ರಾಜ್ಯಸಭೆ ಚುನಾವಣೆ: ಕಾಂಗ್ರೆಸ್‌ ಮತ ಹಾಕಿದ ಎಸ್‌ ಟಿ ಸೋಮಶೇಖರ್- ಸಿದ್ದರಾಮಯ್ಯ ಹೇಳಿದ್ದೇನು?

ಬೆಂಗಳೂರು,ಫೆಬ್ರವರಿ 27: ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಶಾಸಕ ಎಸ್‌ ಸಿ ಸೋಮಶೇಖರ್‌ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಮತ ಚಲಾಯಿಸಿರುವುದು ಬಿಜೆಪಿ ಹಾಗೂ ಜೆಡಿಎಸ್‌ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ. ಇತ್ತ ಎಸ್‌ ಟಿ ಸೋಮಶೇಖರ್‌ ಕಾಂಗ್ರೆಸ್‌ ಗೆ ಮತ ಚಲಾಯಿಸಿರುವುದಕ್ಕೆ ಧನ್ಯವಾದಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಮಂಗಳವಾರ ವಿಧಾನನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಕಾಂಗ್ರೆಸ್ ನ ಅಜಯ ಮಾಕನ್, ಚಂದ್ರಶೇಖರ್ ಹಾಗೂ ಸೈಯ್ಯದ್ ನಾಸಿರ್ ಹುಸೇನ್, ಮೂರೂ ಅಭ್ಯರ್ಥಿಗಳು ಸುಲಭವಾಗಿ ಗೆಲ್ಲುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Chief Minister Siddaramaiah thanked ST Somashekhar

ಚುನಾವಣೆಗೆ ನಿಲ್ಲುವವರೆಲ್ಲಾ ಗೆಲ್ಲುತ್ತೇವೆ ಎಂದೇ ಹೇಳುವುದು. ಸೋಲುತ್ತೇವೆ ಎಂದು ಯಾರೂ ನಿಲ್ಲುವುದಿಲ್ಲ. ಆದರೆ ಅವರಿಗೆ ಎಷ್ಟು ಮತಗಳು ಬೇಕೋ ಅಷ್ಟು ಮತಗಳಿಲ್ಲ. ಅವರಿಗಿರುವುದೇ ಇರುವುದೇ 19 ಮತಗಳು. ಅದರಿಂದ ಅವರು ಅಭ್ಯರ್ಥಿಯನ್ನು ನಿಲ್ಲಿಸಬೇಕಿರಲಿಲ್ಲ. ಆದರೂ ನಿಲ್ಲಿಸಿದ್ದಾರೆ.

ನಮ್ಮ ಎಲ್ಲಾ ಶಾಸಕರು ನಿಷ್ಠೆಯಿಂದ ಕಾಂಗ್ರೆಸ್ ಪರವಾಗಿ ಮತ ಹಾಕಿದ್ದೇವೆ. ಕಾಂಗ್ರೆಸ್ ಅಭ್ಯರ್ಥಿಯೇ ಗೆಲ್ಲುವುದು. ಜೆಡಿಎಸ್ ಐದನೇ ಅಭ್ಯರ್ಥಿಯನ್ನು ನಿಲ್ಲಿಸಿದ್ದರಿಂದ ನಾವೆಲ್ಲ ಒಟ್ಟಿಗೆ ಇದ್ದು ಮತ ಹಾಕಬೇಕಾಯಿತು. ನಮ್ಮ ಶಾಸಕರಿಗೆ ಆಸೆ ಆಮಿಷಗಳನ್ನು ಒಡ್ಡುವುದು ಬೆದರಿಕೆ ಹಾಕುವುದನ್ನು ಮಾಡುತ್ತಿದ್ದರು. ಅದಕ್ಕೆ ಎಲ್ಲರೂ ಒಟ್ಟಿಗಿದ್ದು ಮತ ಚಲಾಯಿಸಿದ್ದೇವೆ ಎಂದರು.

Chief Minister Siddaramaiah thanked ST Somashekhar

ಜೆಡಿಎಸ್ ಗೆ ಆತ್ಮಸಾಕ್ಷಿ ಎನ್ನುವುದೇ ಇಲ್ಲ. ಜೆಡಿ ಎಸ್ ಎಂದು ಹೆಸರಿಟ್ಟುಕೊಂಡು ಬಿಜೆಪಿ ಜೊತೆ ಸೇರಿರುವವರಿಗೆ ಆತ್ಮ ಎಲ್ಲಿದೆ? ಎಂದು ಪ್ರಶ್ನಿಸಿದರು. ನಮ್ಮ ಸರ್ಕಾರದ ಬಗ್ಗೆ ಒಳ್ಳೆ ಅಭಿಪ್ರಾಯ ಇರುವ ಬೇರೆ ಪಕ್ಷದ ಮತಗಳೂ ಬರಬಹುದು ಎಂದರು.

ನಮಗೆ ಸಾಕಷ್ಟು ಮತಗಳಿರುವಾಗ ಆಸೆ ಆಮಿಷ ಒಡ್ಡುವ ಪ್ರಮೇಯ ಎಲ್ಲಿದೆ. ನಮಗೆ 136 ಮತಗಳಿವೆ. ಸ್ವತಂತ್ರ ಅಭ್ಯರ್ಥಿ ಲತಾ ಪ್ರಕಾಶ್, ಮಲ್ಲಿಕಾರ್ಜುನ ಹಾಗೂ ದರ್ಶನ್ ಪುಟ್ಟಣ್ಣಯ್ಯ, ಪುಟ್ಟಸ್ವಾಮಿ ಗೌಡ ಹಾಗೂ ಜನಾರ್ದನ ರೆಡ್ಡಿ ಇವರ ಮತಗಳಿದ್ದ ಮೇಲೆ ಆಸೆ ಆಮಿಷ ಒಡ್ಡುವ ಪ್ರಮೇಯ ಎಲ್ಲಿದೆ. ಆಮಿಷ, ಬೆದರಿಕೆ ಒಡ್ಡುತ್ತಿರುವವರು ಜೆಡಿಎಸ್ ಹಾಗೂ ಬಿಜೆಪಿಯವರು ಎಂದರು.

ಜೆಡಿಎಸ್ ಹಾಗೂ ಬಿಜೆಪಿ ಕಾಂಗ್ರೆಸ್ ನಿಂದ ಅಡ್ಡ ಮತದಾನದ ನಿರೀಕ್ಷೆ ಯಲ್ಲಿವೆ ಎಂದು ಮಾಧ್ಯಮಗಳ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಅವರು ಉತ್ತರಿಸಿ, ತಮ್ಮ ಶಾಸಕರನ್ನು ಭದ್ರವಾಗಿತ್ತುಕೊಳ್ಳಲಿ. ಅಡ್ಡಮತದಾನ ಬಿಜೆಪಿ ಯಲ್ಲಿ ಮಾತ್ರ ಸಾಧ್ಯ ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+