Siddaramaiah Health Update: ಸಿದ್ದರಾಮಯ್ಯ ಆರೋಗ್ಯದಲ್ಲಿ ಚೇತರಿಕೆ: ಈಗ ಆರೋಗ್ಯ ಸ್ಥಿತಿ ಹೇಗಿದೆ?

ಬೆಂಗಳೂರು, ಫೆಬ್ರವರಿ 11: ಎಡಗಾಲಿನ ಮಂಡಿಯಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಗಾದರು. ಮಂಡಿನೋವು ಹಿನ್ನೆಲೆಯಲ್ಲಿ ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿಕಿತ್ಸೆ ಬಳಿಕ ಇದೀಗ ಚೇತರಿಸಿಕೊಂಡಿದ್ದಾರೆ.

ಅನಾರೋಗ್ಯದ ಸಮಸ್ಯೆಯಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಲವು ಕಾರ್ಯಕ್ರಮಗಳನ್ನ ರದ್ದುಗೊಳಿಸಿದ್ದರು. ಅಲ್ಲದೇ ಮಾರ್ಚ್‌ ತಿಂಗಳಲ್ಲಿ ಬಜೆಟ್‌ ಇರುವುದರಿಂದ ಸಿದ್ದರಾಮಯ್ಯ ಅವರು ಇಲಾಖೆಯ ಅಧಿಕಾರಿಗಳು ಹಾಗೂ ಸಚಿವರುಗಳ ಜೊತೆಗೆ ಇಷ್ಟು ದಿನ ಕಾವೇರಿ ನಿವಾಸದಲ್ಲಿ ಬಜೆಟ್ ಪೂರ್ವಭಾವಿ ಸಭೆ ನಡೆಸಿದ್ದರು. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಸಿದ್ದರಾಮಯ್ಯ ಅವರು ಇಂದು ಬಹಿರಂಗ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

Chief Minister Siddaramaiah s health is improving

ಕೆಲ ದಿನಗಳ ಹಿಂದೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತಪಾಸಣೆ ನಡೆಸಿದ ವೈದ್ಯರು, ಸಿದ್ದರಾಮಯ್ಯ ಅವರಿಗೆ ಈ ಹಿಂದೆ ಲೆಗಮೆಂಟ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಆದರೆ ಇದೀಗ ಅದೇ ಜಾಗದಲ್ಲಿ ಒತ್ತಡ ಬಿದ್ದಿರುವುದರಿಂದ ನೋವು ಹೆಚ್ಚಾಗಿದೆ. ಉಳಿದಂತೆ ಯಾವುದೇ ಸಮಸ್ಯೆ ಇಲ್ಲ. ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚನೆ ನೀಡಿದ್ದರು.

ಹೀಗಾಗಿ ಇಷ್ಟು ದಿನ ವಿಶ್ರಾಂತಿ ಪಡೆದ ನಂತರ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಹಿರಂಗ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೂಡಿಕೆದಾರರ ಸಮಾವೇಶದಲ್ಲಿ ಭಾಗಿಯಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ವೈದ್ಯರಾದ ಡಾ.ಸತ್ಯನಾರಾಯಣ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಆರೋಗ್ಯ ತಪಾಸಣೆ ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಂಡಿನೋವು ಹಿನ್ನೆಲೆ ನೀ ಪ್ಯಾಡ್ ಹಾಕಲಾಗಿದೆ. ಸದ್ಯ ಅವರು ವಿಶ್ರಾಂತಿ ಪಡೆಯಲೇಬೇಕು ಎಂದು ವೈದ್ಯರು ಸಲಹೆ ನೀಡಿದ್ದಾರೆ.

ಇನ್ನೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದ ಕುರಿತು ಸಚಿವ ಎಂ.ಸಿ.ಸುಧಾಕರ್ ಅವರು ಮಾತನಾರಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೊಣಕಾಲಿಗೆ ಗಂಭೀರವಾದ ಗಾಯವಾಗಿದೆ. ಹಾಗಾಗಿ ವಿಶ್ರಾಂತಿ ಪಡೆಯಲು ವೈದ್ಯರು ಹೇಳಿದ್ದಾರೆ. ಇಂದು ಬೆಳಿಗ್ಗೆ ಸ್ನಾನದ ಮನೆಯಲ್ಲಿ ಅವರು ಕಾಲು ಜಾರಿ ಬಿದ್ದಿದ್ದಾರೆ. ಬಳಿಕ ನಾವೆಲ್ಲ ಸಿದ್ದರಾಮಯ್ಯ ಅವರುನ್ನು ಕಾರಿನಲ್ಲಿ ಆಸ್ಪತ್ರೆಗೆ ಕಳಿಸಿಕೊಟ್ಟೆವು. ಆಸ್ಪತ್ರೆಯಲ್ಲಿ ಸಿದ್ದರಾಮಯ್ಯ ಅವರ ಮೊಣಕಾಲು ಸ್ಕ್ಯಾನ್ ಕೂಡ ಮಾಡಲಾಗಿದೆ ಎಂದು ಹೇಳಿದ್ದಾರೆ.

ಮಂಡಿ ನೋವಿನ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿಗದಿಯಾಗಿದ್ದ ಕಾರ್ಯಕ್ರಮಗಳೆಲ್ಲವೂ ಸಹ ರದ್ದಾಗಿದೆ. ಈ ಹಿಂದೆಯೂ ಕೂಡ ಸಿಎಂ ಸಿದ್ದರಾಮಯ್ಯ ಅವರು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿಮ ಹೊಸೂರು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಹಾಗೂ ಡಾ.ಎಚ್.ನರಸಿಂಹಯ್ಯ ಜನ್ಮಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕಿತ್ತು. ಮಂಡಿನೋವು ಕಾಣಿಸಿಕೊಂಡ ಕಾರಣ ಅವರು ಕಾರ್ಯಕ್ರಮಕ್ಕೆ ಹೋಗಲಿಲ್ಲ. ಇನ್ನೂ ಮುಂದಿನ ತಿಂಗಳು ಬಜೆಟ್‌ ಹಿನ್ನೆಲೆ ಸಚಿವರು ಹಾಗೂ ಅಧಿಕಾರಿಗಳ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ನಡೆಸುತ್ತಿದ್ದು, ಇಂದು ಒಂದು ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅವರು ಭಾಗಿಯಾಗಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+