"300 ರೂ. ಊಟ ಕೊಟ್ಟು 300 ಕೋಟಿ ವಸೂಲಿ ಮಾಡಿದ ಸಿದ್ದರಾಮಯ್ಯ"
ಬೆಂಗಳೂರು, ಅಕ್ಟೋಬರ್ 14: ಸಿದ್ದರಾಮಯ್ಯ ಟಾರ್ಗೆಟ್ ಫಿಕ್ಸ್ ಆಗಿದೆ. ಕರ್ನಾಟಕದ ಬೊಕ್ಕಸ ಬರಿದಾಗಿದೆ. ಇದು ಡಿನ್ನರ್ ರಾಜಕೀಯದ ಕಾರ್ಯಸೂಚಿ. 300 ರೂ. ಊಟ ಕೊಟ್ಟು 300 ಕೋಟಿ ವಸೂಲಿ ಮಾಡಿದ್ದಾರೆ ಎಂದು ಆರ್. ಅಶೋಕ್ ಅವರು ಆರೋಪಿಸಿದರು. ಬಿಹಾರಕ್ಕೆ 300 ಕೋಟಿಗೆ ಸಂಬಂಧಿಸಿ 300 ಚಿನ್ನದ ಗಟ್ಟಿಗಳು ಹೋಗಬೇಕಿತ್ತು. ಈಗ ಸಿದ್ದರಾಮಯ್ಯನವರು ಎಲ್ಲ ಸಚಿವರಿಗೆ ಒಂದೊಂದು ಚಿನ್ನದ ಗಟ್ಟಿ ಫಿಕ್ಸ್ ಮಾಡಿದ್ದಾರೆ. ಇಲಾಖೆ ಭಾರದನ್ವಯ ಕೋಟಿ ಕೋಟಿ ಕೊಟ್ಟರೆ ನೀವು ಡಿಸೆಂಬರ್‍ನಲ್ಲಿ ಸಚಿವರಾಗಿ ಇರುತ್ತೀರಿ; ಇಲ್ಲವಾದರೆ, ಜನವರಿಯಲ್ಲಿ ನೀವು ಇರುವುದಿಲ್ಲ ಎಂದು ತಿಳಿಸಿದ್ದಾರೆ. 300 ರೂ. ಊಟ ಕೊಟ್ಟು 300 ಕೋಟಿ ವಸೂಲಿ ಮಾಡಿದ್ದಾರೆ ಎಂದರು.
ಕಲಬುರ್ಗಿಯ ಗ್ರಂಥಾಲಯದ ನೌಕರಿಯಲ್ಲಿದ್ದ ಮಹಿಳೆಯದು ಆತ್ಮಹತ್ಯೆಯಲ್ಲ. ಅದು ಸರಕಾರಿ ಪ್ರಾಯೋಜಿತ ಕೊಲೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಆರೋಪಿಸಿದ್ದಾರೆ. ಈ ಅತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡುವಂತೆ ಆಗ್ರಹಿಸಿದರು. ಕಲಬುರ್ಗಿಯಲ್ಲಿ ನೌಕರರು ನ್ಯಾಯಕ್ಕಾಗಿ ಮುಷ್ಕರ ನಡೆಸುತ್ತಿದ್ದಾರೆ. ಘಟನೆಯನ್ನು ಮುಚ್ಚಿ ಹಾಕುವ ಎಸ್‍ಐಟಿ, ಆಯೋಗ ರಚಿಸುವ ಸಾಧ್ಯತೆ ಇದೆ. ಕರೂರಿನಲ್ಲಿ ಸುಮಾರು 50 ಜನ ಸತ್ತಿದ್ದರು. ಅಲ್ಲಿ ಎಸ್.ಐ.ಟಿ. ಮಾಡಿ ಆ ಸರಕಾರ ಮುಚ್ಚಿ ಹಾಕುವ ಪ್ರಯತ್ನ ಮಾಡಿತ್ತು. ಆದರೆ, ಸುಪ್ರೀಂ ಕೋರ್ಟ್ ಸಿಬಿಐ ತನಿಖೆಗೆ ನೀಡಿದೆ. ಈ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡುವಂತೆ ಒತ್ತಾಯಿಸಿದರು.

