ಕರ್ನಾಟಕದ ಸಂಸದರಿಗೆ ಸಿದ್ದರಾಮಯ್ಯ ಬರೆದ ಪತ್ರದಲ್ಲಿ ಏನಿದೆ?

ಬೆಂಗಳೂರು, ಫೆಬ್ರವರಿ 06: ಕರ್ನಾಟಕಕ್ಕೆ ಕೇಂದ್ರದಿಂದ ನಿರಂತರವಾಗಿ ಅನ್ಯಾಯವಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುದ್ದಿಗೋಷ್ಟಿ ನಡೆಸುವ ಮೂಲಕ ಅಂಕಿ ಅಂಶಗಳನ್ನ ಬಿಡುಗಡೆ ಮಾಡಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಇನ್ನೂ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ತೆರಿಗೆ ಹಂಚಿಕೆಯಿಂದ ಆಗುತ್ತಿರುವ ಅನ್ಯಾಯದ ವಿರುದ್ಧ ದೆಹಲಿಯಲ್ಲಿ ಬುಧವಾರ ಕಾಂಗ್ರೆಸ್ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದು, ಇದರಲ್ಲಿ ಭಾಗಿಯಾಗುವಂತೆ ಕರ್ನಾಟಕದ ಬಿಜೆಪಿ ಸಂಸದರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನವಿ ಮಾಡಿದ್ದಾರೆ.

Chief Minister Siddaramaiah Letter To Bjp Member Of Parliament

ಈ ಕುರಿತಾಗಿ ಲೋಕಸಭಾ ಸದಸ್ಯರು ಹಾಗೂ ರಾಜ್ಯಸಭಾ ಎಲ್ಲಾ ಸಂಸದರಿಗೆ ಪತ್ರವನ್ನ ಸಿದ್ದರಾಮಯ್ಯ ಅವರು ಬರೆದಿದ್ದು, ದೆಹಲಿ ಜಂತರ್ ಮಂತರ್ ನಲ್ಲಿ ತನ್ನ ತೆರಿಗೆ ನನ್ನ ಹಕ್ಕು ಎಂಬ ಘೋಷಣೆಯೊಂದಿಗೆ ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗಿಯಾಗಿ ರಾಜ್ಯದ ಪರವಾಗಿ ನ್ಯಾಯಕ್ಕಾಗಿ ಧ್ವನಿ ಎತ್ತುವಂತೆ ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ. ಕೇಂದ್ರ ಸರ್ಕಾರದ ಅನ್ಯಾಯದಿಂದ 2017- 10 ರಿಂದ ಈವರೆಗೆ 1,87,000 ಕೋಟಿ ಕರ್ನಾಟಕಕ್ಕೆ ನಷ್ಟ ಉಂಟಾಗಿದೆ ಎಂಬುವುದು ಕಾಂಗ್ರೆಸ್ ಆರೋಪವಾಗಿದೆ. ಈ ನಿಟ್ಟಿನಲ್ಲಿ ಪ್ರತಿಭಟನೆ ಬರುವಂತೆ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ಸಂಸದರಿಗೆ ಮನವಿ ಮಾಡಿದ್ದಾರೆ.

ಸಿದ್ದರಾಮಯ್ಯ ಸಂಸದರಿಗೆ ಬರೆದ ಪತ್ರದಲ್ಲಿ ಏನಿದೆ?

ಒಂದು ವಿಶೇಷ ಸಂದರ್ಭದಲ್ಲಿ ಈ ಪತ್ರವನ್ನು ತಮಗೆ ಬರೆಯುತ್ತಿದ್ದೇನೆ. ಕೇಂದ್ರ ಸರ್ಕಾರದಿಂದ ಆಗುತ್ತಿರುವ ನಿರಂತರ ಅನ್ಯಾಯ ಮತ್ತು ಕರ್ನಾಟಕದ ವಿಚಾರವಾಗಿ ಕೇಂದ್ರ ಸರ್ಕಾರವು ತೋರುತ್ತಿರುವ ಮಲತಾಯಿ ಧೋರಣೆಯು ತಮಗೆ ಈಗಾಗಲೇ ತಿಳಿದ ವಿಷಯವಾಗಿರುತ್ತದೆ. ಇದರ ವಿರುದ್ಧ ಪ್ರತಿಭಟಿಸಲು ಮತ್ತು ದೇಶದ ಗಮನ ಸೆಳೆಯಲು ತೀರ್ಮಾನಿಸಲಾಗಿದೆ. ರಾಜ್ಯದ ಉಪ ಮುಖ್ಯಮಂತ್ರಿಗಳು, ಎಲ್ಲ ಸಚಿವರು, ಶಾಸಕರು ಮತ್ತು ಸಂಸದರು ಸೇರಿ ದೆಹಲಿಯ ಜಂತ‌ರ್ ಮಂತರ್‌ಲ್ಲಿ ಫೆಬ್ರವರಿ, 07 ರಂದು ಒಂದು ದಿನದ ಧರಣಿ ಸತ್ಯಾಗ್ರಹವನ್ನು ನಡೆಸಲು ತೀರ್ಮಾನಿಸಿದ್ದೇವೆ.

Chief Minister Siddaramaiah Letter To Bjp Member Of Parliament

ಕರ್ನಾಟಕಕ್ಕೆ ತೆರಿಗೆ ಪಾಲಿನ ಹಂಚಿಕೆಯಲ್ಲಿ ಆಗುತ್ತಿರುವ ಭಾರೀ ಅನ್ಯಾಯ, ಬರಪರಿಹಾರ ನೀಡದಿರುವುದು, ವಿವಿಧ ಯೋಜನೆಗಳಿಗೆ ಅನುಮತಿ ಮತ್ತು ನೆರವು ನೀಡುವಲ್ಲಿ ತೋರುತ್ತಿರುವ ನಿರ್ಲಕ್ಷ್ಯ ಮತ್ತು ವಿಳಂಬ ಇತ್ಯಾದಿಗಳು ರಾಜ್ಯದಲ್ಲಿ ಜನಜೀವನವನ್ನು ವಿಪರೀತವಾಗಿ ಬಾಧಿಸುತ್ತಿವೆ. ಈ ವಿಚಾರವನ್ನು ಜವಾಬ್ದಾರಿಯುತ ಚುನಾಯಿತ ಪ್ರತಿನಿಧಿಗಳಾದ ತಾವು ಅರಿತೇ ಇರುತ್ತೀರಿ. ಆದುದರಿಂದ, ಈ ಧರಣಿ ಸತ್ಯಾಗ್ರಹದಲ್ಲಿ ತಾವು ಕೂಡಾ ಪಾಲ್ಗೊಂಡು ಅದರ ಯಶಸ್ಸಿಗೆ ನೆರವಾಗಬೇಕು ಎಂದು ತಮ್ಮಲ್ಲಿ ಕರ್ನಾಟಕದ ಸಮಸ್ತ ಜನತೆಯ ಪರವಾಗಿ ವಿನಂತಿಸುತ್ತೇನೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+