ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸರ್ಕಾರದ ಭವಿಷ್ಯ ನಿರ್ಧರಿಸಲಿರುವ ಕರ್ನಾಟಕದ 2 ವಿಧಾನಸಭಾ ಕ್ಷೇತ್ರಗಳು

|
Google Oneindia Kannada News

ಬೆಂಗಳೂರು, ಮೇ 19: ಚಿಂಚೋಳಿ ಹಾಗೂ ಕುಂದಗೋಳ ವಿಧಾನಸಭಾ ಕ್ಷೇತ್ರಗಳಿಗೆ ಇಂದು ನಡೆಯುತ್ತಿರುವ ಮತದಾನವು ಎಚ್‌ಡಿ ಕುಮಾರಸ್ವಾಮಿ ನೇತೃತ್ವದ ಸರ್ಕಾದ ಭವಿಷ್ಯ ನಿರ್ಧರಿಸಲಿದೆ ಎಂದು ಹೇಳಲಾಗುತ್ತಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಸರ್ಕಾರದ ರಕ್ಷಣೆಗೆ ಎರಡು ಕ್ಷೇತ್ರಗಳನ್ನು ಗೆಲ್ಲುವುದು ಕಾಂಗ್ರೆಸ್‌ಗೆ ಅನಿವಾರ್ಯವಾಗಿದೆ. ಒಂದೊಮ್ಮೆ ಬಿಜೆಪಿ ಗೆದ್ದರೆ ವಿಧಾನಸಭೆಯಲ್ಲಿ ಬಿಜೆಪಿ ಶಾಸಕರ ಸಂಖ್ಯೆ 106ಕ್ಕೆ ಏರಲಿದೆ.

ಕುಂದಗೋಳ ಉಪ ಚುನಾವಣೆ : ಬಿಜೆಪಿಯ ಚಿಕ್ಕನಗೌಡರ್ ಮತದಾನಕುಂದಗೋಳ ಉಪ ಚುನಾವಣೆ : ಬಿಜೆಪಿಯ ಚಿಕ್ಕನಗೌಡರ್ ಮತದಾನ

ಇದರಿಂದ ಕಾಂಗ್ರೆಸ್ ಶಾಸಕರನ್ನು ಸೆಳೆದು ಸರ್ಕಾರ ರಚಿಸಲು ಬಿಜೆಪಿ ತನ್ನ ಪ್ರಯತ್ನವನ್ನು ಇನ್ನಷ್ಟು ಹೆಚ್ಚಿಸುವ ಸಾಧ್ಯತೆ ಇದೆ.

Chincholi kundgol bypolls today
ಹೀಗಾಗಿ ಈ ಎರಡೂ ಕ್ಷೇತ್ರಗಳು ಕಾಂಗ್ರೆಸ್ ಹಾಗೂ ಬಿಜೆಪಿಗೆ ಪ್ರತಿಷ್ಟೆಯ ಕ್ಷೇತ್ರವಾಗಿ ಮಾರ್ಪಟ್ಟಿದೆ. ಸಿಎಸ್​ ಶಿವಳ್ಳಿ ಸಾವಿನಿಂದ ತೆರವಾಗಿದ್ದ ಕುಂದಗೋಳ ಹಾಗೂ ಉಮೇಶ್​ ಜಾಧವ್​ ರಾಜೀನಾಮೆಯಿಂದ ತೆರವಾಗಿದ್ದ ಚಿಂಚೋಳಿ ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯುತ್ತಿದೆ.

ಇನ್ನು ಕಳೆದ ತಿಂಗಳು ನಡೆದಿದ್ದ ಲೋಕಸಭೆ ಚುನಾವಣೆಯ ವೇಳೆ ಮತದಾನ ಮಾಡಿದ್ದ ವ್ಯಕ್ತಿಗಳ ಎಡಗೈ ತೋರು ಬೆರಳಿಗೆ ಶಾಹಿ ಹಾಕಲಾಗಿತ್ತು. ಈಗ ವಿಧಾನಸಭೆ ಉಪಚುನಾವಣೆಗೆ ಎಡಗೈ ಮಧ್ಯದ ಬೆರಳಿಗೆ ಅಳಿಸಲಸಾಧ್ಯವಾದ ಶಾಹಿಯನ್ನು ಹಾಕುತ್ತಿದೆ.

ಚಿಂಚೋಳಿ ಉಪ ಚುನಾವಣಾ ಕಣ : ಪಕ್ಷಗಳ ಬಲಾಬಲಚಿಂಚೋಳಿ ಉಪ ಚುನಾವಣಾ ಕಣ : ಪಕ್ಷಗಳ ಬಲಾಬಲ

ಈ ಬಗ್ಗೆ ರಾಜ್ಯ ಚುನಾವಣಾ ಆಯೋಗ ಮಾಹಿತಿ ನೀಡಿದ್ದು, ಕಳೆದ ತಿಂಗಳು ನಡೆದಿದ್ದ ಲೋಕಸಭಾ ಚುನಾವಣೆ ವೇಳೆ ಇಲ್ಲಿನ ಮತದಾರರಿಗೆ ಎಡಗೈ ತೋರು ಬೆರಳಿಗೆ ಶಾಹಿ ಹಾಕಲಾಗಿತ್ತು.

ಈಗ ವಿಧಾನಸಭೆ ಉಪಚುನಾವಣೆಗೆ ಎಡಗೈ ಮಧ್ಯದ ಬೆರಳಿಗೆ ಅಳಿಸಲಸಾಧ್ಯವಾದ ಶಾಹಿಯನ್ನು ಹಾಕಲಾಗುತ್ತದೆ. ಇನ್ನು ಈ ಎರಡೂ ಕ್ಷೇತ್ರಗಳಲ್ಲಿ ಒಟ್ಟಾರೆ 1,016 ಸಿಬ್ಬಂದಿ ಚುನಾವಣಾ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಎಂದು ಆಯೋಗ ಮಾಹಿತಿ ನೀಡಿದೆ.

English summary
By-elections to the Kundagol and Chincholi Assembly constituencies in Karnataka Today.The Kundagol seat fell vacant following the death of Municipal Administration Minister and Congress MLA CS Shivalli. By-polls to the Chincholi seat have been necessitated after Congress MLA Umesh Jadhav quit his seat and fought the Lo
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X