Get Updates
Get notified of breaking news, exclusive insights, and must-see stories!

E Khata: ಇ ಖಾತಾ ಲೋಕಾರ್ಪಣೆ; ಪೌರ ಕಾರ್ಮಿಕರಿಗೆ ನೇಮಕಾತಿ ಆದೇಶ ಮತ್ತು ಮನೆ ಹಕ್ಕು ಪತ್ರ ವಿತರಣೆ

ಬೆಳಗಾವಿ: ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯ ಹಾಗೂ ಬೆಳಗಾವಿ ಮಹಾನಗರ ಪಾಲಿಕೆ ಸಂಯುಕ್ತ ಆಶ್ರಯದಲ್ಲಿ ಸುವರ್ಣಸೌಧದಲ್ಲಿ ಇ-ಖಾತಾ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಗುರುವಾರ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಅವರು ಪೌರ ಕಾರ್ಮಿಕರಿಗೆ ನೇಮಕಾತಿ ಆದೇಶ ಪತ್ರಗಳು ಮತ್ತು ಮನೆಯ ಹಕ್ಕುಪತ್ರಗಳ ವಿತರಣೆಗೆ ಸಹ ಅವರು ಚಾಲನೆ ನೀಡಿದರು. ಸಮಾರಂಭದಲ್ಲಿ ಇ ಖಾತಾ ಕೈಪಿಡಿ ಬಿಡುಗಡೆ ಮಾಡಲಾಯಿತು.

ಇದೆ ವೇಳೆ ಬೆಳಗಾವಿಯ 127 ಪೌರ ಕಾರ್ಮಿಕರಿಗೆ ಖಾಯಂ ನೇಮಕಾತಿ ಆದೇಶ ಪತ್ರ ವಿತರಣೆ ಸಂಬಂಧ ಸಾಂಕೇತಿಕವಾಗಿ 10 ಜನರಿಗೆ ನೇಮಕಾತಿ ಆದೇಶ ಪತ್ರ ನೀಡಲಾಯಿತು. ಅದೇ ರೀತಿ ವಿಜಯಪುರದ ಪೌರ ಕಾರ್ಮಿಕರಿಗೆ ಖಾಯಂ ನೇಮಕಾತಿ ಆದೇಶ ಪತ್ರ ವಿತರಿಸಲಾಯಿತು. ಅದೇ ರೀತಿ ವಿಜಯಪುರದ ಪೌರ ಕಾರ್ಮಿಕರಿಗೆ ಗೃಹ ಭಾಗ್ಯ ಯೋಜನೆಯಡಿ 60 ಪೌರ ಕಾರ್ಮಿಕರಿಗೆ ಮನೆಯ ಸ್ವಾಧೀನ ಪ್ರಮಾಣ ಪತ್ರವನ್ನು ವಿತರಿಸಲಾಯಿತು.

Chief Minister Siddaramaiah launched the e-Khata program

ಸಮಾರಂಭದಲ್ಲಿ ವಿಧಾನ ಪರಿಷತ್ತಿನ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರು ಮಾತನಾಡಿ, ಸಾರ್ವಜನಿಕರ ಆಸ್ತಿ ದಾಖಲೆಯನ್ನು ಮತ್ತಷ್ಟು ಸುರಕ್ಷಿತಗೊಳಿಸುವ ನಿಟ್ಟಿನಲ್ಲಿ ಇ-ಖಾತಾ ಸೇವೆ ಒದಗಿಸಿದ ರಾಜ್ಯ ಸರ್ಕಾರಕ್ಕೆ ಅಭಿನಂದನೆ ತಿಳಿಸುವೆ. ನಗರಾಭಿವೃದ್ಧಿ ಮತ್ತು ನಗರ ಯೋಜನೆಯ ಸಚಿವರು ಉತ್ತಮ ಕಾರ್ಯ ಮಾಡಿದ್ದಾರೆ ಎಂದರು. ಪೌರ ಕಾರ್ಮಿಕರ ಸೇವೆ ಅತ್ಯಂತ ಅನನ್ಯವಾಗಿದ್ದು, ಅವರು ನೆಮ್ಮದಿಯಾಗಿರುವಂತೆ ಪೌರ ಕಾರ್ಮಿಕರಿಗೆ ನೇಮಕಾತಿ ಆದೇಶ ಪತ್ರ ಮತ್ತು ಮನೆಯ ಹಕ್ಕುಗಳ ಪತ್ರ ವಿತರಣೆ ಮಾಡಿರುವುದು ರಾಜ್ಯ ಸರ್ಕಾರ ಮತ್ತು ಪೌರಾಡಳಿತ ಸಚಿವರ ಉತ್ತಮ ಕಾರ್ಯಕ್ಕೆ ಸಾಕ್ಷಿಯಾಗಿದೆ ಎಂದು ತಿಳಿಸಿದರು.

