ಫೇಕ್ ನ್ಯೂಸ್‌ಗಳ ಮೂಲ ಪತ್ತೆ ಹಚ್ಚಿ: ಸಿಎಂ ಸಿದ್ದರಾಮಯ್ಯ ಸೂಚನೆ
ಬೆಂಗಳೂರು, ಜೂನ್ 20: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಫೇಕ್ ನ್ಯೂಸ್ ಹಾವಳಿ ಮಿತಿ ಮೀರಿದೆ. ಈ ಫೇಕ್‌ನ್ಯೂಸ್‌ಗಳ ಮೂಲಗಳನ್ನು ಪತ್ತೆ ಹಚ್ಚಿ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಿಸುತ್ತಿರುವವರನ್ನು ಗುರುತಿಸಿ ಕಾನೂನು ಕ್ರಮಕ್ಕೆ ಒಳಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಇಂದು ತಮ್ಮನ್ನು ಭೇಟಿ ಮಾಡಿದ ಗೃಹ ಸಚಿವ ಜಿ.ಪರಮೇಶ್ವರ್ ಅವರ ಜತೆಗೂ ಈ ಬಗ್ಗೆ ವಿವರವಾಗಿ ಚರ್ಚಿಸಿದ್ದಾರೆ. 2013ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಫೇಕ್ ನ್ಯೂಸ್‌ಗಳ ಹಾವಳಿ ಹೆಚ್ಚಾಗಿತ್ತು. ಈ ಬಾರಿ ಕೂಡ ಅದೇ ತಂತ್ರವನ್ನು ರಾಜಕೀಯ ವಿರೋಧಿಗಳು ಅನುಸರಿಸುತ್ತಿದ್ದಾರೆ.

ಲೋಕಸಭಾ ಚುನಾವಣೆ ಹತ್ತಿರ ಬರುತ್ತಿರುವುದರಿಂದ ಮಾಮೂಲಿಯಂತೆ ಫೇಕ್ ನ್ಯೂಸ್‌ಗಳನ್ನು ಹೆಚ್ಚೆಚ್ಚು ಸೃಷ್ಟಿಸಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುವ ಸಾಧ್ಯತೆಗಳು ಹೆಚ್ಚಾಗಿವೆ. ಹೀಗಾಗಿ ಆರಂಭದಲ್ಲೇ ಸುಳ್ಳು ಸುದ್ದಿಗಳ ಮೂಲಗಳನ್ನು ಪತ್ತೆ ಹಚ್ಚಿ ಅವುಗಳನ್ನು ಬೇರು ಸಮೇತ ಕತ್ತರಿಸುವ ಬಗ್ಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ಸೂಚಿಸಿದ್ದಾರೆ.
ಮಕ್ಕಳ ಕಳ್ಳರು, ಗೋಮಾಂಸ ಸಾಗಿಸುವವರು...ಇತ್ಯಾದಿ ಸುಳ್ಳು ಸುದ್ದಿಗಳನ್ನು ಹರಡಿಸಿ ಕಳೆದ ಬಾರಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಪ್ರಯತ್ನ ಮಾಡಿದ್ದರು. ಈ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಬಿಜೆಪಿ ಮತ್ತು ಸಂಘ ಪರಿವಾರವನ್ನು ಸ್ಪಷ್ಟವಾಗಿ ಮತ್ತು ಅಷ್ಟೆ ನಿಷ್ಠುರವಾಗಿ ತಿರಸ್ಕರಿಸಿದ್ದಾರೆ.
ಆದರೆ ದೇಶದ ಪ್ರಜಾಪ್ರಭುತ್ತದ ಉಳಿವಿಗೆ ಅತ್ಯಂತ ಮಹತ್ವದ್ದಾಗಿರುವ 2024ರ ಲೋಕಸಭಾ ಚುನಾವಣೆಗೆ ನಾವು ಸಜ್ಜಗುತ್ತಿರುವ ಹೊತ್ತಿನಲ್ಲಿ ಸುಳ್ಳು ಸುದ್ದಿ, ವದಂತಿಗಳ ಮೂಲಕ ಗುಂಪುಹಲ್ಲೆ, ಗಲಭೆಗಳನ್ನು ಸೃಷ್ಟಿಸುವ ಪ್ರಯತ್ನಗಳು ನಡೆಯಬಹುದು ಎನ್ನುವ ಸೂಚನೆಗಳೂ ಕಾಣಿಸುತ್ತಿವೆ. ಹೀಗಾಗಿ ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ.
ಕಮಿಷನರೇಟ್/ ಪ್ರಧಾನ ಕಚೇರಿಯಲ್ಲಿ ನಲ್ಲಿ ಫ್ಯಾಕ್ಟ್ ಚೆಕ್
ಈ ಹಿಂದೆ ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ಮತ್ತು ಪೊಲೀಸ್ ಪ್ರಧಾನ ಕಚೇರಿಯಲ್ಲೇ ಒಂದು ತಾಂತ್ರಿಕ ತಂಡ ಫೇಕ್ ನ್ಯೂಸ್‌ಗಳನ್ನು ಪತ್ತೆ ಹಚ್ಚಿ, ಫ್ಯಾಕ್ಟ್ಚೆಕ್ ಮಾಡಿ ಜನರನ್ನು ಎಚ್ಚರಿಸುವ, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿತ್ತು. ಆದರೆ, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಫ್ಯಾಕ್ಟ್ ಚೆಕ್ ಮಾಡುವುದನ್ನು ಬಂದ್ ಮಾಡಿಸಿದೆ. ಇದನ್ನು ಮತ್ತೆ ಆರಂಭಿಸಬೇಕು.
ಸೈಬರ್ ಪೊಲೀಸರು ಫೇಕ್ ನ್ಯೂಸ್‌ಗಳ ಮೂಲಗಳನ್ನು ಪತ್ತೆಹಚ್ಚಲು ಸರ್ವಸನ್ನದ್ದವಾಗಿ ಕೆಲಸ ಮಾಡಬೇಕು. ಪ್ರತೀ ತಿಂಗಳು ಈ ಬಗ್ಗೆ ವರದಿಯನ್ನು ನೀಡಬೇಕು ಎಂದು ಮುಖ್ಯಮಂತ್ರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
-
Siddaramaiah: ಶಿಸ್ತು, ಪ್ರಾಮಾಣಿಕತೆ ಮತ್ತು ಮಾನವೀಯತೆ ಪೊಲೀಸ್ ಸೇವೆಯ ಆಧಾರ: ಸಿದ್ದರಾಮಯ್ಯ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
ಸಕಲೇಶಪುರದಲ್ಲಿ ಫೋಟೋಗ್ರಾಫರ್ಗಳ ಮೇಲೆ ಹಲ್ಲೆ ಪ್ರಕರಣ: ದುಬಾರಿ ಕ್ಯಾಮೆರಾಗೆ ಹಾನಿ, ಆರೋಪಿಗಳ ಬಂಧನ -
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
12 ಕೋಟಿ ರೂ ಡ್ರಗ್ಸ್ ಜಪ್ತಿ: ಗಂಧದ ನಾಡು 'ಗಾಂಜಾ ಬೀಡು' ಮಾಡಿದ ಕಾಂಗ್ರೆಸ್ ಸರ್ಕಾರ; R ಅಶೋಕ -
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ











Click it and Unblock the Notifications