ಇಟ್ಟ ರಾಮನ ಬಾಣ ಹುಸಿಯಲ್ಲ: ಅಚ್ಚರಿ ಮೂಡಿಸಿದ ಮೈಲಾರಲಿಂಗೇಶ್ವರ ಕಾರ್ಣಿಕ
ಚಿಕ್ಕಮಗಳೂರು, ಅಕ್ಟೋಬರ್ 14: ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರು ಪಟ್ಟಣದಲ್ಲಿರುವ ಮೈಲಾರಲಿಂಗೇಶ್ವರ ಸ್ವಾಮಿಯ ದೇವಸ್ಥಾನದ ಮಹಾನವಮಿ ಬಯಲಿನಲ್ಲಿ ಭಾನುವಾರ ನಸುಕಿನ ಜಾವ 4:45ರ ಸುಮಾರಿಗೆ ಕಾರ್ಣಿಕ ನುಡಿಯಲಾಯಿತು, ಈ ಆತಂಕದ ದೈವವಾಣಿಯನ್ನು ಗೊರವಯ್ಯ ನುಡಿದಿದ್ದಾರೆ.
ಮೈಲಾರಲಿಂಗೇಶ್ವರ ಸ್ವಾಮಿಯ ಕಾರ್ಣಿಕವನ್ನು ಗೊರವಯ್ಯ ನುಡಿದಿದ್ದು, ಇಟ್ಟ ರಾಮನ ಬಾಣ ಹುಸಿಯಿಲ್ಲ. ನ್ಯಾಯದ ತಕ್ಕಡಿ ಜರುಗಿತು, ಜ್ಞಾನದ ಹಣತೆ ಹಚ್ಚಿದರು, ಜೀವ ರಾಶಿಗೆ ಸಂಪಾಯಿತಲೇ ಪರಾಕ್ ಎಂದಿದ್ದಾರೆ. ಅಂದರೆ ರಾಜ್ಯದಲ್ಲಿ ಉತ್ತಮ ಮಳೆಯಾಗಿ ಸಕಲ ಜೀವರಾಶಿಗಳು ಸಂಪಾಗಿರುತ್ತದೆ. ಅದೇ ರೀತಿ ರಾಜ್ಯದಲ್ಲಿ ಮುಂದೆ ನಡೆಯಬಹುದಾದ ಅನಾಹುತಗಳ ಬಗ್ಗೆ ಜ್ಞಾನಿಗಳು ತಿಳಿಸುತ್ತಾರೆ. ಹೀಗಾಗಿ, ಜನರು ಜ್ಞಾನಿಗಳು ನುಡಿಯುವ ಭವಿಷ್ಯವನ್ನು ಗಂಭೀರವಾಗಿ ಪರಿಗಣಿಸಿ ಎಂದು ದೈವವಾಣಿಯನ್ನು ಗೊರವಯ್ಯ ನುಡಿದಿದ್ದಾರೆ.

ಇನ್ನೂ ರಾಜ್ಯದಲ್ಲಿ ಗಣ್ಯ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಾಗಿವೆ. ಕೆಲವರು ಜೈಲು ಪಾಲಾಗಿದ್ದಾರೆ. ಈ ಪ್ರಕರಣಗಳಲ್ಲಿ ಸತ್ಯಕ್ಕೆ ಜಯವಾಗುವುದಿಲ್ಲ. ಅನ್ಯಾಯದ ದಾರಿಯಲ್ಲಿದ್ದವರಿಗೆ ಜಯವಾಗುತ್ತದೆ. ಇದೆಲ್ಲದರ ನಡುವೆಯೇ ರಾಜ್ಯದ ಜನತೆಗೆ ಒಳ್ಳೆಯದಾಗಲಿದೆ ಎಂದು ದೈವವಾಣಿ ನುಡಿದಿದೆ.
'ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್ʼ
ಇನ್ನೂ ಹಾವೇರಿ ಜಿಲ್ಲೆಯ ರಾಣೆಬೇನ್ನೂರು ತಾಲೂಕಿನ ದೇವರಗುಡ್ಡದಲ್ಲಿ ಇರುವ ಐತಿಹಾಸಿಕ ಮಾಲತೇಶಸ್ವಾಮಿ ದೇವಸ್ಥಾನಲ್ಲಿ ಗೊರವಯ್ಯ 'ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್ ಕಾರ್ಣಿಕ ನುಡಿದಿದೆ. ಪ್ರತಿ ವರ್ಷದಂತೆ ಈ ಬಾರಿಯೂ ದಸರಾ ಹಬ್ಬದ ಪ್ರಯುಕ್ತ ಶ್ರೀ ಕ್ಷೇತ್ರ ದೇವರಗುಡ್ಡದ ಮಾಲತೇಶಸ್ವಾಮಿ ದೇವಸ್ಥಾನದ ಕಾರ್ಣಿಕೋತ್ಸವದಲ್ಲಿ ಕಾರ್ಣಿಕ ನುಡಿದಿದ್ದಾರೆ.
