರುವುದಕ್ಕೆ ಎಂದು ಮುಕ್ತಾಯ ಹಾಡುತ್ತೀರಿ ?
ಕ್ರಿಮಿನಲ್ ಗಳಿಗೂ ನಿಮ್ಮ ಸರ್ಕಾರಕ್ಕೂ ಒಳ ಒಪ್ಪಂದ ಏರ್ಪಟ್ಟಿದ್ದರೆ ಮಾಸಿಕ ಹಫ್ತಾ ಎಷ್ಟು ನಿಗದಿ ಮಾಡಿದ್ದೀರಿ ? ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಪೊಲೀಸರ ಕೈ ಕಟ್ಟಿ ಹಾಕಿದ್ದೀರಾ ? ಜನರ ಶಾಂತಿ- ನೆಮ್ಮದಿ ಕಾಪಾಡಲಾರದ ಸರ್ಕಾರ ಅಧಿಕಾರದಲ್ಲಿದ್ದು ಪ್ರಯೋಜನವುಂಟೇ ? ಕ್ರಿಮಿನಲ್ ಗಳ ಅಟ್ಟಹಾಸ ನಿಲ್ಲಿಸದ ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲು ಭಯವೇಕೆ ? ಎಂದು ಸರಣಿ ಪ್ರಶ್ನೆಗಳನ್ನ ಸಿದ್ದರಾಮಯ್ಯ ಅವರಿಗೆ ಕೇಳಿದ್ದಾರೆ.
@siddaramaiah ನವರೇ ನಿಮಗೊಂದು ನೇರ ಸವಾಲು ಈ ಘಟನೆಗೆ ಕಾರಣವಾದ ಗ್ಯಾಂಗ್ ಸ್ಟಾರ್ ಗಳನ್ನು ಎಷ್ಟು ಗಂಟೆಯೊಳಗೆ ಬಲಿ ಹಾಕುತ್ತೀರಿ ? ಸಣ್ಣ ಕಾರಣಕ್ಕೆ ಶಾಸಕರ ನ್ನು ಬಂದಿಸಲು ದಂಡು ಕಳುಹಿಸುವ ನಿಮ್ಮ ಸರ್ಕಾರಕ್ಕೆ ಪುಂಡರನ್ನು ಬಂದಿಸುವ ಗಂಡೆದೆ ಇಲ್ಲವೇ ? (6/6)
— Sunil Kumar Karkala (Modi Ka Parivar) (@karkalasunil) May 25, 2024
ಈ ಕುರಿತು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಶಾಂತಿ, ಸುವ್ಯವಸ್ಥೆ, ಕಾನೂನು ಪರಿಪಾಲನೆಗೆ ಹೆಸರುವಾಸಿಯಾಗಿದ್ದ ಕರ್ನಾಟಕ ಕಾಂಗ್ರೆಸ್ ಆಡಳಿತದಲ್ಲಿ ಅಕ್ಷರಶಃ ರೌಡಿ ರಾಜ್ಯವಾಗಿ ಮಾರ್ಪಟ್ಟಿದೆ. ಕಾಂಗ್ರೆಸ್ ಸರ್ಕಾರ ರಾಜ್ಯದ ಆಡಳಿತ ಚುಕ್ಕಾಣಿ ಹಿಡಿದಿದ್ದೇ ತಡ, ಭಯೋತ್ಪಾದಕರು, ರೌಡಿ ಶೀಟರ್ ಗಳು, ಕೊಲೆಗಡುಕರು, ಬಾಂಬು, ಮಚ್ಚು, ಲಾಂಗು ಹಿಡಿದು ರಾಜ್ಯದಲ್ಲಿ ಅಶಾಂತಿಯ ವಾತಾವರಣ ಸೃಷ್ಟಿಸಿದ್ದಾರೆ.
ಚನ್ನಗಿರಿಯಲ್ಲಿ ಪೊಲೀಸ್ ಠಾಣೆ ಧ್ವಂಸ ಮಾಡಿರುವ ಘಟನೆ, ಉಡುಪಿಯಲ್ಲಿ ನಡುರಸ್ತೆಯಲ್ಲೇ ಗ್ಯಾಂಗ್ ವಾರ್ ನಡೆದಿರುವ ಘಟನೆ ಇವನ್ನೆಲ್ಲ ನೋಡುತ್ತಿದ್ದರೆ ರಾಜ್ಯದಲ್ಲಿ ಕಾನೂನಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎನ್ನುವುದು ಸ್ಪಷ್ಟವಾಗುತ್ತದೆ.
ಕಾಂಗ್ರೆಸ್ ಕೈಗೆ ಅಧಿಕಾರ ಕೊಟ್ಟರೆ,
— R. Ashoka (ಮೋದಿ ಅವರ ಕುಟುಂಬ) (@RAshokaBJP) May 25, 2024
ರೌಡಿಗಳ ಕೈಯಲ್ಲಿ ಮಚ್ಚು ಲಾಂಗು,
ಉಗ್ರರ ಕೈಯಲ್ಲಿ ಬಾಂಬು ಕೊಟ್ಟಂಗೆ
ಶಾಂತಿ, ಸುವ್ಯವಸ್ಥೆ, ಕಾನೂನು ಪರಿಪಾಲನೆಗೆ ಹೆಸರುವಾಸಿಯಾಗಿದ್ದ ಕರ್ನಾಟಕ @INCKarnataka ಆಡಳಿತದಲ್ಲಿ ಅಕ್ಷರಶಃ ರೌಡಿ ರಾಜ್ಯವಾಗಿ ಮಾರ್ಪಟ್ಟಿದೆ.
ಕಾಂಗ್ರೆಸ್ ಸರ್ಕಾರ ರಾಜ್ಯದ ಆಡಳಿತ ಚುಕ್ಕಾಣಿ ಹಿಡಿದಿದ್ದೇ ತಡ, ಭಯೋತ್ಪಾದಕರು,… pic.twitter.com/XcBRu56W2o
ಸಿಎಂ ಸಿದ್ದರಾಮಯ್ಯನವರೇ, ರಾಜ್ಯದಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಹತ್ಯೆಗಳು, ಅತ್ಯಾಚಾರಗಳು, ಗ್ಯಾಂಗ್ ವಾರ್ ಗಳು, ಗಾಂಜಾ ಮಾರಾಟ ದಂಧೆಗಳು, ರೇವ್ ಪಾರ್ಟಿಗಳು, ಕೋಮು ಗಲಭೆಗಳು, ಗಲಾಟೆಗಳಿಂದ ಕರ್ನಾಟಕದ ಗೌರವ ಮಣ್ಣುಪಾಲಗುತ್ತಿದೆ. ನಿಮ್ಮ ಕೈಯಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ. ಕನ್ನಡಿಗರು ನೆಮ್ಮದಿಯಿಂದ ಬದುಕಲು ಬಿಡಿ ಎಂದು ಆರ್ ಅಶೋಕ್ ಹೇಳಿದ್ದಾರೆ.












Click it and Unblock the Notifications