Government Employees: ಮತ್ತೆ ಮತ್ತೆ ಸರ್ಕಾರ ನೌಕರರಿಗೆ ನಿರಾಸೆ; ಎರಡು ವರ್ಷವಾದ್ರೂ ಸಿಕ್ಕಿದ್ದು ಮಾತ್ರ ಭರವಸೆಯಷ್ಟೇ?

ಬೆಂಗಳೂರು, ಜುಲೈ 20: ರಾಜ್ಯ ಸರ್ಕಾರಿ ನೌಕರರ ಬೇಡಿಕೆ ಕುರಿತು ನಿರಂತರವಾಗಿ ಹೋರಾಟಗಳು ನಡೆಯುತ್ತಿರುತ್ತವೆ. ರಾಜ್ಯದಲ್ಲಿ ಎನ್ ಪಿಎಸ್ ರದ್ದುಗೊಳಿಸಿ ಓಪಿಎಸ್ ಜಾರಿಗೊಳಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಸರ್ಕಾರದ ವಿರುದ್ಧ ಸರ್ಕಾರಿ ನೌಕರರು ಸಿಡಿದೆದ್ದಿದ್ದಾರೆ. 2023 ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್‌ ಸರ್ಕಾರಿ ನೌಕರರ ಬೇಡಿಕೆಯನ್ನ ಈಡೇರಿಸುವುದಾಗಿ ಭರವಸೆ ನೀಡಿತ್ತು. ಆದರೆ, ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ಬರೋಬ್ಬರಿ ಎರಡು ವರ್ಷ ಪೂರೈಸಿದ್ದರು ಸರ್ಕಾರಿ ನೌಕರರಿಗೆ ಸರ್ಕಾರದಿಂದ ಭರವಸೆ ಮಾತ್ರ ಸಿಗುತ್ತಿರುವುದು ನಿರಾಸೆ ಉಂಟು ಮಾಡಿದೆ.

ಇನ್ನೂ 2006ರ ಎಪ್ರಿಲ್‌ 1ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಿಂದಿನ ಡಿಫೈನ್ಡ್ ಪಿಂಚಣಿ ಯೋಜನೆಗೆ ಒಳಪಡಿಸುವ ಕುರಿತು ರಾಜ್ಯ ಸರ್ಕಾರ ಅಧಿಕೃತ ರಾಜ್ಯಪತ್ರ ಹೊರಡಿಸಿದೆ. ಕೇಂದ್ರ ಸರ್ಕಾರವು ತನ್ನ ನೌಕರರಿಗೆ 2023ರ ಡಿಸೆಂಬರ್‌ 22ರ ಮೊದಲು ನೇಮಕಾತಿ / ನೇಮಕಾತಿಗಾಗಿ ಜಾಹೀರಾತು / ಅಧಿಸೂಚಿಸಲಾದ ಹುದ್ದೆ ಅಥವಾ ರಿಕ್ತ ಸ್ಥಾನದ ಎದುರಾಗಿ ನೇಮಕಾತಿ ಹೊಂದಿ 2004ರ ಜನವರಿ 1ರಂದು ಅಥವಾ ತದನಂತರ ಕರ್ತವ್ಯಕ್ಕೆ ಸೇರಿದ ನೌಕರರಿಗೆ ಹಿಂದಿನ ಡಿಫೈನ್ಸ್‌ ಪಿಂಚಣಿ ಯೋಜನೆಗೆ ಒಳಪಡಿಸಲು ಒಂದು ಬಾರಿಯ ಆಯ್ಕೆಯ ಅವಕಾಶವನ್ನು ಕಲ್ಪಿಸಿ ಕೇಂದ್ರ ಸರ್ಕಾರ 2023ರ ಮಾರ್ಚ್‌ 3 ರಂದು ಮಾರ್ಗಸೂಚಿ ಹೊರಡಿಸಿದೆ. ರಾಜ್ಯ ಸರ್ಕಾರದ ಸೇವೆಯಲ್ಲಿರುವ ಅಖಿಲ ಭಾರತ ಸೇವೆಗೆ ಸೇರಿದ ಅರ್ಹ ಅಧಿಕಾರಿಗಳನ್ನು ಹಿಂದಿನ ಡಿಫೈನ್ಸ್‌ ಪಿಂಚಣಿ ಯೋಜನೆಗೆ ಒಳಪಡಿಸಿ ಆದೇಶ ಹೊರಡಿಸಲಾಗಿದೆ.

Chief Minister Siddaramaiah has promised to provide old pension

ಸರ್ಕಾರ ಎರಡು ವರ್ಷವಾದರೂ ಇನ್ನೂ ಹಳೇ ಪಿಂಚಣಿ ಯೋಜನೆ ಜಾರಿ ಕುರಿತು ಕೇವಲ ಭರವಸೆಯನ್ನಷ್ಟೇ ನೀಡುತ್ತಿದೆ. ಕಳೆದ ಅಧಿವೇಶನದಲ್ಲಿಯೂ ಶೀಘ್ರದಲ್ಲಿ ಈ ಬಗ್ಗೆ ಚರ್ಚಿಸಿ ತಿರ್ಮಾನ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸದನದಲ್ಲಿ ಹೇಳಿದ್ರು, ಇನ್ನೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಸಹ ಸರ್ಕಾರಿ ನೌಕರರ ಬೇಡಿಕೆಯನ್ನ ಈಡೇರಿಸುವುದಾಗಿ ಹೇಳಿದ್ರು. ಆದರೆ, ಇದುವರೆಗೂ ಭರವಸೆಯೂ ಭರವಸೆಯಾಗಿಯೇ ಉಳಿದಿದೆ.

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ಏಳನೇ ವೇತನ‌ ಆಯೋಗದ ಶಿಫಾರಸ್ಸುಗಳನ್ನು ಯಥಾವತ್ತಾಗಿ ಜಾರಿ ಮಾಡಿದ್ದೇನೆ. ಒಪಿಎಸ್ ಜಾರಿ ಕುರಿತಾಗಿ ಸಮಿತಿ ವರದಿ ಕೊಟ್ಟ ಬಳಿಕ‌ ಸೂಕ್ತ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಮತ್ತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ. ಆರೋಗ್ಯ ಸಂಜೀವಿನಿ ಬಗ್ಗೆಯೂ ಸೂಕ್ತ ತೀರ್ಮಾನ ಆಗಿದೆ ಎಂದು ತಿಳಿಸಿದರು. ಸರ್ಕಾರಿ ನೌಕರರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಸಿದ್ದವಿದೆ. ನಿಮ್ಮ ಬೇಡಿಕೆಗಳ ಈಡೇರಿಕೆಗೆ ಸದಾ ತೆರೆದ ಮನಸ್ಸಿನಿಂದ ಇರುತ್ತೇನೆ. ಹಾಗೆಯೇ ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ ಕೆಲಸವನ್ನು , ಈ ಜವಾಬ್ದಾರಿಯನ್ನೂ ನೀವು ಪರಿಣಾಮಕಾರಿಯಾಗಿ ಜನರಿಗೆ, ಫಲಾನುಭವಿಗಳಿಗೆ ತಲುಪಿಸಿ ಎಂದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+