ಹೊರ ರಾಜ್ಯದಿಂದ ಬಂದು ದರೋಡೆ ಮಾಡುತ್ತಿದ್ದ ಮಹಿಳೆ ಬಂಧನ: ₹30 ಲಕ್ಷ ಮೌಲ್ಯದ ಚಿನ್ನಾಭರಣ ವಶ
ಚಿಕ್ಕಬಳ್ಳಾಪುರ: ಅಂತರರಾಜ್ಯ ಮಟ್ಟದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ಕುಖ್ಯಾತ ಕಳ್ಳಿಯನ್ನು ಬಂಧಿಸುವಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಪ್ರಕರಣವು 2025ರ ಸೆಪ್ಟೆಂಬರ್ 19ರಂದು ದಾಖಲಾಗಿತ್ತು. ಈ ಕಾರ್ಯಾಚರಣೆಯಲ್ಲಿ ಸುಮಾರು 240 ಗ್ರಾಂ ತೂಕದ ಹಾಗೂ ₹30 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ದೇವಾಲಯದ ಉತ್ಸವದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ತಮ್ಮ ಪೋಷಕರ ಮನೆಗೆ ತೆರಳುವ ವೇಳೆ, ಚಿನ್ನಾಭರಣಗಳನ್ನು ತಮ್ಮ ವ್ಯಾನಿಟಿ ಬ್ಯಾಗ್‌ನೊಳಗಿನ ಡಬ್ಬಿಯಲ್ಲಿ ಇಟ್ಟುಕೊಂಡಿದ್ದರು. ತಮ್ಮ ಗ್ರಾಮಕ್ಕೆ ಹೋಗುವ ಸಲುವಾಗಿ ಜಂಗಮಕೋಟೆ ಕ್ರಾಸ್ ಬಳಿ ಬಸ್ ಬದಲಿಸುವಾಗ ಈ ಕಳ್ಳತನ ನಡೆದಿತ್ತು ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದರು.

ಪೊಲೀಸರ ಪ್ರಕಾರ, ಸೂಲಿಬೆಲೆ ಕಡೆಗೆ ಮಾರ್ಗದ ತುಂಬಿ ತುಳುಕುತ್ತಿದ್ದ ಬಸ್‌ಗೆ ಏರುವಾಗ ಮಹಿಳೆಯನ್ನು ಹಿಂದಿನಿಂದ ಮತ್ತೊಬ್ಬ ಮಹಿಳೆ ತಳ್ಳಿದ್ದಾಳೆ. ಬಳಿಕ ನೀರಿನ ಬಾಟಲ್ ತೆಗೆದುಕೊಳ್ಳಲು ಬ್ಯಾಗ್ ತೆರೆಯುತ್ತಿದ್ದಂತೆ ಜಿಪ್ ತೆರೆಯಲ್ಪಟ್ಟಿದ್ದು, ಅದರೊಳಗಿದ್ದ ಚಿನ್ನಾಭರಣದ ಡಬ್ಬಿ ಕಳವಾಗಿರುವುದು ಗೊತ್ತಾಗಿದೆ ಎಂದಿದ್ದಾರೆ.
ಈ ಕುರಿತು ಶಿಡ್ಲಘಟ್ಟ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಸೆಕ್ಷನ್ 303(1) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಪ್ರಕರಣದ ಗಂಭೀರತೆಯನ್ನು ಗಮನಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ವಿಶೇಷ ತನಿಖಾ ತಂಡ ರಚಿಸಲಾಗಿತ್ತು. ನಿಖರ ಮಾಹಿತಿ ಹಾಗೂ ತಾಂತ್ರಿಕ ಸಾಕ್ಷ್ಯಾಧಾರಗಳ ಆಧಾರದಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾದರು ಎಂದು ತಿಳಿಸಿದ್ದಾರೆ.
ಬಸ್‌ಗಳು, ಜನಸಂದಣಿ, ಉತ್ಸವಗಳಲ್ಲಿ ಕಳ್ಳತನ
ಬಂಧಿತ ಆರೋಪಿಯನ್ನು 50 ವರ್ಷದ ಮೀನಾ (ಅಲಿಯಾಸ್ ಮೀನಾಕ್ಷಿ) ಎಂದು ಗುರುತಿಸಲಾಗಿದೆ. ಈಕೆ ಮೂಲತಃ ತಮಿಳುನಾಡಿನ ಜೋಲಾರ್‌ಪೇಟೆ ನಿವಾಸಿಯಾಗಿದ್ದು, ಪ್ರಸ್ತುತ ಆಂಧ್ರಪ್ರದೇಶದ ಕುಪ್ಪಂನಲ್ಲಿ ವಾಸವಾಗಿದ್ದಾಳೆ. ಪೊಲೀಸರ ತನಿಖೆಯಲ್ಲಿ ಆರೋಪಿಯ ವಿರುದ್ಧ ವಿವಿಧ ರಾಜ್ಯಗಳಲ್ಲಿ ಈಗಾಗಲೇ ಐದಕ್ಕೂ ಹೆಚ್ಚು ಕಳ್ಳತನ ಪ್ರಕರಣಗಳು ದಾಖಲಾಗಿರುವುದು ಬೆಳಕಿಗೆ ಬಂದಿದೆ. ಈಕೆ ಬಸ್‌ಗಳು, ಜನಸಂದಣಿ ಇರುವ ಹಾಗೂ ಉತ್ಸವಗಳ ಸಂದರ್ಭವನ್ನು ಆಯ್ಕೆ ಮಾಡಿಕೊಂಡು ಚಿನ್ನಾಭರಣ ಕಳ್ಳತನ ಮಾಡುವುದರಲ್ಲಿ ಪರಿಣತಿ ಹೊಂದಿದ್ದಾಳೆ ಎಂದು ತಿಳಿದುಬಂದಿದೆ.
