ಕಾಂಗ್ರೆಸ್ ಸರ್ಕಾರ ಖಾಲಿ ಚಿಪ್ಪು ನೀಡಿದೆ: ಡಾ.ಕೆ.ಸುಧಾಕರ್!
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ & ಜೆಡಿಎಸ್ ಮೈತ್ರಿ ಅಭ್ಯರ್ಥಿ ಆಗಿರುವ ಡಾ. ಕೆ. ಸುಧಾಕರ್ ಅವರು, ಮತ್ತೊಮ್ಮೆ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ, ಅದರಲ್ಲೂ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಜನರಿಗೆ ಯೋಜನೆಗಳನ್ನು ನೀಡದೆ ಖಾಲಿ ಚಿಪ್ಪು ನೀಡಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
11 ತಿಂಗಳ ಆಡಳಿತದಲ್ಲಿ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳನ್ನ ಬಿಟ್ಟು ಬೇರೆ ಏನೂ ಮಾತಾಡಿಲ್ಲ ಈ ಗ್ಯಾರಂಟಿಗಳನ್ನು ಕೂಡ ಸಮರ್ಪಕವಾಗಿ ಜಾರಿ ಮಾಡಿಲ್ಲ. ಅಲ್ಲದೆ, ಈ ಯೋಜನೆಗಳಿಗಾಗಿ ಕೋಟ್ಯಂತರ ರೂಪಾಯಿ ಹಣ ಮೀಸಲಿಟ್ಟು. ಖಜಾನೆ ಖಾಲಿ ಮಾಡಿ ಇದೀಗ ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡಲಾಗುತ್ತಿದೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿರುವ ಯಾವುದೇ ವಿಧಾನಸಭಾ ಕ್ಷೇತ್ರದಲ್ಲೂ ಒಂದು ರೂಪಾಯಿ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದಿದ್ದಾರೆ ಡಾ. ಕೆ. ಸುಧಾಕರ್ ಅವರು.

ಒಂದು ರೂಪಾಯಿ ಕೂಡ ಕೊಟ್ಟಿಲ್ಲ!
ಜನ ಬರಗಾಲದ ಪರಿಣಾಮ ತತ್ತರಿಸಿದ್ದರು ಕಾಂಗ್ರೆಸ್ ಸರ್ಕಾರ ನೀರು ಕೊಡಲು ಅಥವಾ ರೈತರಿಗೆ ಪರಿಹಾರ ನೀಡಲು ಯಾವುದೇ ಕ್ರಮ ಕೈಗೊಂಡಿಲ್ಲ. ಕಾವೇರಿ ನೀರನ್ನ ಉಳಿಸುವುದನ್ನ ಬಿಟ್ಟು ತಮಿಳುನಾಡಿಗೆ ಹರಿಸಲಾಗಿದ್ದು. ಬಯಲು ಸೀಮೆಯಲ್ಲಿ ಎತ್ತಿನಹೊಳೆ ಯೋಜನೆ ಅನ್ನಾದರೂ ಪೂರ್ಣ ಮಾಡಿ ನೀರು ನೀಡಬೇಕಿತ್ತು ಕೆಸಿ ವ್ಯಾಲಿ, ಎಚ್‌ಎನ್ ವ್ಯಾಲಿ ಯೋಜನೆ ಅಡಿ ತೃತೀಯ ಹಂತದ ಸಂಸ್ಕರಣೆಯ ನೀರಿನಿಂದ ಕೆರೆ ತುಂಬಿಸಬೇಕಿತ್ತು. ಇದ್ಯಾವುದೇ ಕೆಲಸಗಳನ್ನು ಮಾಡದೆ ಕೆವಲ ಗ್ಯಾರಂಟಿ ಜಪ ಮಾಡಲಾಗಿದೆ ಇದರಿಂದ ಜನ ಬರಗಾಲದಿಂದ ಸಂಕಷ್ಟಕ್ಕೆ ಒಳಗಾಗಿದ್ದು. ಒಂದು ರೂಪಾಯಿ ಪರಿಹಾರ ಕೊಡದ ರಾಜ್ಯ ಕಾಂಗ್ರೆಸ್ ಸರ್ಕಾರ ಎಲ್ಲಾ ವಿಚಾರಕ್ಕೂ ಕೇಂದ್ರ ಸರ್ಕಾರವನ್ನೇ ಹೊಣೆಯಾಗಿಸಿ ರಾಜಕೀಯ ಲಾಭ ಪಡೆಯಲು ಹುನ್ನಾರವನ್ನ ಮಾಡಿದೆ ಎಂದು ಡಾ.ಕೆ.ಸುಧಾಕರ್ ಆರೋಪಿಸಿದರು.
ಯೋಜನೆಗಳನ್ನು ನಿಲ್ಲಿಸಿದೆ ಕಾಂಗ್ರೆಸ್
ಈ ಹಿಂದೆ ರಾಜ್ಯ ಸರ್ಕಾರದಿಂದ ಕಿಸಾನ್ ಸಮ್ಮಾನ್ ಅಡಿ 4,000 ರೂ. ನೀಡಲಾಗುತ್ತಿತ್ತು. ಈ ಹಣವನ್ನ ನೀಡಿದ್ದರೆ ರೈತರಿಗೆ ಬರಗಾಲದಲ್ಲಿ ಸ್ವಲ್ಪವಾದರೂ ನೆರವಾಗುತ್ತಿತ್ತು. ಅದನ್ನು ಕೂಡ ಸ್ಥಗಿತ ಮಾಡಿ ವಂಚಿಸಲಾಗಿದೆ. ದಲಿತರಿಗೆ ಸೇರಬೇಕಿದ್ದ 11 ಸಾವಿರ ಕೋಟಿ ರೂಪಾಯಿಯನ್ನು ಗ್ಯಾರಂಟಿಗೆ ಬಳಸಿ, ಹಿಂದೆ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರಿಗೆ ಮಾಡಿದ್ದ ಅನ್ಯಾಯವನ್ನೇ ಬೇರೆ ರೀತಿಯಲ್ಲಿ ಮಾಡಲಾಗಿದೆ. ಹಿಂದಿನ ಬಿಜೆಪಿ ಸರ್ಕಾರ ರೈತ ಕುಟುಂಬದ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ನೀಡಿದ್ದರೆ, ಅದನ್ನೂ ಕಿತ್ತುಕೊಂಡು ಬಸ್‌ಗಳೇ ಇಲ್ಲದೆ ವಿದ್ಯಾರ್ಥಿಗಳನ್ನು ರಸ್ತೆ ಬದಿ ನಿಲ್ಲಿಸಲಾಗಿದೆ ಎಂದು ಡಾ. ಕೆ. ಸುಧಾಕರ್ ಗಂಭೀರ ಆರೋಪ ಮಾಡಿದರು.












Click it and Unblock the Notifications