Police-Advocate Protest: ಗೃಹ ಇಲಾಖೆ ಮೇಲೆ ಸರ್ಕಾರದ ನಿಯಂತ್ರಣ ತಪ್ಪಿದೆ: ಬೊಮ್ಮಾಯಿ
ಬೆಂಗಳೂರು, ಡಿಸೆಂಬರ್ 04: ಚಿಕ್ಕಮಗಳೂರಿನಲ್ಲಿ ಪೋಲಿಸರೇ ಪ್ರತಿಭಟನೆ ಮಾಡುತ್ರಿದ್ದು, ವಕೀಲರೂ ಪೊಲೀಸರ ವಿರುದ್ದ ಪ್ರತಿಭಟನೆ ನಡೆಸುತ್ತಿದ್ದಾರೆ. ವಕೀಲರು ಮತ್ತು ಪೊಲೀಸರ ನಡುವೆ ಸಂಘರ್ಷ ಆಗುತ್ತಿರುವುದು ಆತಂಕಕಾರಿ ಬೆಳವಣಿಗೆ. ಕಾನೂನು ಸುವ್ಯವಸ್ಥೆ ಹದಗೆಟ್ಟು ಗೃಹ ಇಲಾಖೆ ಮೇಲೆ ಸರ್ಕಾರ ಮತ್ತು ಅಧಿಕಾರಿಗಳ ನಿಯಂತ್ರಣ ತಪ್ಪಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು.
ಪ್ರಕರಣವೊಂದರ ಸಂಬಂಧ ಚಿಕ್ಕಮಗಳೂರಿನಲ್ಲಿ ಪೊಲೀಸರು-ವಕೀಲರ ಮಧ್ಯೆ ಗಲಾಟೆ ನಡೆದಿದೆ. ಈ ಕುರಿತು ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಟ್ವೀಟ್ ಮೂಲಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಗೃಹ ಇಲಾಖೆಯು ಈ ರೀತಿ ಅಶಿಸ್ತು ತೋರುತ್ತಿರುವುದು ಒಂದು ಗಂಭೀರವಾದ ವಿಚಾರ. ಸರ್ಕಾರ ಈ ಕೂಡಲೇ ಇದನ್ನು ಸರಿಪಡಿಸದಿದ್ದರೆ ರಾಜ್ಯದಲ್ಲಿ ಅರಾಜಕತೆಗೆ ಉಂಟಾಗಲು ಕಾರಣವಾಗುತ್ತದೆ. ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಕೂಡಲೇ ಮಧ್ಯ ಪ್ರವೇಶಿಸಿ ಕಾನೂನು ಎಲ್ಲರೂ ಪಾಲಿಸಬೇಕು ಎಂಬಂತಹ ವಾತಾವರಣ ಮೂಡಿಸುವ ಕೆಲಸ ಮಾಡಬೇಕು ಎಂದು ಅವರು ಆಗ್ರಹಿಸಿದರು.
ಚಿಕ್ಕಮಗಳೂರಿನಲ್ಲಿ ಪೋಲಿಸರೇ ಪ್ರತಿಭಟನೆ ಮಾಡುತ್ತಿದ್ದು, ವಕೀಲರೂ ಪೊಲೀಸರ ವಿರುದ್ದ ಪ್ರತಿಭಟನೆ ನಡೆಸುತ್ತಿದ್ದಾರೆ. ವಕೀಲರು ಮತ್ತು ಪೊಲೀಸರ ನಡುವೆ ಸಂಘರ್ಷ ಆಗುತ್ತಿರುವುದು ಒಂದು ಆತಂಕಕಾರಿ ಬೆಳವಣಿಗೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಗೃಹ ಇಲಾಖೆಯ ಮೇಲೆ ಸರ್ಕಾರದ ಮತ್ತು ಅಧಿಕಾರಿಗಳ ನಿಯಂತ್ರಣ ತಪ್ಪಿದೆ.
— Basavaraj S Bommai (@BSBommai) December 4, 2023
ಗೃಹ ಇಲಾಖೆಯು ಈ…
ವಕೀಲರ ಮೇಲಿನ ಹಲ್ಲೆ ಪ್ರಕರಣ ಸಿಐಡಿಗೆ
ಚಿಕ್ಕಮಗಳೂರಿನ ಪೊಲೀಸ್ ಠಾಣೆಯಲ್ಲಿ ವಕೀಲರ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿ ಆದೇಶಿಸಿದೆ. ಪ್ರಕರಣ ಸಂಬಂಧ ಡಿವೈಎಸ್‌ಪಿ ಶೈಲೇಂದ್ರ ನೇತೃತ್ವದಲ್ಲಿ ತನಿಖೆ ನಡೆಯುತ್ತಿತ್ತು. ಇದೀಗ ಪ್ರಕರಣದ ತನಿಖೆ ಸಿಐಡಿಗೆ ವಹಿಸಲಾಗಿದೆ.
ಪ್ರಕರಣದ ಹಿನ್ನೆಲೆ ಏನು?
ಕಳೆದ ನವೆಂಬರ್ 30ರಂದು ಚಿಕ್ಕಮಗಳೂರು ಪೊಲೀಸ್ ಠಾಣೆಯಲ್ಲಿ ಹೆಲ್ಮೆಟ್ ವಿಚಾರಕ್ಕೆ ಕುರಿತಂತೆ ವಕೀಲ ಪ್ರೀತಮ್ ಎಂಬುವವರ ಮೇಲೆ ಪೊಲೀಸ್ ಇನ್ಸ್‌ಪೆಕ್ಟರ್, ಪಿಎಸ್‌ಐ ಸೇರಿದಂತೆ ಒಟ್ಟು ಆರು ಮಂದಿ ಪೊಲೀಸ್ ಸಿಬ್ಬಂದಿ ತೀವ್ರವಾಗಿ ಹಲ್ಲೆ ನಡೆಸಿದ್ದರು.

ಘಟನೆ ತಿಳಿಯುತ್ತಿದ್ದಂತೆ ಪೊಲೀಸ್ ಠಾಣೆ ಎದುರು ವಕೀಲರು ಜಮಾಯಿಸಿ ಆಕ್ರೋಶ ಹೊರ ಹಾಕಿದ್ದರು. ಈ ವೇಳೆ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರ ಹಲ್ಲೆ ಮಾಡಿದ್ದ ಆರು ಮಂದಿಯನ್ನು ಅಮಾನತು ಮಾಡಿದ್ದರು. ಜೊತೆಗೆ ಆ ಪೊಲೀಸರ ವಿರುದ್ಧ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾಗುತ್ತಿದ್ದಂತೆ ಪೊಲೀಸ್ ಸಿಬ್ಬಂದಿ ತಲೆ ಮರೆಸಿಕೊಂಡಿದ್ದಾರೆ.
ಪ್ರಕರಣ ತನಿಖೆ ನಡೆಯುತ್ತಿರುವಾಗಲೇ ವಕೀಲರು ಪೊಲೀಸ್ ಠಾಣೆಯಲ್ಲಿ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಸಂಬಂದ ಪೊಲೀಸರ ಕುಟುಂಬಗಳು ಪ್ರತಿಭಟನೆ ಮಾಡಿದ್ದು, ವಕೀಲರ ವಿರುದ್ಧ ಪ್ರಕರಣ ದಾಖಲಾಗಿದೆ. ವಿವಿಧ ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ. ಇದೆಲ್ಲ ನಿಯಂತ್ರಿಸುವಂತೆ ಬೊಮ್ಮಾಯಿ ಆಗ್ರಹಿಸಿದ್ದಾರೆ.












Click it and Unblock the Notifications