ಪೊಲೀಸರು ವಶಪಡಿಸಿಕೊಂಡ ಎಲ್ಲ ಚಿನ್ನಾಭರಣಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ಯಶಸ್ವಿ ಕಾರ್ಯಾಚರಣೆಗೆ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸರ ಕಾರ್ಯಕ್ಷಮತೆ ಬಗ್ಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜನಸಂದಣಿ ಇರುವ ಸ್ಥಳಗಳಲ್ಲಿ, ವಿಶೇಷವಾಗಿ ಬಸ್‌ಗಳಲ್ಲಿ ಪ್ರಯಾಣಿಸುವ ವೇಳೆ ಸಾರ್ವಜನಿಕರು ತಮ್ಮ ಚಿನ್ನಾಭರಣಗಳ ಬಗ್ಗೆ ಹೆಚ್ಚು ಎಚ್ಚರಿಕೆ ವಹಿಸಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ.
ಪೊಲೀಸರಿಂದ ಸಲಹೆ
ಚಿಕ್ಕಬಳ್ಳಾಪುರದಲ್ಲಿ ನಡೆದ ಅಂತರರಾಜ್ಯ ಕಳ್ಳತನ ಪ್ರಕರಣವು ಸಾರ್ವಜನಿಕರಿಗೆ ಮಹತ್ವದ ಎಚ್ಚರಿಕೆ ಸಂದೇಶ ನೀಡಿದೆ. ವಿಶೇಷವಾಗಿ ಬಸ್‌ಗಳು, ಜಾತ್ರೆ-ಉತ್ಸವಗಳು ಹಾಗೂ ಜನಸಂದಣಿ ಇರುವ ಸ್ಥಳಗಳಲ್ಲಿ ಪ್ರಯಾಣಿಸುವವರು ಚಿನ್ನಾಭರಣಗಳನ್ನು ಅಗತ್ಯವಿದ್ದರೆ ಮಾತ್ರ ಕೊಂಡೊಯ್ಯಿರಿ, ಉತ್ಸವಗಳು ಅಥವಾ ದೂರ ಪ್ರಯಾಣದ ವೇಳೆ ಹೆಚ್ಚಿನ ಮೌಲ್ಯದ ಆಭರಣಗಳನ್ನು ತರುವುದನ್ನು ಸಾಧ್ಯವಾದಷ್ಟು ತಪ್ಪಿಸಬೇಕು ಎಂದು ಇಂತಹ ಕಳ್ಳತನಗಳ ತಡೆಗೆ ಪೊಲೀಸರು ಸಲಹೆ ನೀಡಿದ್ದಾರೆ.
ಬಸ್ ಏರು-ಇಳಿಯುವ ವೇಳೆ ಬ್ಯಾಗ್‌ಗಳನ್ನು ಬೆನ್ನಿಗೆ ಹಾಕದೇ, ಮುಂದೆ ಇಟ್ಟುಕೊಳ್ಳಿ. ಜನಸಂದಣಿಯಲ್ಲಿ ಯಾರಾದರೂ ಅಸಹಜವಾಗಿ ತಳ್ಳಿದರೆ ಅಥವಾ ಗಮನ ಬೇರೆಡೆ ಸೆಳೆಯಲು ಪ್ರಯತ್ನಿಸಿದರೆ ತಕ್ಷಣ ಎಚ್ಚೆತ್ತುಕೊಳ್ಳಬೇಕು. ಬಸ್‌ಗಳಲ್ಲಿ ಪ್ರಯಾಣಿಸುವಾಗ ತುಂಬಿ ತುಳುಕುವ ಬಸ್‌ಗಳಲ್ಲಿ ಕಳ್ಳತನಕ್ಕೆ ಹೆಚ್ಚು ಅವಕಾಶ ಇರುತ್ತದೆ. ಅನುಮಾನಾಸ್ಪದ ವರ್ತನೆ ಕಂಡುಬಂದರೆ ತಕ್ಷಣ ಕಂಡಕ್ಟರ್ ಅಥವಾ ಚಾಲಕರ ಗಮನಕ್ಕೆ ತನ್ನಿ. ಕಳ್ಳರು ಸಾಮಾನ್ಯವಾಗಿ ಮಹಿಳೆಯರು, ವೃದ್ಧರು ಮತ್ತು ಒಂಟಿ ಪ್ರಯಾಣಿಕರನ್ನು ಗುರಿಯಾಗಿಸುತ್ತಾರೆ ಎಂದು ಪೊಲೀಸರು ಸಾರ್ವಜನಿಕರಿಗೆ ಎಚ್ಚರಿಸಿದ್ದಾರೆ.
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications