ಕೇಂದ್ರದ ಯೋಜನೆಗಳಿಗೆ ಕೇಂದ್ರದಿಂದ ಬಾರದ ಹಣ: ಸಿಎಂ ಸಿದ್ದರಾಮಯ್ಯ ಗರಂ

ಬೆಂಗಳೂರು, ಮೇ 14: ಕೇಂದ್ರ ಸರ್ಕಾರದಿಂದ ಬರಬೇಕಾದ ಪಿಂಚಣಿ ಎರಡು ವರ್ಷದಿಂದ ರಾಜ್ಯಕ್ಕೆ ಕೊಟ್ಟಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರದಿಂದ ಹಣ ಬಾರದೇ ಇರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರವೇ ಬಹುತೇಕ ಹಣ ಕೊಡುವ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರದ ಹೆಸರಿದೆ. ಆದರೂ ಚೂರು, ಪಾರು ಶೇ ಕೇಂದ್ರದ ಹಣವೂ ಬರುತ್ತಿಲ್ಲ. ಈ ನಿರಂತರ ಅನ್ಯಾಯ ಪ್ರಶ್ನಿಸಬೇಕಲ್ಲವಾ ನೀವು ಎಂದು ಹೇಳಿದರು.

ವಿಧಾನಸೌಧದ ಸಮ್ಮೇಳನಾ ಕೊಠಡಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಮಟ್ಟದ ದಿಶಾ ಸಮಿತಿ ಸಭೆಯಲ್ಲಿ ಮಾತನಾಡಿದ, ಕೇಂದ್ರ ಸರ್ಕಾರಕ್ಕೆ , ಕೇಂದ್ರದ ಮಂತ್ರಿಗಳಿಗೆ ಮತ್ತು ಪ್ರಧಾನ ಮಂತ್ರಿಯವರಿಗೆ ರಾಜ್ಯ ಸರ್ಕಾರದಿಂದ ಮೇಲಿಙದ ಮೇಲೆ ಬರೆದ ಪತ್ರಗಳ ಮಾಹಿತಿ ನೀಡಿದ ಸಿಎಂ , ಪತ್ರವನ್ನು ಸಭೆಯಲ್ಲಿ ಓದಿ ಸಂಸದರ ಗಮನ‌ ಸೆಳೆದರು. 15 ನೇ ಹಣಕಾಸು ಆಯೋಗದಲ್ಲಿ 5495 ಕೋಟಿ ರೂಪಾಯಿ ವಿಶೇಷ ಅನುದಾನ ಕೊಡಬೇಕು, ಕೆರೆ ಮತ್ತು ಫೆರಿಫೆರಲ್ ರಿಂಗ್ ರಸ್ತೆಗೆ ಕೊಡಬೇಕಾದ ಹಣ ಸೇರಿ ಒಟ್ಟು 11495 ಕೋಟಿ ರೂಪಾಯಿ ಕೇಂದ್ರದಿಂದ ಬರಬೇಕಿತ್ತು. ಏನನ್ನೂ ಕೊಡ್ತಾ ಇಲ್ಲ.

Chief Minister Siddaramaiah Expressed Dissatisfaction Over Lack Of Funds From Center

ನಾವು ರಾಜ್ಯದಿಂದ 4.5 ಲಕ್ಷ ಕೋಟಿ ತೆರಿಗೆ ಕೊಟ್ಟರೂ ರಾಜ್ಯಕ್ಕೆ ಸಣ್ಣ ನೆರವೂ ಕೇಂದ್ರದಿಂದ ಬರುವುದಿಲ್ಲ , ಕೇಂದ್ರ ಪುರಸ್ಕೃತ ಯೋಜನೆಗಳಿಗೂ ಹಣ ಕೊಡುವುದಿಲ್ಲ, ಆದರೆ ಅಭಿವೃದ್ಧಿಗೆ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಅಂತ ನೀವೇ ಹೊರಗೆ ಆರೋಪ ಮಾತಾಡ್ತೀರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು. ನಾನೇ ಎರಡು ಬಾರಿ ಭೇಟಿ ನಿರ್ಮಲಾ ಸೀತರಾಮನ್ ಅವರಿಗೆ ಭೇಟಿ ಮಾಡಿ ಮನವಿ ಮಾಡಿದರೂ ಕೊಡಲಿಲ್ಲ. ರಾಜ್ಯದ ಸಂಸದರು ಒಟ್ಟಾಗಿ ಇದನ್ನು ಕೊಡಿಸಲು ಯತ್ನಿಸಬೇಕು. ಇಷ್ಟು ದಿನಗಳೊಳಗೆ ನೀವು ಕೊಡಿಸಬೇಕಿತ್ತು. ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಬೇಡಿ ಎಂದು ಸಿದ್ದರಾಮಯ್ಯ ತಿಳಿಸಿದರು.