ವೇತನ ಸಿಗದೇ ಗ್ರಂಥಪಾಲಕರ ಆತ್ಮಹತ್ಯೆ, ಬಿಲ್ ಪಾವತಿ ಆಗದೇ ಗುತ್ತಿಗೆದಾರರ ಆತ್ಮಹತ್ಯೆ, ವರ್ಗಾವಣೆ ಕಮಿಷನ್ ದಂಧೆಯಲ್ಲಿ ಪೊಲೀಸ್ ಅಧಿಕಾರಿಗಳ ಆತ್ಮಹತ್ಯೆ, ನಿಗಮಗಳಲ್ಲಿ ಸರಕಾರಿ ಸಾಲ ಸಿಗದೇ ಮೈಕ್ರೋ ಫೈನಾನ್ಸ್ ಕಿರುಕುಳದಲ್ಲಿ ಬಡವರ ಆತ್ಮಹತ್ಯೆ, ಬರ ಮತ್ತು ಅತಿವೃಷ್ಟಿಯಿಂದ ಪರಿಹಾರ ಸಿಗದೇ 300ಕ್ಕೂ ಹೆಚ್ಚು ರೈತರ ಆತ್ಮಹತ್ಯೆ ಆಗಿದೆ. ಇದು ಮನೆಹಾಳರ ಸರಕಾರ. ದಿವಾಳಿ ಮಾಡಿ ಜನಸಾಮಾನ್ಯರಿಗೆ ಆತ್ಮಹತ್ಯೆ ಭಾಗ್ಯವನ್ನು ಆರನೇ ಗ್ಯಾರಂಟಿಯಾಗಿ ನೀಡಿದೆ ಎಂದು ಟೀಕಿಸಿದರು. ಇವರು ಕಾಂಗ್ರೆಸ್ಸಿನ ಸಚಿವರಲ್ಲ; ಯಮ ಕಿಂಕರರು; ಸಾವಿನ ಗ್ಯಾರಂಟಿ ಕೊಡುತ್ತಿದ್ದಾರೆ ಎಂದು ದೂರಿದರು. ಇದೊಂದು ಕೊಲೆಗಡುಕರ ಸರಕಾರ, ಈ ಸರಕಾರಕ್ಕೆ ಧಿಕ್ಕಾರ ಎಂದು ಕೂಗಿದರು.
ಕಲಬುರ್ಗಿಯ ಆ ಡೆತ್ ನೋಟ್ ಕೂಡ ಮುಚ್ಚಿ ಹಾಕಿದ್ದಾರೆ. ಕಾಂಗ್ರೆಸ್ಸಿನವರು ಎಂದಿನಂತೆ ಮನೆಗೆ ಹೋಗಿ ಹಣ ಕೊಟ್ಟು ಹೊಂದಾಣಿಕೆ ಮಾಡುವ ಪ್ರಯತ್ನ ನಡೆಸಿದ್ದಾರೆ ಎಂದು ಆಕ್ಷೇಪಿಸಿದರು. ಇದು ಪಾಪರ್ ಸರಕಾರ; ಭಿಕ್ಷಾಪಾತ್ರೆ ಹಿಡಿಯುವ ಸರಕಾರ ಎಂದು ಆರೋಪಿಸಿದರು. ಹಿಮಾಚಲ ಪ್ರದೇಶಕ್ಕಿಂತ ಅಧ್ವಾನ ಆಗಿರುವ ಸರಕಾರ ಇದು ಎಂದು ಟೀಕಿಸಿದರು. ಸರಕಾರ, ಸಿದ್ದರಾಮಯ್ಯನವರಿಗೆ ಕೂಡುವ ಕಳೆಯುವ ಲೆಕ್ಕ ಗೊತ್ತಿದ್ದರೆ ಈ ಸಾವು ಯಾಕೆ ಆಗುತ್ತಿತ್ತು ಎಂದು ಆರ್. ಅಶೋಕ್ ಅವರು ಪ್ರಶ್ನಿಸಿದರು.
