• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕರ್ನಾಟಕದ ಕೊರೊನಾವೈರಸ್ ಸ್ಥಿತಿಗತಿ ಬಗ್ಗೆ ರಾಜ್ಯಪಾಲರಿಗೆ ವರದಿ

|

ಬೆಂಗಳೂರು, ಏಪ್ರಿಲ್ 12: ಕರ್ನಾಟಕದಲ್ಲಿ ಕೊರೊನಾವೈರಸ್ ಎರಡನೇ ಅಲೆ ನಿಯಂತ್ರಣಕ್ಕೆ ಯಾವ ರೀತಿ ಕ್ರಮ ತೆಗೆದುಕೊಳ್ಳಲಾಗಿದೆ ಎಂಬುದರ ಬಗ್ಗೆ ವರದಿ ಸಲ್ಲಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ರಾಜ್ಯಪಾಲ ವಜೂಭಾಯ್ ವಾಲಾ ಸೂಚನೆ ನೀಡಿದ್ದಾರೆ.

ಸೋಮವಾರ ರಾಜ್ಯಪಾಲರ ಸೂಚನೆ ಮೇರೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಮತ್ತು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವಿದ್ ಅಖ್ತರ್ ಅವರು ರಾಜಭವನಕ್ಕೆ ತೆರಳಿ ಕೊವಿಡ್-19 ಸ್ಥಿತಿಗತಿಯ ಬಗ್ಗೆ ಮಾಹಿತಿ ನೀಡಿದರು.

ಕರ್ನಾಟಕಕ್ಕೆ ಆಘಾತ: 24 ಗಂಟೆಗಳಲ್ಲಿ 10250 ಮಂದಿಗೆ ಕೊರೊನಾವೈರಸ್!ಕರ್ನಾಟಕಕ್ಕೆ ಆಘಾತ: 24 ಗಂಟೆಗಳಲ್ಲಿ 10250 ಮಂದಿಗೆ ಕೊರೊನಾವೈರಸ್!

ರಾಜ್ಯದಲ್ಲಿ ಪ್ರಸ್ತುತ ಕೊರೊನಾವೈರಸ್ ಸೋಂಕಿನ ಹರಡುವಿಕೆ ಪ್ರಮಾಣ ಮತ್ತು ಅಂಕಿ-ಸಂಖ್ಯೆಗಳು ಎಷ್ಟಿದೆ ಎನ್ನುವುದರ ಕುರಿತು ರಾಜ್ಯಪಾಲರಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ವರದಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಕರ್ನಾಟಕದಲ್ಲಿ ಕೊರೊನಾವೈರಸ್ ಕಂಡೀಷನ್:

   KSRTC ಬಸ್ ಅಡ್ಡ ಹಾಕಿ ಕಣ್ಣೀರು ಹಾಕಿದ ಮಹಿಳೆ | Oneindia Kannada

   ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಒಂದೇ ದಿನದಲ್ಲೇ 10 ಸಾವಿರದ ಗಡಿ ದಾಟಿದೆ. ರಾಜ್ಯದಲ್ಲಿ ಒಂದೇ ದಿನ 10250 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1065290ಕ್ಕೆ ಏರಿಕೆಯಾಗಿದೆ.

   ಕಳೆದ 24 ಗಂಟೆಗಳಲ್ಲಿ 40 ಮಂದಿ ಮಹಾಮಾರಿಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ 12889ಕ್ಕೆ ಏರಿಕೆಯಾಗಿದೆ. ಇದೇ ಅವಧಿಯಲ್ಲಿ 2638 ಸೋಂಕಿತರು ಗುಣಮುಖರಾಗಿದ್ದು, ರಾಜ್ಯದಲ್ಲಿ ಈವರೆಗೂ 983157 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ 69225 ಸಕ್ರಿಯ ಪ್ರಕರಣಗಳಿವೆ.

   English summary
   Karnataka Chief Secretary P Ravikumar Submitted The report To Governor Vajubhai Vala Over Coronavirus Situation.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X