ಡಿಸೆಂಬರ್ 15ರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಪ್ರವಾಸ

Posted By: Gururaj
Subscribe to Oneindia Kannada

ಬೆಂಗಳೂರು, ಅಕ್ಟೋಬರ್ 18 : 2018ರ ವಿಧಾನಸಭೆ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ಕರ್ನಾಟಕ ಕಾಂಗ್ರೆಸ್ ರಾಜ್ಯ ಪ್ರವಾಸದ ಯೋಜನೆ ರೂಪಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಂದು ತಿಂಗಳ ಕಾಲ ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ.

ಡಿಸೆಂಬರ್‌ನಲ್ಲಿ ರಾಜ್ಯ ಪ್ರವಾಸ ಕೈಗೊಳ್ಳುತ್ತೇನೆ ಎಂದು ಸಿದ್ದರಾಮಯ್ಯ ಹಿಂದೆಯೇ ಘೋಷಣೆ ಮಾಡಿದ್ದರು. ಈಗ ರಾಜ್ಯ ಪ್ರವಾಸದ ದಿನಾಂಕ ಘೋಷಣೆಯಾಗಿದೆ. ಡಿಸೆಂಬರ್ 15ರಿಂದ ಜನವರಿ 15ರ ತನಕ ಸಿದ್ದರಾಮಯ್ಯ ರಾಜ್ಯ ಪ್ರವಾಸ ಮಾಡಲಿದ್ದಾರೆ.

ವಿಧಾನಸಭೆ ಚುನಾವಣೆ, 15 ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ

Chief Minister Siddaramaiah state tour from December 15, 2017

ಡಿಸೆಂಬರ್ 15ರಂದು ಚಾಮರಾಜನಗರ ಜಿಲ್ಲೆಯಿಂದ ಸಿದ್ದರಾಮಯ್ಯ ರಾಜ್ಯ ಪ್ರವಾಸ ಆರಂಭಿಸಲಿದ್ದಾರೆ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೂ ಅವರು ಭೇಟಿ ನೀಡಲಿದ್ದು, ಬೀದರ್‌ನಲ್ಲಿ ರಾಜ್ಯ ಪ್ರವಾಸ ಅಂತ್ಯಗೊಳಿಸಿ, ಬೃಹತ್ ಸಮಾವೇಶ ನಡೆಸುವ ಸಾಧ್ಯತೆ ಇದೆ.

ಕೈ-ಕಮಲ ಕಿತ್ತಾಟ ಜೆಡಿಎಸ್ ಗೆ ವರದಾನ?

ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರು, ಸಂಸದರು ಸಿದ್ದರಾಮಯ್ಯ ಅವರ ಜೊತೆ ಜನರನ್ನು ಭೇಟಿ ಮಾಡಲಿದ್ದಾರೆ. ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಲಿರುವ ಸಿದ್ದರಾಮಯ್ಯ, ಮುಂದಿನ ಚುನಾವಣೆಯಲ್ಲಿ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಲಿದ್ದಾರೆ.

ರಾಹುಲ್ ಗಾಂಧಿ ಜತೆ ಚುನಾವಣೆಗೆ ರಣತಂತ್ರ ಹೆಣೆದ ಸಿಎಂ-ಪರಂ

ಬಿಜೆಪಿ ಯಾತ್ರೆ : ಕರ್ನಾಟಕ ಬಿಜೆಪಿ ನವೆಂಬರ್ 2ರಂದು 'ನವ ಕರ್ನಾಟಕ ಪರಿವರ್ತನಾ ಯಾತ್ರೆ' ಆರಂಭಿಸಲಿದೆ. ಬೆಂಗಳೂರಿನಲ್ಲಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಯಾತ್ರೆಗೆ ಚಾಲನೆ ನೀಡಲಿದ್ದಾರೆ.

ಅತ್ತ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ನವೆಂಬರ್ 1ರಿಂದ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಕುಮಾರಸ್ವಾಮಿ ಅವರ ಪ್ರವಾಸಕ್ಕಾಗಿಯೇ ಹೈಟೆಕ್ ಬಸ್ ಸಿದ್ಧವಾಗುತ್ತಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka Chief Minister Siddaramaiah will began state tour from December 15, 2017. Siddaramaiah will visit all assembly constituency of state in his one month tour.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