ಸಂಪುಟ ವಿಸ್ತರಣೆ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಹೇಳಿಕೆ!
ಬೆಂಗಳೂರು, ನ. 18: ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ದೆಹಲಿಗೆ ತೆರಳುತ್ತಿದ್ದಾರೆ. ಇಂದು (ನ.18) ದೆಹಲಿಯಲ್ಲಿ ಯಡಿಯೂರಪ್ಪ ಅವರು ಹೈಕಮಾಂಡ್ ಭೇಟಿ ಮಾಡಲಿದ್ದಾರೆ. ವಿಧಾನಸೌಧದಲ್ಲಿ ಸಚಿವ ಸಂಪುಟ ಸಬೆಯ ಬಳಿಕ ವಿಶೇಷ ವಿಮಾನದಲ್ಲಿ ತೆರಳಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆ ಮಾಡಲಿದ್ದಾರೆ.
ಯಡಿಯೂರಪ್ಪ ಅವರ ದೆಹಲಿ ಭೇಟಿ ಹಿನ್ನೆಲೆಯಲ್ಲಿ ಸಚಿವ ಸ್ಥಾನ ಆಕಾಂಕ್ಷಿಗಳಲ್ಲಿ ಆಸೆ ಗರಿಗೆದರಿದೆ. ಇದೇ ಹಿನ್ನೆಲೆಯಲ್ಲಿ ಸಚಿವ ಸ್ಥಾನದ ಹಲವು ಆಕಾಂಕ್ಷಿಗಳು ಅಧಿಕೃತ ನಿವಾಸ ಕಾವೇರಿಯಲ್ಲಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
ಕೊನೆಗೂ ಲಿಂಗಾಯತ ಸಮುದಾಯದ ಒತ್ತಡಕ್ಕೆ ಮಣಿದ ಯಡಿಯೂರಪ್ಪ!
ಈ ಹಿಂದೆಯೆ ಸಂಪುಟ ವಿಸ್ತರಣೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೈಕಮಾಂಡ್ ಅನುಮತಿ ಕೇಳಿದ್ದರು. ಆದರೆ ಉಪ ಚುನಾವಣೆ, ಮಳೆಗಾಲದ ಅಧಿವೇಶನ ಹಾಗೂ ಬಿಹಾರ ಚುನಾವಣೆ ಹಿನ್ನೆಲೆಯಲ್ಲಿ ಅನುಮತಿ ಸಿಕ್ಕಿರಲಿಲ್ಲ. ಇದೀಗ ಹೈಕಮಾಂಡ್ ಏನು ಹೇಳುತ್ತದೆ ಎಂಬುದರ ಮೇಲೆ ಸಂಪುಟ ವುಸ್ತರಣೆ ಅಥವಾ ಪುನರ್ ರಚನೆ ನಡೆಯಲಿದೆ. ಇದೇ ಸಂದರ್ಭದಲ್ಲಿ ಸಂಪುಟ ವಿಸ್ತರಣೆ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ.

ಉಪ ಚುನಾವಣೆಯಲ್ಲಿ ಭರ್ಜರಿ ಜಯ
ಇದೀಗ ಉಪ ಚುನಾವಣೆಯಲ್ಲಿ ಭರ್ಜರಿ ಜಯದ ಬಳಿಕ ಹೈಕಮಾಂಡ್ ಭೇಟಿಗೆ ಯಡಿಯೂರಪ್ಪ ಅವರು ತೆರಳುತ್ತಿದ್ದಾರೆ. ಉಪ ಚುನಾವಣೆಯಲ್ಲಿ ಎರಡೂ ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಪಕ್ಷದೊಳಗೆ ಹಾಗೂ ಪಕ್ಷದ ಹೊರಗಿನ ವೈರಿಗಳಿಗೆ ಯಡಿಯೂರಪ್ಪ ಅವರು ಖಡಕ್ ಸಂದೇಶ ರವಾನಿಸಿದ್ದಾರೆ. ಇದೀಗ ನಾಯಕತ್ವ ಬದಲಾವಣೆಯ ಮಾತನ್ನು ಯಾರೂ ಆಡದಂತಾಗಿದೆ. ಹೀಗಾಗಿ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಅನುಮತಿ ಕೊಡುವ ಸಾಧ್ಯತೆಗಳು ಹೆಚ್ಚಿವೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ಅವರು ಮಹತ್ವದ ಹೇಳಿಕೆ ಕೊಟ್ಟಿದ್ದಾರೆ.

