ಸುಧಾಕರ್ VS ಎಸ್ ಆರ್ ವಿಶ್ವನಾಥ್ : ಚಿಕ್ಕಬಳ್ಳಾಪುರ ಟಿಕೆಟ್ ಗಾಗಿ ಕಮಲ ಪಡೆಯಲ್ಲಿ ಭಾರೀ ಲಾಬಿ- ಯಾರಿಗೆ ಸಿಗಲಿದೆ ಚಾನ್ಸ್ ?
ಬೆಂಗಳೂರು, ಫೆಬ್ರವರಿ 06: ವಿಧಾನಸಭಾ ಚುಣಾವಣೆಯಲ್ಲಿ ಹೀನಾಯವಾಗಿ ಸೋಲು ಮಾಜಿ ಮಂತ್ರಿಗಳು ಇದೀಗ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಭರ್ಜರಿ ತಯಾರಿ ನಡೆಸಿದ್ದಾರೆ. ಚಿಕ್ಕಬಳ್ಳಾಪುರ ಲೋಕಸಭಾ ಟಿಕೆಟ್ ಗಾಗಿ ಬಿಜೆಪಿ ಪಾಳಯದಲ್ಲಿ ಭಾರೀ ಲಾಬಿ ನಡೆದಿದ್ದು, ಟಿಕೆಟ್ ಗಾಗಿ ಹೈಕಮಾಂಡ್ ನಾಯಕರ ಬಳಿ ಬೇಡಿಕೆ ಇಟ್ಟಿದ್ದಾರೆ.
ಹೌದು, ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಿಂದ ಸೋಲು ಕಂಡ ಮಾಜಿ ಸಚಿವ ಡಾ.ಕೆ.ಸುಧಾಕರ್ ಅವರು ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಕಣಕ್ಕಿಳಿಯಲು ಭರ್ಜರಿ ತಯಾರಿ ನಡೆಸಿದ್ದು, ಹೈಕಮಾಂಡ್ ನಾಯಕರದಾರ ಜೆ ಪಿ ನಡ್ಡಾ ಅವರನ್ನ ಭೇಟಿ ಮಾಡಿ ಟಿಕೆಟ್ ಗಾಗಿ ಬೇಡಿಕೆ ಇಟ್ಟಿದ್ದಾರೆ.

ಈಗಾಗಲೇ ಚಿಕ್ಕಬಳ್ಳಾಪುರ ಲೋಕಸಭೆ ಚುನಾವಣೆಗೆ ಪ್ರಚಾರ ಆರಂಭಿಸಿರುವ ಮಾಜಿ ಸಚಿವ ಡಾ. ಕೆ ಸುಧಾಕರ್ ತಮ್ಮ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡುತ್ತಾ, ಪಕ್ಷದಿಂದ ನನಗೆ 'ಗ್ರೀನ್ ಸಿಗ್ನಲ್' ಸಿಕ್ಕಿದೆ ಎಂದು ಹೇಳಿದ್ದಾರೆ. ಇತ್ತ ಯಲಹಂಕ ಶಾಸಕ ಎಸ್‌ಆರ್ ವಿಶ್ವನಾಥ್ ಅವರು ಸಹ ಪುತ್ರ ಅಲೋಕ್‌ಗೆ ಟಿಕೆಟ್ ಬಯಸಿದ್ದು, ಟಿಕೆಟ್ ಗಾಗಿ ಭಾರೀ ಲಾಬಿ ಶುರುವಾಗಿದೆ.
ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡ ಮಾಜಿ ಸಚಿವ ಸುಧಾಕರ್ ಇಷ್ಟು ದಿನಗಳ ಕಾಲ ಸೈಲೆಂಟ್ ಆಗಿದ್ರು, ಇದೀಗ ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಆಕ್ಟಿವ್ ಆಗಿದ್ದು, ಇತ್ತೀಚೆಗೆ ಸುಧಾಕರ್ ಅವರು ದೆಹಲಿಯಲ್ಲಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿ ಸುದೀರ್ಘ ಕಾಲ ಮಾತು ಕತೆ ನಡೆಸಿದ್ದಾರೆ, ಅಲ್ಲದೇ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರನ್ನೂ ಭೇಟಿ ಚಿಕ್ಕಬಳ್ಳಾಪುರ ಕ್ಷೇತ್ರದ ಕುರಿತು ಚರ್ಚೆ ನಡೆಸಿದ್ದಾರೆ.

