ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಿಕ್ಕಮಗಳೂರು: ಬ್ಯಾರಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರದಾನ

|
Google Oneindia Kannada News

ಚಿಕ್ಕಮಗಳೂರು, ಜ, 12: : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಮತ್ತು ಚಿಕ್ಕಮಗಳೂರು ಜಿಲ್ಲಾ ಬ್ಯಾರಿಗಳ ಒಕ್ಕೂಟದ ಆಶ್ರಯದಲ್ಲಿ ಇತ್ತೀಚೆಗೆ ಸಾಧಕರಿಗೆ 'ಗೌರವ ಪ್ರಶಸ್ತಿ' ಪ್ರದಾನ ಮಾಡಲಾಯಿತು.

2014ರ ಗೌರವ ಪ್ರಶಸ್ತಿಯನ್ನು ಬ್ಯಾರಿ ಭಾಷೆ ಮತ್ತು ಸಂಶೋಧನೆ ಕ್ಷೇತ್ರದಲ್ಲಿ ಬಿ.ಎಂ ಇಚ್ಲಂಗೋಡು, ಸಾಹಿತ್ಯ ಕ್ಷೇತ್ರದಲ್ಲಿ ಬಿ.ಎ.ಶಂಶುದ್ದೀನ್ ಮಡಿಕೇರಿ, ಕಲೆ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮುಹಮ್ಮದ್ ಬ್ಯಾರಿ ಎಡಪದವು ಅವರಿಗೆ ನೀಡಿ ಸನ್ಮಾನಿಸಲಾಯಿತು.[ಶೃಂಗೇರಿಯಲ್ಲಿ ಮಯ್ಯ 'ಮಲೆನಾಡು ರಾಷ್ಟ್ರೀಯ ಉತ್ಸವ']

Chikkamagaluru

ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಹಾಗೂ ಯುವಜನ ಸೇವೆ ಮತ್ತು ಕ್ರೀಡಾ ಸಚಿವ ಅಭಯಚಂದ್ರ ಜೈನ್, ಅರಣ್ಯ ಸಚಿವ ಬಿ.ರಮಾನಾಥ ರೈ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಯು.ಟಿ. ಖಾದರ್ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

2014ರ ಗೌರವ ಪುರಸ್ಕಾರವನ್ನು ಸಾಹಿತ್ಯ ಕ್ಷೇತ್ರದಲ್ಲಿ ಡಾ. ಎ.ಎಮ್. ಶ್ರೀಧರನ್, ಮರಿಯಮ್ ಇಸ್ಮಾಯಿಲ್ ಉಳ್ಳಾಲ, ಇಸ್ಮಾಯಿಲ್ ಅಜಾದ್ ಮೂಡಿಗೆರೆ, ಉಮ್ಮರ್ ಫಾರೂಕ್ ಬಿಕ್ಕೊಡ್, ಸಮಾಜ ಸೇವಾ ಕ್ಷೇತ್ರದಲ್ಲಿ ಅಝಲ ಅಯ್ಯೂಬ್, ಬಿ.ಹೆಚ್. ನೂರ್ ಮೊಹಮ್ಮದ್, ಗಾಯನ ಕ್ಷೇತ್ರದಲ್ಲಿ ಮುಹಮ್ಮದ್ ಇಕ್ಬಾಲ್ ಕಾಟಿಪಳ್ಳ, ದೇಶ ರಕ್ಷಣೆ ಮತ್ತು ಕಲೆ ಕ್ಷೇತ್ರದಲ್ಲಿ ಕೆ. ಮಹಮ್ಮದ್ ಮಂದಗದ್ದೆ, ಆರೋಗ್ಯ ಕ್ಷೇತ್ರದಲ್ಲಿ ಮೋಯ್ ದಿನ್ ಗರ್ಡಾಡಿ ಅವರಿಗೆ ನೀಡಲಾಯಿತು.[ಶೃಂಗೇರಿ ಶಾರದಾ ಪೀಠದ ಗುರು ಪರಂಪರೆಯತ್ತ ನೋಟ]

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷೆ ಬಲ್ಕೀಸ್ ಬಾನು, ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಭಾಗ್ಯ ರಂಗನಾಥ್, ಶಾಸಕ ಸಿ.ಟಿ. ರವಿ, ಬಿ.ಬಿ. ನಿಂಗಯ್ಯ, ವಿಧಾನಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ, ಕೇಂದ್ರದ ಮಾಜಿ ಸಚಿವೆ ಡಿ.ಕೆ. ತಾರಾದೇವಿ ಸಿದ್ದಾರ್ಥ, ವಿಧಾನಪರಿಷತ್ ಸದಸ್ಯರಾದ ಶ್ರೀಮತಿ ಮೋಟಮ್ಮ, ಅಖಿಲ ಭಾರತ ವಕೀಲರ ಪರಿಷತ್ ಉಪಾಧ್ಯಕ್ಷ ಶ್ರೀ ಎಸ್.ಎಲ್. ಬೋಜೇಗೌಡ, ಚಿಕ್ಕಮಗಳೂರು ನಗರಸಭಾ ಅಧ್ಯಕ್ಷ ಪುಷ್ಪರಾಜ್, ಬಿ.ಎ. ಮೊಹಿದಿನ್, ಕೆ. ಜಯಪ್ರಕಾಶ್ ಹೆಗ್ಡೆ, ಬಿ.ಎಲ್. ಶಂಕರ್ ಹಾಜರಿದ್ದರು.

ಬ್ಯಾರಿ ಅಕಾಡೆಮಿ ಅಧ್ಯಕ್ಷ ಬಿ.ಎ. ಮೊಹಮ್ಮದ್ ಹನೀಫ್ , ಕ್ಕಮಗಳೂರು ಜಿಲ್ಲಾ ಬ್ಯಾರಿಗಳ ಒಕ್ಕೂಟದ ಅಧ್ಯಕ್ಷ ಕೆ. ಮುಹಮ್ಮದ್, ಸದಸ್ಯರಾದ ಜನಾಬ್ ಅಬ್ಬಾಸ್ ಕಿರುಗುಂದ, ಪತ್ರಕರ್ತ ಬಿ.ಎಂ. ಹನೀಫ್, ಅಕಾಡೆಮಿಯ ರಿಜಿಸ್ಟ್ರಾರ್ ಉಮರಬ್ಬ ಕಾರ್ಯಕ್ರಮ ನಿರ್ವಹಣೆ ಹೊಣೆ ಹೊತ್ತಿದ್ದರು.

ನಂತರ ನಡೆದ ಬ್ಯಾರಿ ನಾಟಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು.

English summary
Chikkamagaluru: Literature, social work, achievers honored by Karnataka Beary Sahitya Academy and Chikkamagaluru Beary Sahitya Academy. The State Ministers, MLA's, and Academy Persons participated in this event.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X