ಸಿಎಂ ಯಡಿಯೂರಪ್ಪ ಮಹತ್ವದ ಹೇಳಿಕೆ
ಇಂದು (ನ.18) ಸಂಪುಟ ಸಭೆಯ ಬಳಿಕ ವಿಶೇಷ ವಿಮಾನದಲ್ಲಿ ಸಿಎಂ ಯಡಿಯೂರಪ್ಪ ಅವರು ದೆಹಲಿಗೆ ತೆರಳಲಿದ್ದಾರೆ. ದೆಹಲಿಗೆ ತೆರಳಿದ ಬಳಿಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಡಿ ಚರ್ಚಿಸಲಿದ್ದಾರೆ. ಇದೇ ವಿಚಾರಕ್ಕೆ ಅಧಿಕೃತ ನಿವಾಸ ಕಾವೇರಿಯಲ್ಲಿ ಯಡಿಯೂರಪ್ಪ ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ.
ಇಂದು ದೆಹಲಿಗೆ ಹೋಗಿ ಹೈಕಮಾಂಡ್ ಭೇಟಿ ಮಾಡುತ್ತೇನೆ. ಸಂಪುಟ ವಿಸ್ತರಣೆ ಆಗಲಿದೆಯೊ? ಅಥವಾ ಸಂಪುಟ ಪುನರ್ ರಚನೆ ಆಗಲಿದೆಯಾ ಎಂಬುದು ಹೈಕಮಾಂಡ್ ಭೆಟಿ ಬಳಿಕ ಗೊತ್ತಾಗಲಿದೆ. ಈ ಬಗ್ಗೆ ಹೈಕಮಾಂಡ್ ಜೊತೆ ಚರ್ಚಿಸಿ ಅಂತಿಮ ತೀರ್ಮಾನ ಮಾಡಲಾಗುವುದು ಎಂದು ಸಿಎಂ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.

ಆಕಾಂಕ್ಷಿಗಳಿಂದ ಯಡಿಯೂರಪ್ಪ ಭೇಟಿ
ಯಡಿಯೂರಪ್ಪ ಅವರುಬ ದೆಹಲಿಗೆ ತೆರಳುವುದು ಖಚಿತವಾಗುತ್ತಿದ್ದಂತೆಯೆ ಸಚವ ಸ್ಥಾನದ ಆಕಾಂಕ್ಷಿಗಳು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಜೊತೆಗೆ ಸಂಪುಟ ಪುನರ್ ರಚನೆ ಆದರೂ ಆಗಬಹುದು ಎಂಬ ಹಿನ್ನೆಲೆಯಲ್ಲಿ ಹಲವು ಸಚಿವರೂ ಭೇಟಿ ಮಾಡಿದ್ದಾರೆ.
ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ ಶಾಸಕ ಉಮೇಶ್ ಕತ್ತಿ ಅವರು ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚೆ ಮಾಡಿದ್ದಾರೆ. ಸಂಪುಟದಿಂದ ಕೈಬಿಡುವ ಹೆಸರುಗಳ ಪಟ್ಟಿಯಲ್ಲಿ ಸಿ ಸಿ ಪಾಟೀಲ್ ಹೆಸರೂ ಇದೆ ಎನ್ನಲಾಗಿದೆ. ಅವರೂ ಸಿಎಂ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಇದಲ್ಲದೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಕೃಷಿ ಸಚಿವ ಬಿ.ಸಿ. ಪಾಟೀಲ್, ಡಿಸಿಎಂ ಲಕ್ಷ್ಮಣ ಸವದಿ ಅವರು ಸಿಎಂ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

ಸಿಎಂ ಅಭಿನಂದಿಸಿದ ಲಿಂಗಾಯತ ಸಚಿವರು
'ಕರ್ನಾಟಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ' ರಚನೆ ಹಿನ್ನೆಲೆಯಲ್ಲಿ ಲಿಂಗಾಯತ ಸಮುದಾಯದ ಸಚಿವರು ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಅಭಿನಂದಿಸಿದ್ದಾರೆ. ಒಂದೆಡೆ ಲಿಂಗಾಯತ ಅಭಿವೃದ್ಧಿ ನಿಗಮದ ರಚನೆಗೆ ವಿರೋಧ ವ್ಯಕ್ತವಾಗಿದೆ. ಮತ್ತೊಂದೆಡೆ ಇದೇ ಸಂದರ್ಭದಲ್ಲಿ ಸಂಪುಟ ವಿಸ್ತರಣೆಗೆ ಒತ್ತಡಗಳು ಹೆಚ್ಚಾಗಿವೆ. ದೆಹಲಿ ಹೈಕಮಾಂಡ್ ಯಡಿಯೂರಪ್ಪ ಅವರಿಗೆ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ಕೊಡಲಿದೆಯಾ ಎಂಬುದು ಕುತೂಹಲ ಮೂಡಿಸಿದೆ.