ಭಾನುವಾರ ಚಿಕ್ಕಬಳ್ಳಾಪುರದಲ್ಲಿ ತಮ್ಮ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಸುಧಾಕರ್, ಪಕ್ಷದಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ ಎಂದು ಸುಳಿವು ನೀಡಿದರು. ನಾನು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮತ್ತು ಹೆಚ್ ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದೇನೆ. ನನಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ಲೋಕಸಭೆ ಚುನಾವಣೆಗೆ ನನ್ನ ಕೆಲಸ ಆರಂಭಿಸುವಂತೆ ತಿಳಿಸಿದ್ದಾರೆ ಎಂದು ಸುಧಾಕರ್ ಹೇಳಿದರು.
ಇನ್ನೂ ಸುಧಾಕರ್ ಅವರ ಮಾತಿಗೆ ತಿರುಗೇಟು ನೀಡಿರುವ ಯಲಹಂಕದ ಬಿಜೆಪಿ ಶಾಸಕ ಎಸ್‌ಆರ್ ವಿಶ್ವನಾಥ್ ಅವರ ಈ ಹೇಳಿಕೆ ಸರಿ ಹೋಗಲ್ಲ ಮತ್ತು ಪಕ್ಷದ ಘೋಷಣೆಗೂ ಮುನ್ನ ಯಾರೂ ಅಭ್ಯರ್ಥಿ ಎಂದು ಹೇಳಿಕೊಳ್ಳಬೇಡಿ ಎಂದು ಸುಧಾಕರ್ ಅವರನ್ನು ತರಾಟೆಗೆ ತೆಗೆದುಕೊಂಡರು.

ಚಿಕ್ಕಬಳ್ಳಾಪುರ ಲೋಕಸಭೆ ಟಿಕೆಟ್ ವಿಚಾರವಾಗಿ ಸುಧಾಕರ್ ಹೇಳಿಕೆ ನೀಡಿದ್ದಾರೆ. ಪಕ್ಷ ಇದುವರೆಗೆ ಯಾವುದೇ ಅಭ್ಯರ್ಥಿಯನ್ನು ಘೋಷಿಸಿಲ್ಲ. ಟಿಕೆಟ್‌ಗಳನ್ನು ಸಂಸದೀಯ ಮಂಡಳಿ ನಿರ್ಧರಿಸುತ್ತದೆ. ಸುಧಾಕರ್ ಬಿಜೆಪಿಗೆ ಹೊಸಬರು, ಅವರು ನಮ್ಮ ಪಕ್ಷದ ವ್ಯವಸ್ಥೆಯನ್ನು ಅರ್ಥಮಾಡಿಕೊಳ್ಳುವ ಅವಶ್ಯಕತೆಯಿದೆ. ನನ್ನ ಮಗ ಅಲೋಕ್ ಕೂಡ ಆಕಾಂಕ್ಷಿ. ಪಕ್ಷದ ನಿರ್ಧಾರಕ್ಕೂ ಮುನ್ನ ಯಾರೂ ಇಂತಹ ಘೋಷಣೆ ಮಾಡುವ ಅಗತ್ಯವಿಲ್ಲ ಎಂದು ವಿಶ್ವನಾಥ್ ಹೇಳಿದರು.
ಇನ್ನೂ ಸೋಮವಾರ ಸುಧಾಕರ್ ಮಾತನಾಡಿ, ನಾವು ಪಕ್ಷವನ್ನು ಬಲಪಡಿಸಲು ಪ್ರಯತ್ನಿಸುತ್ತಿದ್ದೇವೆ. ಬಿಎಸ್ ಯಡಿಯೂರಪ್ಪ ಸಿಎಂ ಆಗಬೇಕು ಎಂಬ ಉದ್ದೇಶದಿಂದ ಬಿಜೆಪಿಗೆ ಶೇ 3ರಷ್ಟು ಮತಗಳಿವೆ ಎಂದು ತಿಳಿದು ಬಿಜೆಪಿ ಸೇರಿದ್ದೇನೆ. 22-23ರಷ್ಟು ಮತಗಳಿಕೆ ಹೆಚ್ಚಿದೆ. ಪಕ್ಷದ ಟಿಕೆಟ್ ಕೇಳಿದ್ದೇನೆ, ನೋಡೋಣ. ನಾನು ಪಕ್ಷಕ್ಕೆ ಸೇರಿ ಐದು ವರ್ಷಗಳಾಗಿದ್ದು, ನಾನು ಪಕ್ಷಕ್ಕೆ ಹೊಸಬ ಎಂದು ಯಾರಾದರೂ ಭಾವಿಸಿದರೆ ಅದು ಅವರಿಗೆ ಬಿಟ್ಟದ್ದು ಎಂದು ಸುಧಾಕರ್ ಹೇಳಿದರು.












Click it and Unblock the Notifications