Traffic Advisory: ಬೆಂಗಳೂರಿನ ಈ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧ: ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು, ಡಿಸೆಂಬರ್​ 25: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕ್ರಿಸ್ಮಸ್ ಹಬ್ಬದ ಹಿನ್ನೆಲೆಯಲ್ಲಿ ಚರ್ಚ್‌ಗಳಿಗೆ ಜನಸಾಗರ ಹರಿದುಬರುತ್ತಿದೆ. ಇದರಿಂದಾಗಿ ಕೆಲವು ರಸ್ತೆಗಳಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಲಿದೆ. ಹೀಗಾಗಿ ಸುಗಮ ಸಂಚಾರಕ್ಕಾಗಿ ಕೆಲವು ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧ ಮತ್ತು ವಾಹನ ನಿಲುಗಡೆಯನ್ನು ನಿರ್ಬಂಧಿಸಿ ಬೆಂಗಳೂರು ಸಂಚಾರ ಪೊಲೀಸರು ಆದೇಶ ಹೊರಡಿಸಿದ್ದಾರೆ.

ಹೌದು, ಕ್ರಿಸ್​ಮಸ್​ ಹಬ್ಬ ಹಿನ್ನೆಲೆಯಲ್ಲಿ ಬೆಂಗಳೂರಿನ ಚರ್ಚ್​ಗಳಿಗೆ ಕ್ರೈಸ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ವಾಹನ ಸಂಚಾರದಿಂದ ಜನಸಾಮಾನ್ಯರಿಗೆ ಕಿರಿಕಿರಿ ಉಂಟಾಗುವ ಹಿನ್ನೆಲೆ ಬೆಂಗಳೂರು ಸಂಚಾರ ಪೊಲೂಸರು ಮಹತ್ವದ ಆದೇಶ ಹೊರಡಿಸಿದ್ದು, ಪಾರ್ಕಿಂಗ್‌ ನಿಷೇದಿಸಿದ್ದಾರೆ. ಪ್ರಮುಖವಾಗಿ ಬೆಂಗಳೂರಿನ ರಿಚರ್ಡ್ ಪಾರ್ಕ್ ಹತ್ತಿರ ಡೇವಿಸ್ ರಸ್ತೆಯಲ್ಲಿರುವ ಹೋಲಿ ಗೋಸ್ಟ್ ಚರ್ಚ್​ಗೆ ಬುಧವಾರ (ಡಿ.25) ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಲಿದ್ದಾರೆ. ಹೀಗಾಗಿ ಮಧ್ಯಾಹ್ನ 12 ಗಂಟೆವರೆಗೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

Christmas Traffic restrictions on some roads in Bengaluru

ಯಾವ ರಸ್ತೆಗಳಲ್ಲಿ ಸಂಚಾರ ನಿರ್ಬಂಧ

ಡೇವಿಸ್ ರಸ್ತೆಯಲ್ಲಿ ಜಾನ್ ಆರ್ಮ್ ಸ್ಟ್ರಾಂಗ್ ರಸ್ತೆ ಜಂಕ್ಷನ್‌ನಿಂದ ಕುಕ್ಸನ್ ರಸ್ತೆ ಜಂಕ್ಷನ್‌ ವರೆಗೆ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. ಇನ್ನೂ ರಸ್ತೆಗೆ ಪರ್ಯಾಯ ವ್ಯವಸ್ಥೆ ಮಾರ್ಗವಾಗಿ ಡೇವಿಸ್ ರಸ್ತೆ ಕಡೆಯಿಂದ ಹೆಚ್​​.ಎಂ ರಸ್ತೆ ಕಡೆಗೆ ಸಂಚರಿಸುವವರು ಡೇವಿಸ್ ರಸ್ತೆಯಲ್ಲಿ ಜಾನ್ ಆರ್ಮ್‌ ಸ್ಟ್ರಾಂಗ್ ರಸ್ತೆ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದು ನೇರವಾಗಿ ಸಾಗಿ ವಿವಿಯಾನಿ ರಸ್ತೆಯಲ್ಲಿ ಎಡತಿರುವು ಪಡೆದು ನೇರವಾಗಿ ಸಂಚರಿಸಿ ಕುಕ್ಸನ್ ರಸ್ತೆಯಲ್ಲಿ ಎಡತಿರುವು ಪಡೆದು ಡೇವಿಸ್ ರಸ್ತೆ ತಲುಪಿ ನಂತರ ಡೇವಿಸ್ ರಸ್ತೆಯಲ್ಲಿ ಸ್ಮೃತಿರುವು ಪಡೆದು ಹೆಚ್.ಎಂ ರಸ್ತೆ ಕಡೆಗೆ ಹೋಗಬಹುದಾಗಿದೆ.

ಪಾರ್ಕಿಂಗ್ ನಿರ್ಬಂಧಿಸಿರುವ ಸ್ಥಳಗಳು ಇಲ್ಲಿದೆ.

ಕ್ರಿಸ್ಮಸ್ ಹಬ್ಬದ ಹಿನ್ನೆಲೆಯಲ್ಲಿ ಡೇವಿಸ್ ರಸ್ತೆ, ಬಾಣಸವಾಡಿ ಮುಖ್ಯರಸ್ತೆ, ವೀಲ್ಡರ್ ರಸ್ತೆ, ಸೆಂಟ್ ಜಾನ್ಸ್ ಚರ್ಚ್ ರಸ್ತೆ, ಹೇನ್ ರಸ್ತೆ ಮತ್ತು ಪ್ರಾಮಿನೇಡ್ ರಸ್ತೆಯಲ್ಲಿ ಎಲ್ಲಾ ರೀತಿ ರೀತಿಯ ವಾಹನಗಳ ಪಾರ್ಕಿಂಗ್ ಅನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. ಅಲ್ಲದೇ ಮನಾಕ್ಷಿ ಕೋಯಿಲ್ ಸ್ಟ್ರೀಟ್ (ಶಿವಾಜಿ ಸರ್ಕಲ್‌ನಿಂದ ಓ.ಪಿ.ಹೆಚ್. ರಸ್ತೆಯವರೆಗೆ), ಸೆಂಟ್ರಲ್ ಸ್ಟ್ರೀಟ್ ರಸ್ತೆ (ಸೆಂಟ್ರಲ್ ಸ್ಟ್ರೀಟ್ ಜಂಕ್ಷನ್‌ನಿಂದ ಜ್ಯೋತಿ ಕೆಫೆ ಜಂಕ್ಷನ್‌ವರೆಗೆ), ಸೆಂಟ್ರಲ್ ಸ್ಪೀಟ್ ರಸ್ತೆ (ಜ್ಯೋತಿ ಕೆಫೆ ಜಂಕ್ಷನ್‌ನಿಂದ ಸಲೆಕ್ಟ್ ಹೋಟೆಲ್‌ವರೆಗೆ) ಮತ್ತು ನರೋನಾ ರಸ್ತೆ (ಚರ್ಚ್ ನರೋನಾ ರಸ್ತೆಯಿಂದ ಆರ್.ಎಂ.ಎಸ್ ಜಂಕ್ಷನ್‌ ವರೆಗೆ) ವಾಹನ ನಿಲುಗಡೆ ನಿಷೇಧಿಸಲಾಗಿದೆ.

ನಾಲ್ಕು ದಿನ ಪಾರ್ಕಿಂಗ್​ ನಿಷೇಧ

ಫಿನಿಕ್ಸ್ ಮಾಲ್, ವಿಆರ್ ಮಾಲ್ ಮತ್ತು ನೆಕ್ಸಸ್ ಶಾಂತಿನಿಕೇತನ ಬಳಿಯ ಐ.ಟಿ.ಪಿ.ಎಲ್ ರಸ್ತೆ ಬಿ ನಾರಾಯಣಪುರ ಶೆಲ್ ಪೆಟ್ರೋಲ್ ಬಂಕ್‌ನಿಂದ ಗರುಡಚಾರ್ ಪಾಳ್ಯ ಡೆಕಾತ್ಸಾನ್ ವರೆಗೆ ರಸ್ತೆಯ ಎರಡೂ ಬದಿಯಲ್ಲಿ. ಐ.ಟಿ.ಪಿ.ಎಲ್ ರಸ್ತೆ ಮೆಡಿಕವರ್ ಆಸ್ಪತ್ರೆಯಿಂದ ಬಿಗ್‌ಬಹಾರ್ ಜಂಕ್ಷನ್‌ವರೆಗೂ ಎರಡೂ ಕಡೆಗಳಲ್ಲಿ ಡಿಸೆಂಬರ್‌ 25 ರಿಂದ ಡಿಸೆಂಬರ್‌ 28ರವರೆಗೆ ಮಧ್ಯಾಹ್ನ 12:00 ಗಂಟೆಯಿಂದ ರಾತ್ರಿ 11:00 ಗಂಟೆಯವರೆಗೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+