Siddaramaiah: ನಾಡಿನ ಜನತೆ BJP, RSS ಸಿದ್ಧಾಂತವನ್ನು ಚುನಾವಣೆಯಲ್ಲಿ ಸ್ಪಷ್ಟವಾಗಿ ತಿರಸ್ಕರಿಸಿದ್ದಾರೆ: ಸಿದ್ದರಾಮಯ್ಯ
ಬೆಂಗಳೂರು, ಜೂನ್ 09: ನಾಡಿನ ಜನತೆ BJP, RSS ಸಿದ್ಧಾಂತವನ್ನು ಚುನಾವಣೆಯಲ್ಲಿ ಸ್ಪಷ್ಟವಾಗಿ ತಿರಸ್ಕರಿಸಿದ್ದಾರೆ. ಇದಕ್ಕಾಗಿ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಶ್ರಮಿಸಿದವರ ನಿರೀಕ್ಷೆಗೆ ತಕ್ಕಂತೆ ನಮ್ಮ ಸರ್ಕಾರ ಕೆಲಸ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರು ಅವರು, ಕನ್ನಡ ನಾಡಿನ ನೆಮ್ಮದಿ ಕೆಡಿಸುವವರ ವಿಚಾರದಲ್ಲಿ ನಿರ್ಧಾಕ್ಷಿಣ್ಯ ಕ್ರಮ ಕೈಗೊಂಡು ಜನರಲ್ಲಿ ಸುರಕ್ಷತೆಯ ಭಾವ ಮೂಡಿಸಲು ಪ್ರಾಮಾಣಿಕವಾಗಿ ಶ್ರಮಿಸುತ್ತೇವೆ. ಜನರಲ್ಲಿ ಸುರಕ್ಷತೆಯ ಭಾವ ಮೂಡಿಸಲು ಸರ್ಕಾರ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಬಡವರು, ದಲಿತರು, ಹಿಂದುಳಿದವರು ಮತ್ತು ಅಲ್ಪಸಂಖ್ಯಾತರು ಭಯದ ವಾತಾವರಣದಲ್ಲಿ ಬದುಕುವ ಸನ್ನಿವೇಶ ಸೃಷ್ಟಿಯಾಗಿತ್ತು. ಇದನ್ನು ನಮ್ಮ ಸರ್ಕಾರ ಬದಲಾಯಿಸಿ, ಈ ವರ್ಗಗಳ ಜನರಲ್ಲಿ ಸುರಕ್ಷತೆಯ ಭಾವ ಮೂಡಿಸಲು ಕೆಲಸ ಮಾಡಲಿದೆ. ಈಗಾಗಲೇ ಕೆಲಸ ಪ್ರಾರಂಭವಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಸಮಾಜದಲ್ಲಿ ಭೀತಿಯ ವಾತಾವರಣ ಸೃಷ್ಟಿಸುವವರು, ಸಾಮಾಜಿಕ ಜಾಲತಾಣಗಳ ಮೂಲಕ ಸಾಮರಸ್ಯ ಕದಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದ್ದೇನೆ. ಇನ್ನು ಮುಂದೆ ರಾಜ್ಯದಲ್ಲಿ ಅನೈತಿಕ ಪೊಲೀಸ್‌ಗಿರಿಗೆ ಅವಕಾಶವಿಲ್ಲ ಎಂದು ತಿಳಿಸಿದರು.
ನಾಡಿನ ಜನತೆ BJP, RSS ಸಿದ್ಧಾಂತವನ್ನು ಚುನಾವಣೆಯಲ್ಲಿ ಸ್ಪಷ್ಟವಾಗಿ ತಿರಸ್ಕರಿಸಿದ್ದಾರೆ. ಇದಕ್ಕಾಗಿ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಶ್ರಮಿಸಿದವರ ನಿರೀಕ್ಷೆಗೆ ತಕ್ಕಂತೆ ನಮ್ಮ ಸರ್ಕಾರ ಕೆಲಸ ಮಾಡಲಿದೆ.
— Siddaramaiah (@siddaramaiah) June 8, 2023
ಕನ್ನಡ ನಾಡಿನ ನೆಮ್ಮದಿ ಕೆಡಿಸುವವರ ವಿಚಾರದಲ್ಲಿ ನಿರ್ಧಾಕ್ಷಿಣ್ಯ ಕ್ರಮ ಕೈಗೊಂಡು ಜನರಲ್ಲಿ ಸುರಕ್ಷತೆಯ ಭಾವ ಮೂಡಿಸಲು…
ನಮ್ಮ ಸರ್ಕಾರವು ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಲಿದೆ. ಚುನಾವಣೆ ಸಂದರ್ಭದಲ್ಲಿ ಭರವಸೆ ನೀಡಿದ 5 ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಲಾಗುವುದು. ಇದಕ್ಕೆ ವಾರ್ಷಿಕ 59,000 ಕೋಟಿ ರೂ. ಹಣಕಾಸಿನ ಅಗತ್ಯವಿದ್ದು, ಪ್ರಸಕ್ತ ವರ್ಷದ ಬಾಕಿ ಉಳಿದ ತಿಂಗಳುಗಳಿಗೆ 41,000 ಕೋಟಿ ರೂ. ಗಳ ಅಗತ್ಯವಿದೆ.
ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಮರುಪರಿಶೀಲಿಸಿ, ಹೊಸ ನೀತಿ ಜಾರಿ ಮಾಡುವ ಜೊತೆಗೆ ಹಲವು ಜನ ವಿರೋಧಿ ಕಾಯ್ದೆಗಳನ್ನು ರದ್ದುಪಡಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ.
ಒಟ್ಟಿನಲ್ಲಿ ರಾಜ್ಯದ ಜನತೆಗೆ ನೆಮ್ಮದಿಯ ವಾತಾವರಣ ಸೃಷ್ಟಿಸಲು, ರೈತರ ಹಿತ ಕಾಪಾಡಲು ಹಾಗೂ ಮಕ್ಕಳ ಭವಿಷ್ಯವನ್ನು ಸುಭದ್ರಗೊಳಿಸಲು ನಾವು ಬದ್ಧರಿದ್ದೇವೆ ಎಂದು ತಿಳಿಸಿದ್ದಾರೆ.












Click it and Unblock the Notifications