ದೀಪಾವಳಿ ಬರಲಿದೆ. ಕರ್ನಾಟಕದಲ್ಲಿ ಬೆಳಕು ಮೂಡಲಿದೆ ಎಂದು ನಾವೆಲ್ಲ ತಿಳಿದುಕೊಂಡಿದ್ದೆವು. ಆದರೆ, ಕರ್ನಾಟಕವನ್ನು ಬೆಳಗಿಸುವ ದೀಪಗಳು, ಗ್ರಂಥಾಲಯಗಳು, ಜ್ಞಾನ ಭಂಡಾರಗಳು ಇವತ್ತು ಆತ್ಮಹತ್ಯೆಯ ಭಂಡಾರವಾಗುತ್ತಿವೆ. ಕಲಬುರ್ಗಿ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರು, ಮಂತ್ರಿಗಳು ಎಲ್ಲರೂ ಇರುವ ಜಿಲ್ಲೆ. ಇಲ್ಲಿನ ಗ್ರಂಥಾಲಯದಲ್ಲಿ 15 ದಿನಗಳಿಂದ ನನಗೆ ಮಾಧ್ಯಮದ ಟಿ.ವಿ. ಚಾನೆಲ್ ಬಿಲ್ ಪಾವತಿಸಿಲ್ಲ, ಪತ್ರಿಕೆಗಳಿಗೆ 15 ತಿಂಗಳಿನಿಂದ ಬಿಲ್ ಬಾಕಿ ಇದೆ. ನನ್ನ ಜೀವನ ನಡೆಸಲು, ಊಟ ಮಾಡಲು 3 ತಿಂಗಳಿನಿಂದ ಸಂಬಳ ಕೊಟ್ಟಿಲ್ಲ, ಮಗನಿಗೆ ಶಾಲೆಯಲ್ಲಿ ಶುಲ್ಕ ಕಟ್ಟಲು ಪ್ರಯತ್ನ ಮಾಡಿದಾಗ ಫೀ ಕಟ್ಟಲು ಹಣ ನೀಡಿಲ್ಲ. ಇದು ನನ್ನ ಸಾವಲ್ಲ; ಕರ್ನಾಟಕದ ಗ್ರಂಥಾಲಯಗಳಲ್ಲಿ ಕೆಲಸದಲ್ಲಿ ಇರುವ ಲಕ್ಷಾಂತರ ಜನರ ಸಾವು ಎಂಬಂತೆ ಆತ್ಮಹತ್ಯೆಗೆ ಸಂಬಂಧಿಸಿ ಡೆತ್ ನೋಟ್ ಬರೆದಿಟ್ಟು ಸಾವನ್ನಪ್ಪಿದ್ದಾರೆ.
-
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
Mining Properties: "ಕರ್ನಾಟಕದ ಗಣಿ ಸಂಪತ್ತು ಕೇರಳಂಗೆ; ಈ 'ಕಲೆಕ್ಷನ್' ಹಣ ಯಾರ ಜೇಬಿಗೆ" -
School Property: ಸರ್ಕಾರಿ ಶಾಲೆ 12 ವರ್ಷಗಳಿಂದ ಒಂದೇ ಭೂಮಿಯಲ್ಲಿದ್ದರೆ ಅದು ರಾಜ್ಯ ಸರ್ಕಾರದ ಆಸ್ತಿ: ಏನಿದು ಹೊಸ ಕಾನೂನು? -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ಬೆಂಗಳೂರಿನಲ್ಲಿ ಇಂದು ಶ್ರೀ ಎಂ ಅವರ "ಉಪನಿಷತ್ತುಗಳು ಮತ್ತು ಜೆ.ಕೃಷ್ಣಮೂರ್ತಿ" ಹೊಸ ಕೃತಿ ಬಿಡುಗಡೆ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ











Click it and Unblock the Notifications