ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯೇಸು ಪ್ರತಿಮೆ ನಿರ್ಮಾಣ; ಸಿಎಂ ಭೇಟಿಯಾದ ಕ್ರೈಸ್ತ ಪಾದ್ರಿಗಳ ನಿಯೋಗ

|
Google Oneindia Kannada News

ಬೆಂಗಳೂರು, ಜನವರಿ 06 : ಕ್ರೈಸ್ತ ಸಮುದಾಯದ ಮುಖಂಡರು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಭೇಟಿ ಮಾಡಿದರು. ರಾಮನಗರ ಕಪಾಲಿ ಬೆಟ್ಟದಲ್ಲಿ ಯೇಸು ಕ್ರಿಸ್ತನ ಪ್ರತಿಮೆ ನಿರ್ಮಾಣದ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ.

ಭಾನುವಾರ ಕ್ರೈಸ್ತ ಸಮುದಾಯದ ಧಾರ್ಮಿಕ ಮುಖಂಡರು ಯಡಿಯೂರಪ್ಪ ಭೇಟಿಯಾಗಿದ್ದರು. ಕಪಾಲಿ ಬೆಟ್ಟದಲ್ಲಿ ಯೇಸು ಕ್ರಿಸ್ತನ ಪ್ರತಿಮೆ ನಿರ್ಮಾಣಕ್ಕೆ ಅಡ್ಡಿಪಡಿಸದಂತೆ ಮನವಿಯನ್ನು ಸಲ್ಲಿಸಿದರು.

ಏಸು ಪ್ರತಿಮೆ ನಿರ್ಮಿಸಲು ಮುಂದಾದ ಡಿಕೆಶಿಗೆ ಬಿಎಸ್ವೈ ಪುತ್ರ ಕೇಳಿದ 3 ಪ್ರಶ್ನೆಗಳು ಏಸು ಪ್ರತಿಮೆ ನಿರ್ಮಿಸಲು ಮುಂದಾದ ಡಿಕೆಶಿಗೆ ಬಿಎಸ್ವೈ ಪುತ್ರ ಕೇಳಿದ 3 ಪ್ರಶ್ನೆಗಳು

ಬೆಂಗಳೂರು ಧರ್ಮಕ್ಷೇತ್ರದ ಡಾ. ಪೀಟರ್ ಮಚಾವೊ ನೇತೃತ್ವದ ನಿಯೋಗ ಯಡಿಯೂರಪ್ಪ ಭೇಟಿಯಾಗಿತ್ತು. ಯೇಸು ಪ್ರತಿಮೆ ನಿರ್ಮಾಣ ಕಾಮಗಾರಿ ಮುಂದುವರೆಸಲು ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು.

ಏಸು ಪ್ರತಿಮೆ ಟೀಕಿಸಿದವರಿಗೆ ತಿರುಗೇಟು ನೀಡಿದ ಡಿಕೆಶಿಏಸು ಪ್ರತಿಮೆ ಟೀಕಿಸಿದವರಿಗೆ ತಿರುಗೇಟು ನೀಡಿದ ಡಿಕೆಶಿ

Christian Community Leaders Meets BS Yediyurappa

"ಯೇಸು ಪ್ರತಿಮೆ ನಿರ್ಮಾಣ ವಿಚಾರದಲ್ಲಿ ರಾಜಕೀಯ ಮಾಡಬಾರದು. ಸುಮಾರು ವರ್ಷಗಳಿಂದಲೂ ಕ್ರೈಸ್ತ ಸಮುದಾಯ ಕಪಾಲಿ ಬೆಟ್ಟದಲ್ಲಿ ಯೇಸುವನ್ನು ಪೂಜಿಸಿಕೊಂಡು ಬಂದಿದ್ದಾರೆ. ಈಗ ಅದೇ ಜಾಗದಲ್ಲಿ ಯೇಸು ಪ್ರತಿಮೆ ನಿರ್ಮಾಣ ಮಾಡಲಾಗುತ್ತಿದೆ" ಎಂದು ಪೀಟರ್ ಮಚಾವೊ ಹೇಳಿದರು.

ಅಯೋಧ್ಯೆಯಲ್ಲಿ ಶ್ರೀರಾಮ ಪ್ರತಿಮೆ ಸ್ಥಾಪನೆ: ಎತ್ತರ, ಖರ್ಚು ಪೂರ್ಣ ಮಾಹಿತಿ ಅಯೋಧ್ಯೆಯಲ್ಲಿ ಶ್ರೀರಾಮ ಪ್ರತಿಮೆ ಸ್ಥಾಪನೆ: ಎತ್ತರ, ಖರ್ಚು ಪೂರ್ಣ ಮಾಹಿತಿ

"ಕಪಾಲಿ ಬೆಟ್ಟದಲ್ಲಿ ಹಿಂದೂ ದೇವತೆಗಳನ್ನು ಪೂಜಿಸುತ್ತಿದ್ದ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ. ಯಾರನ್ನೂ ಮತಾಂತರ ಮಾಡುತ್ತಿಲ್ಲ. ಮತಾಂತರ ಮಾಡುವುದು ಅಷ್ಟು ಸುಲಭದ ಕೆಲಸವೂ ಅಲ್ಲ. ನಾವು ನಾಲ್ಕೂವರೆ ಲಕ್ಷ ಮಕ್ಕಳಿಗೆ ಶಿಕ್ಷಣ ನೀಡುತ್ತಿದ್ದೇವೆ" ಎಂದರು.

ರಾಮನಗರ ಕಪಾಲಿ ಬೆಟ್ಟದಲ್ಲಿ ಯೇಸು ಕ್ರಿಸ್ತನ ಪ್ರತಿಮೆ ನಿರ್ಮಾಣದ ವಿಚಾರ ಭಾರೀ ಚರ್ಚೆಗೆ ಕಾರಣವಾಗಿದೆ. ಯಾವುದೇ ಕಾರಣಕ್ಕೂ ಪ್ರತಿಮೆ ನಿರ್ಮಾಣ ಮಾಡಲು ಅವಕಾಶವನ್ನು ನೀಡಬಾರದು ಎಂದು ವಿವಿಧ ಸಂಘಟನೆಗಳು ಸರ್ಕಾರವನ್ನು ಒತ್ತಾಯಿಸಿವೆ.

English summary
Christian community leaders met chief minister of Karnataka B.S. Yediyurappa and discuss about Yesu Krista statue at Kapali Betta in Ramanagara district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X