Women's Day : ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಗೆ ಸಿಎಂ ಸಿದ್ದರಾಮಯ್ಯ ಶುಭ ಕೋರಿದ್ದು ಹೀಗೆ
ಬೆಂಗಳೂರು, ಮಾರ್ಚ್ 08: ವಿಶ್ವಾದ್ಯಂತ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಇಂದು(ಮಾರ್ಚ್ 08) ಆಚರಿಸಲಾಗುತ್ತಿದ್ದು, ವಿಶ್ವ ಮಹಿಳಾ ದಿನಾಚರಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭಾಶಯ ಕೋರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೆಣ್ಣೆಂದರೆ ಸಹನೆ, ಸಹಿಷ್ಣುತೆ, ಪ್ರೀತಿ, ತ್ಯಾಗ, ಮಮತೆಯ ಸಾಕಾರ ಮೂರ್ತಿ. ತಾಯಾಗಿ ಜನ್ಮ ಕೊಟ್ಟು, ಸಹೋದರಿಯಾಗಿ ಸಲಹಿ, ಹೆಂಡತಿಯಾಗಿ ಜೊತೆನಿಂತು, ಮಗಳಾಗಿ ಪೊರೆಯುವವಳು ಹೆಣ್ಣು. ಅವಕಾಶ ದೊರೆತರೆ ಹೆಣ್ಣು ಏನೆಲ್ಲಾ ಸಾಧಿಸಬಲ್ಲಳು ಎಂಬುದು ಇಂದು ನಮ್ಮ ಕಣ್ಣ ಮುಂದಿದೆ. ಅಂತಾರಾಷ್ಟ್ರೀಯ ಮಹಿಳಾ ದಿನದ ಈ ಸಂದರ್ಭದಲ್ಲಿ ದೌರ್ಜನ್ಯ, ಅಸಮಾನತೆಗಳ ವಿರುದ್ಧದ ಮಹಿಳೆಯರ ದನಿಗೆ ನಾವು - ನೀವೆಲ್ಲರೂ ದನಿಗೂಡಿಸೋಣ. ನಾಡಿನ ಸಮಸ್ತ ಮಹಿಳೆಯರಿಗೆ ಮಹಿಳಾ ದಿನದ ಶುಭಾಶಯಗಳು.
ಇನ್ನೂ ಬೆಂಗಳೂರು, ಮಾರ್ಚ್ 07: 2025-26ನೇ ಸಾಲಿನ ಬಜೆಟ್ ಗಾತ್ರ 4,09,549 ಕೋಟಿಯಾಗಿದ್ದು, ಮೊದಲ ಬಾರಿಗೆ ರಾಜ್ಯದ ಆಯವ್ಯಯ ಗಾತ್ರ 4 ಲಕ್ಷ ಕೋಟಿ ರೂ.ಗಳ ಗಡಿ ದಾಟಿರುವುದು ಒಂದು ಹೊಸ ಮೈಲಿಗಲ್ಲು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. 2025-26 ನೇ ಸಾಲಿನ ಮುಂಗಡ ಪತ್ರವನ್ನು ಮಂಡಿಸಲಾಗಿದ್ದು, ಕರ್ನಾಟಕ ಸರ್ಕಾರ ಕಳೆದ ಸಾಲಿನಲ್ಲಿ 3,71,121 ಕೋಟಿ ಬಜೆಟ್ ಮಂಡಿಸಿತ್ತು. ಈ ಬಾರಿಯ ಬಜೆಟ್ ಗಾತ್ರ 4,09,549 ಕೋಟಿಯಾಗಿದೆ. ಮೊದಲ ಬಾರಿಗೆ ನಮ್ಮ ರಾಜ್ಯದ ಆಯವ್ಯಯ ಗಾತ್ರ 4 ಲಕ್ಷ ಕೋಟಿ ರೂ.ಗಳ ಗಡಿ ದಾಟಿರುವುದು ಒಂದು ಹೊಸ ಮೈಲಿಗಲ್ಲು. ಕಳೆದ ಬಾರಿಗಿಂತ ಈ ಬಾರಿ 38166 ಕೋಟಿ ರೂ.ಗಳು ಹೆಚ್ಚಾಗಿದೆ. ಬಜೆಟ್ ನ ಬೆಳವಣಿಗಯ ದರ 10.3 ರಷ್ಟು ಹೆಚ್ಚಳವಾಗಿದೆ.

ಕಳೆದ ವರ್ಷ ರಾಜಸ್ವ ಸ್ವೀಕೃತಿಗಳು, 263178 ಕೋಟಿ ಇದ್ದು ಈ ಬಾರಿ 2,92,477 ಕೋಟಿ ರೂ. ಇದೆ. 2024-25ರ ಆಯವ್ಯಯಕ್ಕೆ ಹೋಲಿಸಿದರೆ 29,299 ಕೋಟಿ ಹೆಚ್ಚಾಗಿದೆ -ಬೆಳವಣಿಗೆ ದರ 11.1 % ರಷ್ಟಿದೆ. 2024-25ರ ರಲ್ಲಿ ರಾಜಸ್ವ ವೆಚ್ಚ 2,90,531 ಕೋಟಿ ಇದ್ದದ್ದು, 2025-26ರಲ್ಲಿ 3,11,739 ಕೋಟಿ , 2024-25ರ ಆಯವ್ಯಯಕ್ಕೆ ಹೋಲಿಸಿದರೆ 21,207 ಕೋಟಿ ಹೆಚ್ಚಳ-ಬೆಳವಣಿಗೆ ದರ 7.3 % ರಷ್ಟಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
2024-25ರಲ್ಲಿ ಸಾಲ 1,05,246 ಕೋಟಿ , ಈ ವರ್ಷ ಸಾಲ 1,16,000 ಕೋಟಿ , 2024-25ರ ಆಯವ್ಯಯಕ್ಕೆ ಹೋಲಿಸಿದರೆ 10,754 ಕೋಟಿ ಹೆಚ್ಚಳವಾಗಿದೆ(10.2% ರಷ್ಟು ಹೆಚ್ಚಳ). ಇದಕ್ಕೆ ವಿರೋಧಪಕ್ದದವರು ಟೀಕಿಸುತ್ತಾರೆ . ನಮಗೆ ಸಾಲ ಮಾಡುವ ಅವಕಾಶವೆಷ್ಟಿದೆ. ಆರ್ಥಿಕ ಹೊಣಗಾರಿಕೆ ಅಧಿನಿಯಮದ ಮಾನದಂಡದಂತೆ, ಸಾಲದ ಮೊತ್ತ GSDP ಯ ಶೇ.25 ರಷ್ಟಿರಬೇಕು, ರಾಜ್ಯ ಶೇ.24.91 ರಷ್ಟರ ಮಿತಿಯಲ್ಲಿದೆ. ವಿತ್ತೀಯ ಕೊರತೆಯನ್ನು GSDPಯ ಶೇ.3 ರಷ್ಟುನ್ನು ಮೀರಬಾರದೆಂದಿದ್ದು, 2.95 % ರಷ್ಟಿದೆ ಎಂದರು.












Click it and Unblock the Notifications