Christmas Special Bus: 1,000 ಹೆಚ್ಚುವರಿ ವಿಶೇಷ KSRTC ಬಸ್‌ಗಳ ಸೇವೆ, ಮಾರ್ಗಗಳು & ದಿನಾಂಕಗಳನ್ನು ತಿಳಿಯಿರಿ
ಬೆಂಗಳೂರು, ಡಿಸೆಂಬರ್, 20: ಸಾಮಾನ್ಯವಾಗಿ ಹಬ್ಬಗಳ ಸಮಯದಲ್ಲಿ ಬೆಂಗಳೂರಿನಿಂದ ತಮ್ಮ ಊರುಗಳಿಗೆ ತೆರಳುವವರ ಸಂಖ್ಯೆ ಹೆಚ್ಚಾಗಿಯೇ ಇರುತ್ತದೆ. ಆದ್ದರಿಂದ ವೇಳೆ ಜನದಟ್ಟಣೆ ತಡೆಯುವ ಉದ್ದೇಶದಿಂದ ಕೆಎಸ್‌ಆರ್‌ಟಿಸಿ ವಿಶೇಷ ಬಸ್‌ಗಳನ್ನು ಬಿಡುತ್ತಲೇ ಬಂದಿದೆ. ಹಾಗೆಯೇ ಇದೀಗ ಕ್ರಿಸ್ಮಸ್ ಇನ್ನು ಕೆಲವೇ ದಿನಗಳು ಬಾಕಿಯಿದೆ. ಈ ರಜೆ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕೆ ತಕ್ಕಂತೆ KSRTC 1,000 ಹೆಚ್ಚುವರಿ ಬಸ್ ಸೇವೆ ಕಲ್ಪಿಸಿದೆ. ಹಾಗಾದರೆ ಈ ಯಾವೆಲ್ಲ ಬಸ್‌ಗಳನ್ನು ಬಿಡಲಾಗಿದೆ ಹಾಗೂ ದಿನಾಂಕಗಳ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಈ ಜಿಲ್ಲೆಗಳಿಗೆ KSRTC ಬಸ್ ಸೇವೆ
ಕೆಆಎಸ್‌ಆರ್‌ಟಿಸಿಯು ಡಿಸೆಂಬರ್ 22ರಿಂದ 24ರವರೆಗೆ ನಗರದ ವಿವಿಧ ಬಸ್ ನಿಲ್ದಾಣಗಳಿಂದ ಈ ಹೆಚ್ಚುವರಿ ಬಸ್ ಸೇವೆ ಒದಗಿಸಲಿದೆ. ಈ ಬಸ್‌ಗಳು ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್‌ಗೆ ತೆರಳಲಿವೆ.

ಯಾವ್ಯಾವ ನಿಲ್ದಾಣದಿಂದ ಎಲ್ಲೆಲ್ಲಿಗೆ ಬಸ್ ಸೇವೆ?
ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿಗೆ ಹೆಚ್ಚುವರಿ ಬಸ್‌ಗಳು ಹೊರಡಲಿವೆ. ಶಾಂತಿನಗರ ಬಸ್ ನಿಲ್ದಾಣದಿಂದ ಮಧುರೈ, ಕುಂಭಕೋಣಂ, ತಿರುಚಿ, ಚೆನ್ನೈ, ಕೊಯಮತ್ತೂರ್, ವಿಜಯವಾಡ, ಹೈದರಾಬಾದ್ ಸೇರಿದಂತೆ ತಮಿಳುನಾಡು ಆಂಧ್ರಪ್ರದೇಶ, ತೆಲಂಗಾಣಕ್ಕೆ ಬಸ್‌ಗಳು ಹೋಗಲಿವೆ.
ಡಿಸೆಂಬರ್ 25ರಂದು ಮತ್ತಷ್ಟು ವಿಶೇಷ ಬಸ್‌ಗಳು ಸಂಚರಿಸಲಿದ್ದು, ಸಂಸ್ಥೆಯ ವೆಬ್‌ಸೈಟ್ www.ksrtc.karnataka.gov.in ಮೂಲಕ ಆಸನಗಳನ್ನು ಕಾಯ್ದಿರಿಸಬಹುದಾಗಿದೆ ಎಂದು ಕೆಎಸ್‌ಆರ್‌ಟಿಸಿ ಮಾಹಿತಿ ನೀಡಿದೆ. ನಾಲ್ಕು ಅಥವಾ ಹೆಚ್ಚು ಜನರ ಪ್ರಯಾಣದ ಟಿಕೆಟ್ ಬುಕ್ಕಿಂಗ್ ಮೇಲೆ ಶೇಕಡಾ 5ರಷ್ಟು ಹಾಗೂ ಹೋಗಿ ಬರುವ ಟಿಕೆಟ್‌ಗಳನ್ನು ಒಮ್ಮೆಲೆ ಬುಕ್ ಮಾಡಿದರೆ ಪ್ರಯಾಣದ ಟಿಕೆಟ್ ಮೇಲೆ ಶೇಕಡಾ 10ರಷ್ಟು ರಿಯಾಯಿತಿ ಸಿಗಲಿದೆ ಎಂದು ಕೆಎಸ್‌ಆರ್‌ಟಿಸಿ ತನ್ನ ಪ್ರಕಟಣೆ ಮಾಹಿತಿ ನೀಡಿದೆ.
