ಕುಮಾರಸ್ವಾಮಿ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಸೆಪ್ಟೆಂಬರ್ 28 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಿಸಿದರು. ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಕುಮಾರಸ್ವಾಮಿ ಅವರು ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.

ಗುರುವಾರ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಅಪೊಲೋ ಆಸ್ಪತ್ರೆಗೆ ಭೇಟಿ ನೀಡಿದರು. ಸಚಿವರಾದ ಡಿ.ಕೆ.ಶಿವಕುಮಾರ್, ಎಚ್.ಆಂಜನೇಯ ಮುಂತಾದವರು ಈ ಸಂದರ್ಭದಲ್ಲಿ ಜೊತೆಗಿದ್ದರು.

Chief Minister Siddaramaiah meets HD Kumaraswamy

ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಶೀಘ್ರ ಗುಣಮುಖರಾಗುವಂತೆ ಮುಖ್ಯಮಂತ್ರಿಗಳು ಹಾರೈಸಿದರು. ಅನಿತಾ ಕುಮಾರಸ್ವಾಮಿ ಅವರೊಂದಿಗೂ ಮಾತುಕತೆ ನಡೆಸಿದರು. ವೈದ್ಯರ ಜೊತೆ ಮಾತುಕತೆ ನಡೆಸಿ, ಕುಮಾರಸ್ವಾಮಿ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡರು.

ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ ಅವರು, 'ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಿಸಲು ಬಂದಿದ್ದೆ. ಅವರು ಆರೋಗ್ಯವಾಗಿದ್ದಾರೆ, ದಿನನಿತ್ಯದಂತೆ ಊಟ, ತಿಂಡಿ ಮಾಡುತ್ತಿದ್ದಾರೆ' ಎಂದರು.

'ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ, ಇನ್ನೂ ನಾಲ್ಕೈದು ದಿನಗಳ ಕಾಲ ಆಸ್ಪತ್ರೆಯಲ್ಲಿ ಇರಲಿದ್ದಾರೆ. ನಂತರ ಸುಮಾರು 1 ತಿಂಗಳು ವಿಶ್ರಾಂತಿ ಪಡೆಯಲಿದ್ದಾರೆ' ಎಂದು ಸಿದ್ದರಾಮಯ್ಯ ಹೇಳಿದರು.

'ರಾಜಕಾರಣ ಎಂದೂ ಇದ್ದಿದ್ದೆ, ಮೊದಲು ವಿಶ್ರಾಂತಿ ಪಡೆಯಿರಿ, ಸಂಚಾರ ನಡೆಸುವುದು ಬೇಡ ಎಂದು ಹೇಳಿದ್ದೇನೆ' ಎಂದು ಸಿದ್ದರಾಮಯ್ಯ ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+