ಶಾಸಕಾಂಗ ಸಭೆಗೆ ಉಮೇಶ್ ಜಾಧವ್ ಗೈರು, ಸಿದ್ದರಾಮಯ್ಯಗೆ ಪತ್ರ
ಬೆಂಗಳೂರು, ಜನವರಿ 18 : ಚಿಂಚೋಳಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ.ಉಮೇಶ್ ಜಾಧವ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಗೈರಾಗಿದ್ದಾರೆ. ಸಿದ್ದರಾಮಯ್ಯ ಅವರಿಗೆ ಅವರು ಫ್ಯಾಕ್ಸ್ ಮೂಲಕ ಪತ್ರವೊಂದನ್ನು ಕಳಿಸಿದ್ದಾರೆ.
ಶುಕ್ರವಾರ ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಯುತ್ತಿದೆ. 5 ಶಾಸಕರು ಸಭೆಗೆ ಗೈರು ಹಾಜರಾಗಿದ್ದಾರೆ.

ಚಿಂಚೋಳಿ ಕ್ಷೇತ್ರದ ಶಾಸಕ ಡಾ.ಉಮೇಶ್ ಜಾಧವ್ ಅವರು ಸಹ ಗೈರಾಗಿದ್ದು, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಅವರು ಫ್ಯಾಕ್ಸ್ ಮೂಲಕ ಪತ್ರವನ್ನು ಬರೆದಿದ್ದಾರೆ. ಸಭೆಯಲ್ಲಿ ಸಿದ್ದರಾಮಯ್ಯ ಪತ್ರವನ್ನು ಮಾಧ್ಯಮಗಳಿಗೆ ಪ್ರದರ್ಶಿಸಿದರು.
ಪತ್ರದಲ್ಲಿ ಏನಿದೆ? : ಶಾಸಕಾಂಗ ಪಕ್ಷದ ಸಭೆಯಲ್ಲಿ ಹಾಜರಾಗುವಂತೆ ವಿಕಾಸಸೌಧದ ನನ್ನ ಕೊಠಡಿಗೆ ಪತ್ರ ಬಂದಿದೆ. ನಾನು ಸಭೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಅನಾರೋಗ್ಯದ ಕಾರಣದಿಂದಾಗಿ ನಾನು ಪ್ರಯಾಣ ಮಾಡುವಂತಿಲ್ಲ ಎಂದು ಉಮೇಶ್ ಜಾಧವ್ ಅವರು ಪತ್ರದಲ್ಲಿ ವಿವರಣೆ ನೀಡಿದ್ದಾರೆ.













Click it and Unblock the Notifications