ಚಿಕ್ಕಮಗಳೂರು ಬಿಜೆಪಿ ಮುಖಂಡನ ಬರ್ಬರ ಹತ್ಯೆ

ಚಿಕ್ಕಮಗಳೂರು, ಜೂನ್ 23: ಚಿಕ್ಕಮಗಳೂರಿನ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಅನ್ವರ್(44) ಎಂಬುವವರನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ.

Chikkamagaluru: bike borne assailants kill BJP leader Anwar

ಜೂನ್ 22 ರ ರಾತ್ರಿ 9.30 ರ ಸುಮಾರಿಗೆ ಬೈಕಿನಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳು ಚಿಕ್ಕಮಗಳೂರು ನಗರದ ಗೌರಿ ಕಾಲುವೆಯ ಸಿಂಗಾರಿನಿಲಯ ರಸ್ತೆಯಲ್ಲಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ಉಡುಪಿ-ಚಿಕ್ಕಮಗಳೂರು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ, "ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಬಿಜಿಯ ಚಿಕ್ಕಮಗಳೂರು ಪ್ರಧಾನ ಕಾರ್ಯದರ್ಶಿ ಅನ್ವರ್ ಅವರನ್ನು ಕೊಲೆ ಮಾಡಿದ್ದಾರೆ. ಅವರಿಗೆ ಈಗಾಗಲೇ ಸ್ಥಳೀಯ ಮೂಲಭೂತವಾದಿ ಗೂಂಡಾಗಳಿಂದ ಕೊಲೆ ಬೆದರಿಕೆ ಇತ್ತು. ಇದೊಂದು ಅಕ್ಷಮ್ಯ ಮತ್ತು ಅಸಮರ್ಥನೀಯ ಕೃತ್ಯ. ಚಿಕ್ಕಮಗಳೂರು ಎಸ್ಪಿಯವರಿಗೆ ಫೋನ್ ಮಾಡಿ, ಕೊಲೆಗಾರರನ್ನು ಶೀಘ್ರವೇ ಬಂಧಿಸುವಂತೆ ಮನವಿ ಮಾಡಿದ್ದೇನೆ. ಕರ್ನಾಟಕ ಎತ್ತ ಸಾಗುತ್ತಿದೆ. ಓಂ ಶಾಂತಿ" ಎಂದು ಟ್ವೀಟ್ ಮಾಡಿದ್ದಾರೆ.

ಅನ್ವರ್ ಚಿಕ್ಕಮಗಳೂರಿನ ಉಪ್ಪಾಳಿ ನಿವಾಸಿಯಾಗಿದ್ದು, ಹಳೇ ದ್ವೇಷದ ಹಿನ್ನೆಲೆಯಲ್ಲಿ ಇವರನ್ನು ಕೊಲೆ ಮಾಡಲಾಗಿದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಬಸವನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+