ರಾಜ್ಯ ಸರ್ಕಾರ ನಿರಂತರವಾಗಿ ಒಟ್ಟು 5665 ಕೋಟಿ ಪಿಂಚಣಿ ಕೊಡುತ್ತಲೇ ಬರುತ್ತದೆ. ಆದರೆ, 559 ಕೋಟಿ ಮಾತ್ರ ಕೇಂದ್ರ ಸರ್ಕಾರ ಕೊಡುತ್ತದೆ. ಈ ಸಣ್ಣ ಮೊತ್ತವನ್ನೂ ಕೇಂದ್ರ ಸರ್ಕಾರಕ್ಕೆ ಕೊಡಲು ಸಾಧ್ಯವಾಗುತ್ತಿಲ್ಲ. ಇದನ್ನೂ ಎರಡು ವರ್ಷಗಳಿಂದ ಬಾಕಿ ಉಳಿಸಿಕೊಂಡಿದೆ ಕೇಂದ್ರ. ಇದು ಏಕೆ ಎಂದು ಪ್ರಶ್ನಿಸಿದರು. ಮೂರು ತಿಂಗಳ ಒಳಗೆ ನರೇಗಾ ಕ್ರಿಯಾ ಯೋಜನೆ ಕಡ್ಡಾಯವಾಗಿ ಸಿದ್ದಪಡಿಸಬೇಕು. ಏನೇ ಕಾರಣದಿಂದ ಹಿಂದಿನ ಕ್ರಿಯಾ ಯೋಜನೆ ಆಗಿದ್ದರೆ ಅದನ್ನು ಮುಂದಿನ ಕ್ರಿಯಾ ಯೋಜನೆಯಲ್ಲಿ ಸೇರ್ಪಡೆಗೊಳಿಸಿ ಎಂದು ಸಿಎಂ ಸೂಚನೆ ನೀಡಿದರು.

ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರಿನ ಯೋಜನೆಗಾಗಿ ಕೇಂದ್ರದಿಂದ ಬರಬೇಕಾಗಿದ್ದ ಎರಡು ವರ್ಷದ ಪಾಲು 10000 ಬಾಕಿ ಕೋಟಿಯಷ್ಟು ಬಾಕಿ ಉಳಿದಿದೆ. ಹೀಗೆ ಬಾಕಿ ಉಳಿಸಿಕೊಂಡಿರುವುದರಿಂದ ಬಹಳ ಸಮಸ್ಯೆ ಆಗುತ್ತಿದೆ ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದರು. 23-24 ರ ಸಾಲಿನಲ್ಲಿ 7656 ಕೋಟಿ, 24-25 ರ ಸಾಲಿನಲ್ಲಿ 3233 ಕೋಟಿ ಹಣವನ್ನು ಕೇಂದ್ರ ಜಲಜೀವನ್ ಮಿಷನ್ ಯೋಜನೆಯಲ್ಲಿ ಬಾಕಿ ಉಳಿಸಿಕೊಂಡಿದೆ ಎಂದು ಅಧಿಕಾರಿಗಳು ಅಂಕಿ ಅಂಶ ಮುಂದಿಟ್ಟರು.

ಈ ವೇಳೆ, ಏಕೆ ಕೇಂದ್ರ ಸರ್ಕಾರದ ಬಳಿ ಹಣ ಇಲ್ಲವೇ ? ಕುಡಿಯುವ ನೀರಿಗೆ ಹಣ ಕೊಡಲಾಗದಷ್ಟು ಕೇಂದ್ರ ದುರ್ಬಲವಾಗಿದೆಯೇ ಎಂದು ದಿಶಾ ಸಮಿತಿ ಸದಸ್ಯರಾದ ಶಾಸಕ ರಿಜ್ವಾನ್ ಅರ್ಷದ್ ಅವರು ಸಂಸದರಿಗೆ ಪ್ರಶ್ನಿಸಿದರು. ಮೂರು ತಿಂಗಳ ಒಳಗೆ ನರೇಗಾ ಕ್ರಿಯಾ ಯೋಜನೆ ಕಡ್ಡಾಯವಾಗಿ ಸಿದ್ದಪಡಿಸಬೇಕು. ಏನೇ ಕಾರಣದಿಂದ ಹಿಂದಿನ ಕ್ರಿಯಾ ಯೋಜನೆ ಆಗಿದ್ದರೆ ಅದನ್ನು ಮುಂದಿನ ಕ್ರಿಯಾ ಯೋಜನೆಯಲ್ಲಿ ಸೇರ್ಪಡೆಗೊಳಿಸಿ ಎಂದು ಸಿಎಂ ಸೂಚನೆ ನೀಡಿದರು.

ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರಿನ ಯೋಜನೆಗಾಗಿ ಕೇಂದ್ರದಿಂದ ಬರಬೇಕಾಗಿದ್ದ ಎರಡು ವರ್ಷದ ಪಾಲು 10000 ಬಾಕಿ ಕೋಟಿಯಷ್ಟು ಬಾಕಿ ಉಳಿದಿದೆ. ಹೀಗೆ ಬಾಕಿ ಉಳಿಸಿಕೊಂಡಿರುವುದರಿಂದ ಬಹಳ ಸಮಸ್ಯೆ ಆಗುತ್ತಿದೆ ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದರು. 23-24 ರ ಸಾಲಿನಲ್ಲಿ 7656 ಕೋಟಿ, 24-25 ರ ಸಾಲಿನಲ್ಲಿ 3233 ಕೋಟಿ ಹಣವನ್ನು ಕೇಂದ್ರ ಜಲಜೀವನ್ ಮಿಷನ್ ಯೋಜನೆಯಲ್ಲಿ ಬಾಕಿ ಉಳಿಸಿಕೊಂಡಿದೆ ಎಂದು ಅಧಿಕಾರಿಗಳು ಅಂಕಿ ಅಂಶ ಮುಂದಿಟ್ಟರು. ಈ ವೇಳೆ, ಏಕೆ ಕೇಂದ್ರ ಸರ್ಕಾರದ ಬಳಿ ಹಣ ಇಲ್ಲವೇ ? ಕುಡಿಯುವ ನೀರಿಗೆ ಹಣ ಕೊಡಲಾಗದಷ್ಟು ಕೇಂದ್ರ ದುರ್ಬಲವಾಗಿದೆಯೇ ಎಂದು ದಿಶಾ ಸಮಿತಿ ಸದಸ್ಯರಾದ ಶಾಸಕ ರಿಜ್ವಾನ್ ಅರ್ಷದ್ ಅವರು ಸಂಸದರಿಗೆ ಪ್ರಶ್ನಿಸಿದರು.‌

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+