ಬಿಜೆಪಿ ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ?

ಬೆಂಗಳೂರು, ಅಕ್ಟೋಬರ್‌ 27: ಕೇಂದ್ರದ ಬರ ಅಧ್ಯಯನ ತಂಡಕ್ಕೂ ಕರ್ನಾಟಕದ ಪರಿಸ್ಥಿತಿ ಮನವರಿಕೆಯಾಗಿದೆ. ಆದರೆ ಇದುವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ? ಇದು ನನ್ನ ಪ್ರಶ್ನೆ ಮಾತ್ರವಲ್ಲ, ನಾಡಿನ ಆರೂವರೆ ಕೋಟಿ ಜನರ ಪ್ರಶ್ನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ರಾಜ್ಯದ 216 ತಾಲೂಕುಗಳು ಭೀಕರ ಬರದಿಂದ ಕಂಗೆಟ್ಟಿವೆ, ಈ ವರೆಗೆ ಕೇಂದ್ರದಿಂದ ನಯಾಪೈಸೆ ಪರಿಹಾರದ ಹಣ ಬಿಡುಗಡೆಯಾಗಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರೇ, ಜಗತ್ತಿನ ಕಷ್ಟ - ದು:ಖಕ್ಕೆಲ್ಲ ಮಿಡಿಯುವ ನಿಮ್ಮ 'ವಿಶಾಲ ಹೃದಯ ಕನ್ನಡಿಗರ ಬಗ್ಗೆ ಇಷ್ಟೊಂದು ಕಟುವಾಗಿರುವುದು ಯಾಕೆ? ಎಂದು ಖಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

siddaramaiah-reaction-on-drought-relief

ನಿಮ್ಮ ನೇತೃತ್ವದ ಬಿಜೆಪಿ ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ? ಇದು ನನ್ನ ಪ್ರಶ್ನೆ ಮಾತ್ರವಲ್ಲ, ನಾಡಿನ ಆರೂವರೆ ಕೋಟಿ ಜನರ ಪ್ರಶ್ನೆ. ರಾಜ್ಯದ ಪ್ರಸ್ತುತ ಬರ ಪರಿಸ್ಥಿತಿ ಉಂಟಾಗಿದ್ದು, ಒಟ್ಟು 236 ತಾಲೂಕುಗಳ ಪೈಕಿ 216 ರಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, 33,777 ಸಾವಿರ ಕೋಟಿ-ಅಂದಾಜು ನಷ್ಟವಾಗಿದೆ.

ಹೀಗಾಗಿ 17,901 ಕೋಟಿ- ಪರಿಹಾರಕ್ಕರ ಮನವಿ ಮಾಡಿದ್ದೇವೆ. ಕೇಂದ್ರದ ಬರ ಅಧ್ಯಯನ ತಂಡಕ್ಕೂ ಕರ್ನಾಟಕದ ಪರಿಸ್ಥಿತಿ ಮನವರಿಕೆಯಾಗಿದೆ. ಆದರೆ ಇದುವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಸಿದ್ದರಾಮಯ್ಯ ಅಸಮಾಧಾನ ಹೊರಹಾಕಿದ್ದಾರೆ.

2017ರಲ್ಲಿ ಬರದಿಂದ ತತ್ತರಿಸಿಹೋಗಿದ್ದ ಕರ್ನಾಟಕದ ಜನತೆ ಕೇಂದ್ರದ ನೆರವಿಗಾಗಿ ನಿಮ್ಮತ್ತ ನೋಡುತ್ತಿದ್ದರು. ಆದರೆ ನಿಮ್ಮಿಂದ ನಮಗೆ ಸಿಕ್ಕಿದ್ದು ಬಿಡಿಗಾಸು ಪರಿಹಾರ. ಪ್ರಧಾನಿ ನರೇಂದ್ರ ಮೋದಿ ಅವರೇ, ಕನ್ನಡಿಗರ ಮೇಲೇಕೆ ಈ ಮಲತಾಯಿ ಧೋರಣೆ? ನಿಮ್ಮ ನೇತೃತ್ವದ ಬಿಜೆಪಿ ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ? ಇದು ನನ್ನ ಪ್ರಶ್ನೆ ಮಾತ್ರವಲ್ಲ, ನಾಡಿನ ಆರೂವರೆ ಕೋಟಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರೇ, 2019ರಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದಾಗಿ ರಾಜ್ಯ ಸಾವು ನೋವಿನಲ್ಲಿ ಮುಳುಗಿತು, ಲಕ್ಷಾಂತರ ಕುಟುಂಬಗಳು ಮನೆ, ಆಸ್ತಿಪಾಸ್ತಿ ಕಳೆದುಕೊಂಡು ಬೀದಿಪಾಲಾದವು, ಆದರೂ ನೀವು ಕರ್ನಾಟಕಕ್ಕೆ ಬರಲಿಲ್ಲ. ರಾಜ್ಯದ ಜನರಿಗಾದ ಅಪಾರ ನಷ್ಟಕ್ಕೆ ಕೇಂದ್ರದ ನೆರವಿನ ಮೊರೆ ಹೋದರೆ ಮತ್ತೆ ಕನ್ನಡಿಗರಿಗೆ ಸಿಕ್ಕಿದ್ದು ಬಿಡಿಗಾಸು ಮಾತ್ರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+