ಶೀಘ್ರದಲ್ಲೇ ರಸ್ತೆಗಿಳಿಯಲಿವೆ 100 ನಾನ್ ಎಸಿ ಇ-ಬಸ್‌ಗಳು
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು (ಬಿಎಂಟಿಸಿ) ಹೊಸವರ್ಷಕ್ಕೆ 100 ಹೊಸ ನಾನ್-ಎಸಿ ಎಲೆಕ್ಟ್ರಿಕ್ ಬಸ್‌ಗಳನ್ನು ಪರಿಚಯಿಸಲಿದೆ. ಹಾಗಾದರೆ ಈ ಬಸ್‌ಗಳ ವಿಶೇಷತೆ ಹಾಗೂ ಬಸ್‌ಗಳು ಸಂಚರಿಸುವ ಮಾರ್ಗಗಳ ವಿವರವನ್ನು ಇಲ್ಲಿ ತಿಳಿಯಿರಿ.
ಈ ಬಸ್‌ಗಳ ಬಣ್ಣ ನೀಲಿ ಆಗಿದ್ದು, 12 ಮೀಟರ್ ಉದ್ದವಿರುತ್ತವೆ. ಟಾಟಾ ಮೋಟಾರ್ಸ್‌ನಿಂದ ತಯಾರಿಸಲ್ಪಟ್ಟ ನಾನ್-ಎಸಿ ಬಸ್‌ನ ಮೊದಲ ಈ ಮೂಲ ಮಾದರಿಯು 5 ತಿಂಗಳ ಹಿಂದೆ ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ವಾಹನ (FAME-II)ನಡಿ ಈ ಬಸ್‌ಗಳನ್ನು ತಯಾರು ಮಾಡಲಾಗಿದೆ.
ನಗರ ಮತ್ತು ಉಪನಗರ ಪ್ರದೇಶಗಳು ಸೇರಿದಂತೆ 12 ಮಾರ್ಗಗಳಲ್ಲಿ ಈ ಬಸ್‌ಗಳು ಕಾರ್ಯನಿರ್ವಹಿಸಲಿವೆ ಎಂದು ಬಿಎಂಟಿಸಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನಿಗಮವು ಸಿಬಿಡಿ ಪ್ರದೇಶಗಳು ಮತ್ತು ಸರ್ಜಾಪುರ, ಚಂದಾಪುರ, ಬನ್ನೇರುಘಟ್ಟ ರಸ್ತೆ ಮತ್ತು ಇತರ ಮಾರ್ಗಗಳಲ್ಲಿ ಸಂಚರಿಸಲಿದೆ. ಇನ್ನು ಈ ಬಸ್‌ನಲ್ಲಿ ಟಿಕೆಟ್ ದರಗಳು ಸಾಮಾನ್ಯವಾಗಿರುತ್ತದೆ. ಮತ್ತು ಶಕ್ತಿ ಯೋಜನೆಯ ಫಲಾನುಭವಿಗಳು ಕೂಡ ಈ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ತಿಳಿಸಿದ್ದಾರೆ.
ಇನ್ನು ಇದೇ ಮಾದರಿಯ 552 ಹೊಸ ಬಸ್‌ಗಳನ್ನು ಖರೀದಿಸಲಾಗುವುದು. ಚೆನ್ನೈನಲ್ಲಿ ಮೆಟ್ರೋಪಾಲಿಟನ್ ಟ್ರಾನ್ಸ್‌ಪೋರ್ಟ್ ಕಾರ್ಪೊರೇಷನ್ (ಎಂಟಿಸಿ)ಗಾಗಿ 352 ಮತ್ತು ಮಧುರೈ ಮತ್ತು ಕೊಯಮತ್ತೂರ್‌ಗೆ 200 ಬಸ್‌ಗಳನ್ನು ಖರೀದಿಸಲಾಗುತ್ತದೆ. ಈ ಬಸ್‌ಗಳ ವೆಚ್ಚ 500.9 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಸರ್ಕಾರವು ಆರಂಭದಲ್ಲಿ 442 ಬಸ್‌ಗಳನ್ನು ಖರೀದಿಸಲು ಯೋಜಿಸಿತ್ತು, ಆದರೆ ಹೈಕೋರ್ಟ್ 25% ರಷ್ಟು ಹೆಚ್ಚಳಕ್ಕೆ ನಿರ್ದೇಶನ ನೀಡಿತು.
