ಸಿಎಂ ಬದಲಾವಣೆ ಚರ್ಚೆಗೆ ಬ್ರೇಕ್ ಹಾಕಿದ ಡಿ ಕೆ ಶಿವಕುಮಾರ್

ಬೆಂಗಳೂರು, ಸೆಪ್ಟೆಂಬರ್ 02: ಮುಖ್ಯಮಂತ್ರಿ ಕುರ್ಚಿ ಖಾಲಿಯಿಲ್ಲ. ಈ ಕುರ್ಚಿ ಖಾಲಿ ಇದ್ದಿದ್ದರೆ ಮಾತನಾಡಬಹುದಿತ್ತು. ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸರ್ಕಾರ ನಡೆಯುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ವಿಧಾನಸೌಧದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಮುಖ್ಯಮಂತ್ರಿ ಸ್ಥಾನ ಆಕಾಂಕ್ಷಿ ಎನ್ನುವ ಆರ್.ವಿ.ದೇಶಪಾಂಡೆಯವರ ಹೇಳಿಕೆ ಬಗ್ಗೆ ಮಾತನಾಡಿ, ಹಿರಿಯರಾದ ದೇಶಪಾಂಡೆ ಅವರು ಆಸೆ ಪಡುವುದು ತಪ್ಪಲ್ಲ. ಆದರೆ ಮಾಧ್ಯಮಗಳ ಮುಂದೆ ಮಾತನಾಡಬಾರದಿತ್ತು. ಹಿರಿಯರಾದ ಅವರಿಗೆ ಏನು ಗೌರವ ನೀಡಲಾಗುವುದೋ ಅದನ್ನು ನೀಡೋಣ ಎಂದು ಹೇಳಿದರು.

Chief Minister s Chair Is Not Vacant Says DCM DK Shivakumar

ನ್ಯಾಯಲಯದಲ್ಲಿ ಸಿದ್ದರಾಮಯ್ಯ ಅವರ ವಿರುದ್ದವಾಗಿ ತೀರ್ಪು ಬಂದರೆ ಮುಂದಿನ ನಡೆ ಏನು ಎಂದು ಕೇಳಿದಾಗ "ಯಾವುದೇ ವ್ಯತಿರಿಕ್ತವಾಗುವುದಿಲ್ಲ. ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಗಳಾಗಿ ಮುಂದುವರೆಯುತ್ತಾರೆ. ಕೆಲಸ ಮಾಡುತ್ತಾರೆ ಎಂದು ತಿಳಿಸಿದರು.

ಕೋವಿಡ್ ವರದಿ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಸಂಸದ ಡಾ.ಕೆ.ಸುಧಾಕರ್ ಅವರು, ಕಾಂಗ್ರೆಸ್ ಅವರು ಸತ್ಯಹರಿಶ್ಚಂದ್ರರೇ ಎನ್ನುವ ಹೇಳಿಕೆ ಕುರಿತು ಮಾಧ್ಯಮಗಳ ಜೊತೆಗೆ ಪ್ರಶ್ನೆಗೆ ಉತ್ತರಿಸಿ, ಕಾಂಗ್ರೆಸ್ ಅಲ್ಲಿ ಇದ್ದು ಈಗ ಬಿಜೆಪಿಗೆ ಹೋಗಿರುವ ಸಂಸದ ಸುಧಾಕರ್ ಅವರು ತಮ್ಮ ಹೇಳಿಕೆಯ ಬಗ್ಗೆ ಮೊದಲು ಪ್ರಮಾಣ ಪತ್ರ ನೀಡಲಿ. ಅವರ ರಕ್ತ, ಆಚಾರ, ವಿಚಾರ ಎಲ್ಲವೂ ಕಾಂಗ್ರೆಸ್ ಇತ್ತು. ಈಗ ನಾಲ್ಕೈದು ವರ್ಷದಿಂದ ಬದಲಾಗಿದೆ ಎಂದರು.

ನಾನು ಕೋವಿಡ್ ಹಗರಣದ ವರದಿಯನ್ನು ಓದಿಲ್ಲ. ಕೇವಲ ಮಾಧ್ಯಮಗಳ ವರದಿಯನ್ನು ಮಾತ್ರ ಓದಿದ್ದೇನೆ. ವರದಿ ಪರಿಶೀಲನೆ ನಂತರ ಪ್ರತಿಕ್ರಿಯಿಸುತ್ತೇನೆ ಎಂದು ಹೇಳಿದರು. ಯಡಿಯೂರಪ್ಪ ಅವರ ವಿರುದ್ದ ದಾಖಲಾಗಿರುವ ಪೋಕ್ಸೋ ಪ್ರಕರಣದ ಶೀಘ್ರ ತನಿಖೆಗೆ ರಾಜ್ಯ ಮಹಿಳಾ ಆಯೋಗ ಸೂಚಿಸಿರುವ ಬಗ್ಗೆ ಮಾತನಾಡಿ, ಇರ ಬಗ್ಗೆ ನನಗೆ ಮಾಹಿತಿಯಿಲ್ಲ ಎಂದರು.

