ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸದನದಲ್ಲಿ ಕುಮಾರಸ್ವಾಮಿ ಪರ ಬ್ಯಾಟ್ ಬೀಸಿದ ಸಿಎಂ ಯಡಿಯೂರಪ್ಪ

|
Google Oneindia Kannada News

ಬೆಂಗಳೂರು, ಫೆ 5: ಜೆಡಿಎಸ್ ಮತ್ತು ಬಿಜೆಪಿ ನಡುವೆ ಹೊಂದಾಣಿಕೆಯ ಸುದ್ದಿಯ ನಡುವೆ, ಮುಖ್ಯಮಂತ್ರಿ ಯಡಿಯೂರಪ್ಪನವರು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರ ಪರವಾಗಿ ಸದನದಲ್ಲಿ ಮಾತನಾಡಿದರು.

ಹಾಲೀ ಅಧಿವೇಶನದ ಕೊನೆಯ ದಿನವಾದ ಶುಕ್ರವಾರ (ಫೆ 5) ಸುದೀರ್ಘ ಭಾಷಣ ಮಾಡಿದ ಯಡಿಯೂರಪ್ಪ ಹಲವು ವಿಚಾರಗಳನ್ನು ಪ್ರಸ್ತಾವಿಸುತ್ತಾ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡರು.

ಕುತೂಹಲ ಮೂಡಿಸಿದ ಸಿದ್ದರಾಮಯ್ಯ ಹೇಳಿಕೆ: ಸಿಎಂ ಸ್ಥಾನದಿಂದ ಯಡಿಯೂರಪ್ಪ ಬದಲಾವಣೆ ಖಚಿತ?ಕುತೂಹಲ ಮೂಡಿಸಿದ ಸಿದ್ದರಾಮಯ್ಯ ಹೇಳಿಕೆ: ಸಿಎಂ ಸ್ಥಾನದಿಂದ ಯಡಿಯೂರಪ್ಪ ಬದಲಾವಣೆ ಖಚಿತ?

ಮೀಸಲಾತಿ ಸಂಬಂಧಿಸಿದಂತೆ ಸ್ವಪಕ್ಷೀಯ ಬಸನಗೌಡ ಪಾಟೀಲ್ ಯತ್ನಾಳ್ ಅವರಿಂದ ಮುಜುಗರಕ್ಕೆ ಒಳಗಾದರೂ, ಮುಖ್ಯಮಂತ್ರಿಗಳು ಅವರ ಪ್ರಶ್ನೆಗೂ ಉತ್ತರಿಸಿದರು. ತಮಗೆ ಪ್ರಧಾನಿ ಮತ್ತು ಕೇಂದ್ರ ಗೃಹಸಚಿವರ ಬೆಂಬಲವಿದೆ ಎಂದು ಸದನದಲ್ಲಿ ಸಿಎಂ ಹೇಳಿದರು.

 ಉಪಚುನಾವಣೆಯಲ್ಲಿ ವಿಜಯೇಂದ್ರ ಸ್ಪರ್ಧೆಯ ಸುದ್ದಿಗೆ ತೆರೆ ಎಳೆದ ಬಿಜೆಪಿ ವರಿಷ್ಠರು ಉಪಚುನಾವಣೆಯಲ್ಲಿ ವಿಜಯೇಂದ್ರ ಸ್ಪರ್ಧೆಯ ಸುದ್ದಿಗೆ ತೆರೆ ಎಳೆದ ಬಿಜೆಪಿ ವರಿಷ್ಠರು

ಕಾಂಗ್ರೆಸ್ ಮತ್ತು ಸಿದ್ದರಾಮಯ್ಯನವರನ್ನು ತರಾಟೆಗೆ ತೆಗೆದುಕೊಂಡ ಯಡಿಯೂರಪ್ಪ, "ಯಾವಾಗಲೂ ಅಧಿಕಾರ ಇರಬೇಕೆಂದು ಬಯಸುವ ಕಾಂಗ್ರೆಸ್ಸಿನವರು ಕುಮಾರಸ್ವಾಮಿಯವರಿಗೆ ಮಾಡಿದ್ದೇನು ಎನ್ನುವುದು ಜನತೆಗೆ ಗೊತ್ತಿದೆ"ಎಂದು ಹೇಳಿದರು.

ಜೆಡಿಎಸ್ ಪಕ್ಷಕ್ಕೆ ಬೆಂಬಲ ಸೂಚಿಸಿ ಅಧಿಕಾರ ಹಂಚಿಕೊಂಡ್ರು

ಜೆಡಿಎಸ್ ಪಕ್ಷಕ್ಕೆ ಬೆಂಬಲ ಸೂಚಿಸಿ ಅಧಿಕಾರ ಹಂಚಿಕೊಂಡ್ರು

"ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಕೇವಲ ಎಂಬತ್ತು ಸ್ಥಾನ ಸಿಕ್ಕಿತ್ತು. ನಂತರ ಜೆಡಿಎಸ್ ಪಕ್ಷಕ್ಕೆ ಬೆಂಬಲ ಸೂಚಿಸಿ ಅಧಿಕಾರ ಹಂಚಿಕೊಂಡು ಕೆಲಸ ನಿರ್ವಹಿಸಿದರು. ಆ ಅವಧಿಯಲ್ಲಿ ಯಾವರೀತಿ ಸರಕಾರ ನಡೆಯಿತು ಎನ್ನುವುದನ್ನು ನಾನು ಹೇಳುವುದು ಬೇಕಾಗಿಲ್ಲ. ಅವತ್ತಿನ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಸಾಕಷ್ಟು ಬಾರಿ ಈ ವಿಚಾರವನ್ನು ಪ್ರಸ್ತಾವಿಸಿದ್ದಾರೆ"ಎಂದು ಯಡಿಯೂರಪ್ಪ ಹೇಳಿದರು.

ಕ್ಲರ್ಕ್ ರೀತಿಯಲ್ಲಿ ಕೆಲಸ ಮಾಡಿಕೊಂಡು ಬಂದೆ, ಎಚ್ಡಿಕೆ

ಕ್ಲರ್ಕ್ ರೀತಿಯಲ್ಲಿ ಕೆಲಸ ಮಾಡಿಕೊಂಡು ಬಂದೆ, ಎಚ್ಡಿಕೆ

"ಸಮ್ಮಿಶ್ರ ಸರಕಾರದ ಅವಧಿಯಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದರೂ, ಅವರನ್ನು ಸರಿಯಾಗಿ ಕೆಲಸ ನಿರ್ವಹಿಸಲು ಬಿಡಲಿಲ್ಲ, ಕ್ಲರ್ಕ್ ರೀತಿಯಲ್ಲಿ ಕೆಲಸ ಮಾಡಿಕೊಂಡು ಬಂದೆ, ಯಾವುದೇ ರೀತಿಯಲ್ಲಿ ಕಾಂಗ್ರೆಸ್ ಸಹಕಾರ ನೀಡಲಿಲ್ಲ ಎಂದು ಅವರೇ ಹೇಳಿದ್ದಾರೆ"ಎಂದು ಯಡಿಯೂರಪ್ಪ ಸದನದಲ್ಲಿ ಹೇಳಿದರು.

ಮುಖ್ಯಮಂತ್ರಿಗಳು ಕುಮಾರಸ್ವಾಮಿ ಪರ ಬ್ಯಾಟ್ ಬೀಸಿದರು

ಮುಖ್ಯಮಂತ್ರಿಗಳು ಕುಮಾರಸ್ವಾಮಿ ಪರ ಬ್ಯಾಟ್ ಬೀಸಿದರು

"ಕುಮಾರಸ್ವಾಮಿಯವರನ್ನು ಹೀನಾಯ ಸ್ಥಿತಿಗೆ ತಂದಿದ್ದರಿಂದ ಅಭಿವೃದ್ದಿ ಕೆಲಸದ ಕಡೆ ಗಮನ ಕೊಡಲು ಅವರಿಗೆ ಸಾಧ್ಯವಾಗಲಿಲ್ಲ. ಅನೇಕ ರೀತಿಯ ಕಿರುಕುಳವನ್ನು ಕಾಂಗ್ರೆಸ್ ಕುಮಾರಸ್ವಾಮಿಯವರಿಗೆ ನೀಡಿತ್ತು. ಅವರನ್ನೂ ಸ್ವತಂತ್ರದಿಂದ ಕೆಲಸ ಮಾಡಲು ಬಿಡಲಿಲ್ಲ"ಎಂದು ಮುಖ್ಯಮಂತ್ರಿಗಳು ಕುಮಾರಸ್ವಾಮಿ ಪರ ಬ್ಯಾಟ್ ಬೀಸಿದರು.

Recommended Video

ಕೋಟಿ ಕೋಟಿ ದೇಣಿಗೆ ಹರಿದು ಬರ್ತಿದೆ | Oneindia Kannada
ಸಿದ್ದರಾಮಯ್ಯ ವಾಗ್ದಾಳಿ

ಸಿದ್ದರಾಮಯ್ಯ ವಾಗ್ದಾಳಿ

"ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಆಗುತ್ತದೆ. ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪ ಕೆಳಗಿಳಿಯುತ್ತಾರೆ ಎಂದು ನಾನು ಮೊದಲೇ ಹೇಳಿದ್ದೆ. ಈಗ ಅವರ ಪಕ್ಷದವರೇ ಹೇಳುತ್ತಿದ್ದಾರಲ್ಲವಾ"ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆಯನ್ನು ಉಲ್ಲೇಖಿಸಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದರು.

English summary
CM Yediyurappa Speech In Assebly: Explained What Congress Did To HD Kumaraswamy.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X