ಸರ್ಕಾರ ಕನಿಷ್ಠ 699 ಲೋ ಫ್ಲೋರ್ ಬಸ್‌ಗಳನ್ನು ಖರೀದಿಸಬೇಕು ಎಂಬುದು ಅಂಗವಿಕಲರ ಹಕ್ಕುಗಳ ಹೋರಾಟಗಾರರ ವಾದ. ಬಸ್ ಖರೀದಿಯಲ್ಲಿನ ವಿಳಂಬದಿಂದಾಗಿ ಗಾಲಿ ಕುರ್ಚಿ ಬಳಕೆದಾರರಿಗೆ ತೊಂದರೆಯುಂಟಾಗಿದ್ದು, ಆಟೋ ಮತ್ತು ಕ್ಯಾಬ್‌ಗಳಿಗೆ ಸಾಕಷ್ಟು ಖರ್ಚು ಮಾಡುವಂತಾಗಿದೆ.
ಮುಂಬೈ-ನಾಸಿಕ್ ಮಾರ್ಗದಲ್ಲಿ 20 ಎಲೆಕ್ಟ್ರಿಕ್ ಎಸಿ ಬಸ್‌ಗಳನ್ನು ಪರಿಚಯಿಸಲು ಯೋಜಿಸಲಾಗಿದೆ. ಪ್ರಸ್ತುತ ಶಿವ ಶಾಹಿ ಎಸಿ ಬಸ್‌ಗಳನ್ನು ಬದಲಾಯಿಸುತ್ತಿದೆ. ಬಸ್‌ಗಳು 9 ಮೀಟರ್ ಉದ್ದದ ಮಧ್ಯಮ ಗಾತ್ರದ ವಾಹನಗಳಾಗಿದ್ದು, ಇದರಲ್ಲಿ 34 ಪ್ರಯಾಣಿಕರು ಪ್ರಯಾಣ ಮಾಡಬಹುದಾಗಿದೆ.
ಹಿಂದಿನ ಬಸ್‌ಗಳಲ್ಲಿನ ಎಸಿ ಅಸಮರ್ಪಕ ಕಾರ್ಯದ ಬಗ್ಗೆ ಪ್ರಯಾಣಿಕರ ದೂರುಗಳ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಮೊದಲ ಹಂತದಲ್ಲಿ ಮಹಾರಾಷ್ಟ್ರದ ನಗರಗಳಿಗೆ ಒಟ್ಟು 150 ಎಲೆಕ್ಟ್ರಿಕ್ ಎಸಿ ಬಸ್‌ಗಳು ಮತ್ತು 9 ಮೀಟರ್ ಉದ್ದದ 2,350 ಬಸ್‌ಗಳನ್ನು ಖರೀದಿಸಲಾಗುವುದು. ಈ ಬಸ್‌ಗಳು ಉತ್ತಮ ಕೂಲಿಂಗ್, ಶಬ್ದರಹಿತ ಕಾರ್ಯಾಚರಣೆ, ಆರಾಮದಾಯಕ ಪ್ರಯಾಣವನ್ನು ಒದಗಿಸುತ್ತದೆ.
ಆದರೆ ಸಿಬ್ಬಂದಿ ನೇಮಕಾತಿ ಮಾಡದಿರುವುದರಿಂದ ರಸ್ತೆ ಸಾರಿಗೆ ನಿಗಮಗಳು ಒದಗಿಸುವ ಸೇವೆಗಳ ಮೇಲೆ ಪರಿಣಾಮ ಬೀರಿದೆ. ಶಕ್ತಿ ಯೋಜನೆ ಜಾರಿಯಿಂದ ಪ್ರಯಾಣಿಕರ ದಟ್ಟಣೆ ಹಾಗೂ ಆದಾಯ ಹೆಚ್ಚಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC)ಸಿಬ್ಬಂದಿ ಕೊರತೆಯಿಂದಾಗಿ ತನ್ನ ಪ್ರಯಾಣವನ್ನು ಉತ್ತಮಗೊಳಿಸಲು ಸಾಧ್ಯವಾಗುತ್ತಿಲ್ಲ.
BMTC 1,857 ಚಾಲಕರು ಮತ್ತು ಕಂಡಕ್ಟರ್‌ಗಳ ಕೊರತೆಯನ್ನು ಎದುರಿಸುತ್ತಿದೆ. ಮತ್ತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಕೂಡ ಬಸ್‌ಗಳು ಸಿಬ್ಬಂದಿ ಕೊರತೆಯನ್ನು ಎದುರಿಸುತ್ತಿದೆ. ಆರ್‌ಟಿಸಿಗಳಿಗೆ 7 ವರ್ಷಗಳಿಂದ ಹೊಸ ಸಿಬ್ಬಂದಿ ನೇಮಕವಾಗಿಲ್ಲ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications