ಜಾತಿ ಗಣತಿ ವರದಿ ಜಾರಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದೇನು?

ಕೊಪ್ಪಳ, ಅಕ್ಟೋಬರ್ 4: ಜಾತಿ ಗಣತಿ ವರದಿಯನ್ನು ಸ್ವೀಕರಿಸಿದ್ದು , ವರದಿಯನ್ನು ಇಲಾಖೆ ಸಚಿವರೊಂದಿಗೆ ಮತ್ತು ಸಂಪುಟ ಸಭೆಯಲ್ಲಿರಿಸಿ ಚರ್ಚೆ ನಡೆಸಿದ ನಂತರ ಅದರ ಜಾರಿ ಮಾಡುವ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಜಾತಿ ಗಣತಿ ಜಾರಿ ಮಾಡುವ ಬಗ್ಗೆ ಶಾಸಕ ಬಸವರಾಜ ರಾಯರೆಡ್ಡಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ರಾಯರೆಡ್ಡಿಯವರು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ. ಮುಂದಿನ ವಾರ ಹಿಂದುಳಿದ ವರ್ಗಗಳ ಇಲಾಖಾ ಸಚಿವರ ಜೊತೆ ಚರ್ಚೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

Chief Minister Siddaramaiah s Reaction On The Implementation Of The Caste Census Report

ಒಳಮೀಸಲಾತಿ ಜಾರಿ ತರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ , ಒಳಮೀಸಲಾತಿ ಜಾರಿಯ ಬಗ್ಗೆ ಸರ್ವೋಚ್ಛ ನ್ಯಾಯಾಲಯ ಆದೇಶ ನೀಡಿದೆ. ಈ ಸಂಬಂಧ ಸಚಿವ ಸಂಪುಟದಲ್ಲಿ ಹಾಗೂ ಪಕ್ಷದ ವರಿಷ್ಠರೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಹೇಳಿದರು.

ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡು, ಸಿದ್ದರಾಮಯ್ಯನವರ ಪರವಾಗಿ ಬ್ಯಾಟಿಂಗ್ ಮಾಡಿದ ಬಗ್ಗೆ ಕೇಂದ್ರ ಸಚಿವ ಕುಮಾರಸ್ವಾಮಿಯವರು ಟೀಕೆ ಮಾಡಿರುವುದಕ್ಕೆ ಪ್ರತಿಕ್ರಿಯೆ ನೀಡಿ, ಜಿ.ಟಿ.ದೇವೇಗೌಡರು ಅವರು ಜೆಡೆಎಸ್ ಪಕ್ಷದ ಕೋರ್ ಕಮಿಟಿ ಅಧ್ಯಕ್ಷರಾಗಿದ್ದು,ಹೇಳಿಕೆ ಸರಿಯಾಗಿಯೇ ಇರುತ್ತದೆ. ಭಾಜಪ ಮತ್ತು ಜೆಡಿಎಸ್ ನವರಿಗೆ ನಾನು ಅಧಿಕಾರದಲ್ಲಿದ್ದರೆ , ಅವರ ಪಕ್ಷಗಳು ದುರ್ಬಲವಾಗುವ ಭಯ ಅವರನ್ನು ಕಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸಚಿವ ಸತೀಶ್ ಜಾರಕಿಹೊಳಿಯವರು ಪಕ್ಷದ ವರಿಷ್ಠರನ್ನು ಭೇಟಿಯಾಗಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತರಿಸಿ, ಎಐಸಿಸಿ ಅಧ್ಯಕ್ಷರಾಗಿರುವ ಖರ್ಗೆಯವರನ್ನು ಪಕ್ಷದಲ್ಲಿ ಸಚಿವರಾಗಿರುವ ಸತೀಶ್ ಜಾರಕಿಹೊಳಿಯವರು ಭೇಟಿಯಾಗುವುದು ತಪ್ಪೇನಲ್ಲ. ಇಲ್ಲಸಲ್ಲದ ಊಹಾಪೋಹಗಳಿಗೆ ಅವಕಾಶ ನೀಡಬಾರದು ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+