ಬಿಬಿಎಂಪಿ ವಲಯದಲ್ಲಿ 2,795 ರಸ್ತೆಗುಂಡಿಗಳನ್ನು ಗುರುತಿಸಲಾಗಿದೆ ಎಲ್ಲಾ ರಸ್ತೆ ಗುಂಡಿಗಳನ್ನು ಮುಂದಿನ 15 ದಿನಗಳಲ್ಲಿ ಸಂಪೂರ್ಣವಾಗಿ ಮುಚ್ಚಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ರೂ. 660 ಕೋಟಿ ವೆಚ್ಚದಲ್ಲಿ ಪ್ರಮುಖ ರಸ್ತೆಗಳನ್ನು ದುರಸ್ತಿ ಕೆಲಸ ಕೈಗೆತ್ತಿಕೊಳ್ಳಲಾಗುವುದು ಎಂದರು.

ಇತ್ತೀಚೆಗೆ ದೆಹಲಿಗೆ ಭೇಟಿ ನೀಡಿದಾಗ ಮುಖ್ಯರಸ್ತೆಗಳನ್ನು ಬಿಟ್ಟು ಒಳ ರಸ್ತೆಗಳಲ್ಲಿ ಓಡಾಡಿದೆ. ಅವರಿಗಿಂತ ನಾವೇ ಎಷ್ಟೋ ಮುಂದಿದ್ದೇವೆ. ಅವರನ್ನು ಟೀಕೆ ಮಾಡುತ್ತಿಲ್ಲ, ಅಲ್ಲಿನ ಪರಿಸ್ಥಿತಿ ಬೇರೆ ಇರಬಹುದು ಎಂದರು.

ಮಳೆ ಬಂದ ತಕ್ಷಣ ನಗರದಾದ್ಯಂತ ಎಲ್ಲೆಲ್ಲಿ ನೀರು ನಿಲ್ಲುತ್ತಿತ್ತು, ವಸತಿ ಪ್ರದೇಶಗಳಿಗೆ ನೀರು ನುಗ್ಗಿ ಜನರಿಗೆ ತೊಂದರೆ ಉಂಟಾಗುತ್ತಿತ್ತು ಅವುಗಳನ್ನು ಭಾಗಶಃ ಸರಿ ಪಡಿಸಲಾಗಿದೆ. ಇದಕ್ಕಾಗಿ ಅಧಿಕಾರಿಗಳಿಗೆ ಅಭಿನಂದನೆಗಳು ಎಂದು ಹೇಳಿದರು.

ರಾಜಕಾಲುವೆಯ 50 ಮೀ. ಸುತ್ತಳತೆಯಲ್ಲಿ ಯಾವುದೇ ನಿರ್ಮಾಣ ಕಾರ್ಯಗಳನ್ನು ಮಾಡುವಂತಿಲ್ಲ ಎಂದು ಎನ್ ಜಿಟಿಯ ನಿಯಮಗಳು ಸೇರಿದಂತೆ ಒಂದಷ್ಟು ನಿಯಮಗಳಿಗೆ. ಪ್ರಸ್ತುತ 300 ಕಿ.ಮೀ ಅನ್ನು ಗುರುತಿಸಿ 30 ಅಡಿ ರಸ್ತೆ ನಿರ್ಮಾಣ ಮಾಡಲಾಗುವುದು. ಭೂಮಿ ಬಿಟ್ಟುಕೊಡುವ ಖಾಸಗಿ ಜಮೀನುಗಳ ಮಾಲೀಕರಿಗೆ ಪರಿಹಾರವಾಗಿ ಟಿಡಿಆರ್ ನೀಡಲಾಗುವುದು. ಅದನ್ನು ಅವರು ಮಾರಾಟ ಮಾಡಿಕೊಳ್ಳಬಹುದು ಎಂದರು.

ಹೆಬ್ಬಾಳ, ನಾಗಾವರ, ಬೆಳ್ಳಂದೂರು ಅಕ್ಕಪಕ್ಕ, ಬೆಂಗಳೂರು ದಕ್ಷಿಣ ಭಾಗದಲ್ಲಿ ಒಂದಷ್ಟು ಕಡೆ ಭೂಮಿ ಗುರುತಿಸಲಾಗಿದೆ. ಮೊದಲ ಹಂತದಲ್ಲಿ 100 ಕಿ.ಮೀ ದೂರ ಕೆಲಸ ಮಾಡಲಾಗುವುದು. ಇದಕ್ಕಾಗಿ ರೂ. 200 ಕೋಟಿ ಅನುದಾನವನ್ನು ಮೀಸಲಿಡಲಾಗಿದೆ. ಈ ವಿಚಾರವನ್ನು ಕ್ಯಾಬಿನೆಟ್, ಸಚಿವರ ಸಭೆ ಹಾಗೂ ವಿರೋಧ ಪಕ್ಷಗಳ ನಾಯಕರೊಟ್ಟಿಗೆ ನಡೆದ ಸಭೆಗಳಲ್ಲೂ ಪ್ರಾಸ್ತಪಿಸಲಾಗಿದೆ. ಈ ರಸ್ತೆಗಳಲ್ಲಿ ಬಸ್ ಓಡಾಟಕ್ಕೆ ಅವಕಾಶವಿಲ್ಲ. ಬದಲಾಗಿ ಶಾಲಾ, ನಾಗರಿಕರ ವಾಹನಗಳ ಓಡಾಟಕ್ಕೆ ಅವಕಾಶ ನೀಡಲಾಗುವುದು ಎಂದು ಮಾಹಿತಿ ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+