ಕಾರ್ಣಿಕ ನುಡಿ ಕುರಿತು ದೇವರಗುಡ್ಡದಲ್ಲಿ ಮಾಲತೇಶ ಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕ ಸಂತೋಷ್ ಭಟ್ ಗುರೂಜಿ ಅವರು ವಿವರಣೆ ನೀಡಿದ್ದಾರೆ. ಆಕಾಶದತ್ತ ಚಿಗುರಿತಲೇ, ಬೇರೆಲ್ಲಾ ಮುತ್ತಾಯಿತಲೇ ಪರಾಕ್... ಆಕಾಶದತ್ತ ಚಿಗುರಿತಲೇ ಅಂದರೆ ಒಳ್ಳೆ ಮಳೆ ಆಗುತ್ತೆ, ಬೇರೆಲ್ಲಾ ಮುತ್ತಾಯಿತಲೇ ಅಂದರೆ ರೈತರಿಗೆ ಒಳ್ಳೆ ಬೆಳೆ ಬರುತ್ತೆ, ಅದನ್ನ ತೆಗೆದುಕೊಳ್ಳೋ ಫಲಾನುಭವಿಗಳಿಗೂ ಒಳ್ಳೆದಾಗುತ್ತೆ ಎಂಬ ಅರ್ಥದಲ್ಲಿ ತಿಳಿಸಿದ್ದಾರೆ.
ಇತ್ತ ರಾಜ್ಯ ರಾಜಕೀಯಕ್ಕೆ ಸಂಬಂಧಿಸಿದಂತೆ ಹೇಳುವುದಾದರೇ ಆಕಾಶದತ್ತ ಚಿಗುರೀತಲೇ, ಅಂದರೆ ಈಗಿರುವ ನಾಯಕತ್ವ ಆಕಾಶದತ್ತ ಚಿಗುರಿಬಿಟ್ಟಿದೆ ಬೇರೆಲ್ಲಾ ಮುತ್ತಾಯಿತಲೇ ಅಂದರೆ ಅವರಿಗೆಲ್ಲಾ ಬೆನ್ನೆಲುಬಾಗಿ ನಿಂತಿರೋದು ನೀವೆಲ್ಲಾ ನೋಡಿರಬಹುದು ಕಾನೂನು ವ್ಯವಸ್ಥೆಯಲ್ಲಿ ಏನು ಬದಲಾವಣೆ ಆದರೂ ಕೂಡಾ ಈಗಿರುವ ನಾಯಕತ್ವ ಹೇಳಿದಂಗೆ ಅವರು ಒಪ್ಪಿಕೊಳ್ತಾರೆ ಅಂತ ಬೇರುಗಳೆಲ್ಲಾ ಮುತ್ತಾಯಿತಲೇ ಅಂದರೆ ಆಕಾಶತ್ತ ಚಿಗುರಿರೋ ಗಿಡ ಹೇಳಿದಂಗೆ ಬೇರುಗಳು ಒಪ್ಪಿಕೊಳ್ತಾವೆ ಅಂತ ಅರ್ಥದಲ್ಲಿ ಶ್ರೀ ಕ್ಷೇತ್ರ ದೇವರಗುಡ್ಡದ ಮಾಲತೇಶಸ್ವಾಮಿ ದೇವಸ್ಥಾನ ಗೊರವಯ್ಯ ಕಾರ್ಣಿಕವನ್ನ ವ್ಯಾಕ್ಯಾನಿಸಿದ್ದಾರೆ.
ಅದ್ದೂರಿ ಹಾಸನಾಂಬ ಜಾತ್ರಾ ಮಹೋತ್ಸವ
ವರ್ಷಕ್ಕೊಮ್ಮೆ ದರ್ಶನ ಭಾಗ್ಯ ಕರುಣಿಸೋ ಹಾಸನಾಂಬ ಜಾತ್ರಾ ಮಹೋತ್ಸವವನ್ನು ಈ ಭಾರಿ ಅದ್ದೂರಿಯಾಗಿ ನಡೆಸೋದಕ್ಕೆ ಜಿಲ್ಲಾಡಳಿತ ಸಿದ್ಧತೆ ಮಾಡಿಕೊಳ್ತಿದೆ. ಇದೇ ತಿಂಗಳು ಅಕ್ಟೋಬರ್ 24 ರಿಂದ ನವೆಂಬರ್ 3 ರ ವರೆಗೂ ಹಾಸನಾಂಬೆ ಗರ್ಭಗುಡಿಯ ಬಾಗಿಲು ತೆರೆದಿರಲಿದ್ದು, ಈ ಭಾರಿಯೂ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುವ ನಿರೀಕ್ಷೆಯಿದೆ. ಬರುವ ಭಕ್ತರಿಗೆ ಯಾವುದೇ ತೊಂದರೆಯುಂಟಾಗದಂತೆ ನೋಡಿಕೊಳ್ಳೋದ್ರ ಜತೆಗೆ, ಬಹಳ ಆಕರ್ಷಣೀಯವಾಗಿ ಹಾಗೂ ಅದ್ದೂರಿಯಾಗಿ ಜಾತ್ರಾ ಮಹೋತ್ಸವ ನಡೆಸಲಾಗುವುದು.












Click it and Unblock the Notifications