ಈ ವೇಳೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಭೈರತಿ ಸುರೇಶ ಅವರು ಮಾತನಾಡಿ, ಇ-ಆಸ್ತಿ ತಂತ್ರಾಂಶದ ಮೂಲಕವೇ ಕಡ್ಡಾಯವಾಗಿ ಇ-ಖಾತಾ ನೀಡಲು 2016ರಲ್ಲಿ ಸುತ್ತೋಲೆ ಹೊರಡಿಸಲಾಗಿದೆ. ಅದರಂತೆ ರಾಜ್ಯದ 320 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಈವರೆಗೆ ಆಸ್ತಿ ಮಾಲೀಕರು ಇ-ಆಸ್ತಿ ತಂತ್ರಾಂಶದ ಮೂಲಕ ಅಂದಾಜು 29 ಲಕ್ಷ ಇ ಆಸ್ತಿಗಳಿಗೆ ಇ-ಖಾತಾ ಪಡೆದಿರುತ್ತಾರೆ. ಈ ಅಭಿಯಾನದ ಮುಂದುವರೆದ ಭಾಗವಾಗಿ ಇ-ಆಸ್ತಿ ತಂತ್ರಾಂಶವನ್ನು ಸರಳೀಕರಣಗೊಳಿಸಲಾಗಿದೆ. ಆಸ್ತಿ ಮಾಲೀಕರು ಯಾವುದೇ ಮಧ್ಯವರ್ತಿಗಳಿಲ್ಲದೇ ಹಾಗೂ ಯಾವುದೇ ಅಧಿಕಾರಿ ಸಿಬ್ಬಂದಿಯನ್ನು ಸಂಪರ್ಕಿಸದೇ ತಮ್ಮ ಮನೆಯಲ್ಲಿ ಕುಳಿತು ಸರಳವಾಗಿ ಸುಲಭವಾಗಿ ಇ-ಖಾತಾ ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ರಾಜ್ಯದ ಪೌರಕಾರ್ಮಿಕರು, ಲೋಡರ್ಸ್, ಯುಜಿಡಿ ಸಹಾಯಕರು, ಕ್ಲೀನರ್ ಗಳು ಸೇರಿದಂತೆ ನಗರ ಪ್ರದೇಶಗಳಲ್ಲಿ ಸಾರ್ವಜನಿಕ ಸೇವೆಯಲ್ಲಿ ತೊಡಗಿರುವ 6 ಸಾವಿರಕ್ಕೂ ಅಧಿಕ ಕಾರ್ಮಿಕರಿಗೆ ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ಅವರು ಹೇಳಿದರು. ಈ ಗೃಹಭಾಗ್ಯ ಯೋಜನೆಗೆ ಒಟ್ಟು 6119 ಫಲಾನುಭವಿಗಳನ್ನು ಗುರುತಿಸಲಾಗಿದೆ. ರಾಜ್ಯ ಸರ್ಕಾರ ಇದಕ್ಕಾಗಿ 326 ಕೋಟಿ ರೂಪಾಯಿಗಳ ಅನುದಾನವನ್ನು ಬಿಡುಗಡೆ ಮಾಡಿದ್ದು, ಇದುವರೆಗೆ 4159 ಮನೆಗಳ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಬೆಳಗಾವಿಯಲ್ಲಿ 172 ಮತ್ತು ವಿಜಯಪುರದಲ್ಲಿ 133 ಮನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಪೌರಕಾರ್ಮಿಕರ ವಿಶೇಷ ನೇಮಕಾತಿ: ಪೌರಕಾರ್ಮಿಕರ ಹೊರಗುತ್ತಿಗೆ ಪದ್ಧತಿಯನ್ನು 2017 ರಲ್ಲಿ ಸ್ಥಗಿತಗೊಳಿಸಿ, ಪೌರಕಾರ್ಮಿಕರನ್ನು ನೇರ ನೇಮಕಾತಿ ಮಾಡಿಕೊಳ್ಳಲು ಆದೇಶಿಸಲಾಗಿದೆ. ಕನಿಷ್ಠ 2 ವರ್ಷ ಸೇವೆ ಸಲ್ಲಿಸಿದವರಿಗೆ ವಿಶೇಷ ನೇಮಕಾತಿಯಡಿ ಅವಕಾಶ ನೀಡಲಾಗುತ್ತಿದೆ. ವಿವಿಧ ಹಂತಗಳಲ್ಲಿ ಸಾವಿರಾರು ಪೌರಕಾರ್ಮಿಕರ ನೇಮಕಕ್ಕೆ ಅನುಮತಿ ನೀಡಲಾಗಿದೆ ಎಂದು ಸಚಿವ ಬೈರತಿ ಸುರೇಶ್ ತಿಳಿಸಿದರು.

ಕಾರ್ಯಕ್ರಮದಲ್ಲಿ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ 127 ಮತ್ತು ವಿಜಯಪುರದಲ್ಲಿ 66 ಪೌರಕಾರ್ಮಿಕರಿಗೆ ನೇಮಕಾತಿ ಆದೇಶ ಪತ್ರಗಳನ್ನು ನೀಡಿರುವುದು ಸಂತಸದ ವಿಚಾರ. ಇನ್ನೂ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು ಆಯಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ರಾಜ್ಯದ ಮಹಾನಗರಪಾಲಿಕೆ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಗಣಿಕೀಕೃತ ಖಾತಾ ನೀಡುವ ಉದ್ದೇಶದಿಂದ 2016 ರಿಂದ ಇ-ಆಸ್ತಿ ತಂತ್ರಾಂಶದ ಮೂಲಕ ಇ-ಖಾತಾ ನೀಡುವ ಸೌಲಭ್ಯವನ್ನು ಜಾರಿಗೊಳಿಸಲಾಗಿದೆ. 2019 ರಿಂದ ಮಹಾನಗರಪಾಲಿಕೆಗಳಲ್ಲಿ ಇದನ್ನು ಕಡ್ಡಾಯಗೊಳಿಸಲಾಗಿದೆ. ಇದುವರೆಗೆ ರಾಜ್ಯಾದ್ಯಂತ ಸುಮಾರು 29 ಲಕ್ಷ ಇ-ಖಾತಾಗಳನ್ನು ಸೃಜಿಸಲಾಗಿದೆ. ಇದರಲ್ಲಿ 25,03,385 ಎ-ಖಾತಾ ಮತ್ತು 4,39,889 ಬಿ-ಖಾತಾಗಳು ಸೇರಿವೆ ಎಂದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+