Farmers Protest: ದೇವನಹಳ್ಳಿ ರೈತ ಹೋರಾಟರ ಜೊತೆ ಸಿದ್ದರಾಮಯ್ಯ ಸಭೆ: ಅಂತಿಮ ನಿರ್ಧಾರವೇನು?

ಬೆಂಗಳೂರು, ಜೂನ್ 4: ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಂತಿಮ ಅಧಿಸೂಚನೆಯಾಗಿದ್ದು, ಈ ಬಗ್ಗೆ ಇರುವ ಕಾನೂನು ತೊಡಕುಗಳನ್ನು ನಿವಾರಿಸಿ ರೈತರ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು(ಶುಕ್ರವಾರ) ದೇವನಹಳ್ಳಿ ಚನ್ನರಾಯಪಟ್ಟಣದ ರೈತ ಹೋರಾಟಗಾರರು, ಸ್ಥಳೀಯ ಮುಖಂಡರು ಹಾಗೂ ಹೋರಾಟ ಒಕ್ಕೂಟದ ಮುಖಂಡರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಸಂಬಂಧ ಕಾನೂನು ಸಮಸ್ಯೆ ನಿವಾರಿಸಲು ಸರ್ಕಾರಕ್ಕೆ ಹತ್ತು ದಿನಗಳ ಕಾಲಾವಾಕಾಶ ಬೇಕಿದ್ದು ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಂಡು ಜುಲೈ 15 ರಂದು ರೈತ ಹೋರಾಟಗಾರರೊಂದಿಗೆ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

Chief Minister Siddaramaiah meets with Devanahalli farmers activists

ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವುದಕ್ಕೆ ಸಂಬಂಧಿಸಿದಂತೆ ಕೆಲವು ಕಾನೂನು ತೊಡಕುಗಳಿದ್ದು, ಅದನ್ನು ಸರಿಪಡಿಸಿಕೊಳ್ಳುವ ಸಲಹೆಯನ್ನು ಕಾನೂನು ತಜ್ಞರು ನೀಡಿದ್ದಾರೆ. ಈಗಾಗಲೇ ಎಪ್ರಿಲ್ ತಿಂಗಳಲ್ಲಿ ಅಂತಿಮ ನೋಟಿಫಿಕೇಶನ್ ಅಗಿರುವ ಕಾರಣ ಅದರ ಸಾಧಕ ಬಾಧಕಗಳ ಕುರಿತು ಚರ್ಚೆ ನಡೆಸುವ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ 10ದಿನಗಳ ಕಾಲಾವಕಾಶ ಅಗತ್ಯವಿದೆ. ಈ ಕಾಲಾವಧಿಯಲ್ಲಿ ಸರ್ಕಾರಕ್ಕೆ ಒಂದು ಸ್ಪಷ್ಟ ನಿರ್ಧಾರಕ್ಕೆ ಬರಲು ಸಾಧ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಕಾನೂನು ಕಾಯ್ದೆಗೆ ವಿರುದ್ಧವಾಗಿ ಸರ್ಕಾರ ಯಾವುದೇ ಕ್ರಮಗಳನ್ನು ಕೈಗೊಳ್ಳಲು ಸಾಧ್ಯವಿಲ್ಲ. ನಿಯಮಾನುಸಾರ ಅಂತಿಮ ನೋಟಿಫಿಕೇಶ್ ಆಗಿರುವ ಕಾರಣ, ಅದರ ಕಾನೂನು ಅಂಶಗಳನ್ನು ಪರಿಶೀಲಿಸುವ ಅಗತ್ಯವಿದೆ. ಈ ಕುರಿತು ನಿನ್ನೆ ಪೂರ್ವಭಾವಿ ಸಭೆ ನಡೆಸಿದ್ದೇವೆ. ಇಂದೇ ಸರ್ಕಾರದ ನಿಲುವು ಪ್ರಕಟಿಸಲು ಸಾಧ್ಯವಿಲ್ಲ. 10ದಿನಗಳ ಬಳಿಕ ಮತ್ತೆ ಸಭೆ ನಡೆಸಿ ಸರ್ಕಾರದ ನಿಲುವು ಸ್ಪಷ್ಟಪಡಿಸಲಾಗುವುದು. ನಾವು ಪ್ರಜಾಪ್ರಭುತ್ವದಲ್ಲಿ ಮತ್ತು ಸಂವಾದದಲ್ಲಿ ನಂಬಿಕೆಯಿರುವವರು. ಪ್ರತಿಭಟನೆಗೆ ಯಾವುದೇ ಅಡ್ಡಿಪಡಿಸಿಲ್ಲ. ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಯತ್ನ ಸರ್ಕಾರ ಮಾಡಿಲ್ಲ. ನಾನೂ ರೈತ ಸಂಘದಲ್ಲಿದ್ದವನು ಎಂದು ಹೇಳಿದರು.

ಇನ್ನೂ ಎಂ ಎಲ್ ಸಿ ರವಿಕುಮಾರ್ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಯವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, ಅವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಸೂಕ್ತ ಪೊಲೀಸ್ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಸಚಿವರಾದ ಕೆ.ಎಚ್.ಮುನಿಯಪ್ಪ, ಭೈರತಿ ಸುರೇಶ್, ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್.ಪಾಟೀಲ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕಾನೂನು ಸಲಹೆಗಾರ ಪೊನ್ನಣ್ಣ, ಚಿತ್ರನಟ ಪ್ರಕಾಶ್ ರಾಜ್ ಸೇರಿದಂತೆ ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+