ಅತ್ಯಾಚಾರ ಆರೋಪ : ರಾಘವೇಶ್ವರ ಶ್ರೀ ವಿರುದ್ಧ ಚಾರ್ಜ್‌ಶೀಟ್
ಬೆಂಗಳೂರು, ಸೆಪ್ಟೆಂಬರ್ 23 : ಅತ್ಯಾಚಾರ ಆರೋಪದಲ್ಲಿ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಸೇರಿ 7 ಜನರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದೆ. 2015ರಲ್ಲಿ ಅತ್ಯಾಚಾರದ ದೂರು ದಾಖಲಾಗಿತ್ತು.
'ನಾನು ಬಾಲಕಿ ಇದ್ದಾಗಿನಿಂದಲೂ ಸ್ವಾಮೀಜಿ ಹಲವು ಬಾರಿ ಅತ್ಯಾಚಾರ ಮಾಡಿದ್ದಾರೆ. ಅದಕ್ಕೆ ಹಲವರು ಸಹಕಾರ ನೀಡಿದ್ದಾರೆ' ಎಂದು 2015ರ ಆಗಸ್ಟ್ 29ರಂದು ಮಠದ ಭಕ್ತೆಯೊಬ್ಬರು ಗಿರಿನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಐಪಿಎಸ್ ಸೆಕ್ಷನ್ 376 (ಅತ್ಯಾಚಾರ), ಐಪಿಸಿ ಸೆಕ್ಷನ್ 376(2) 12 ವರ್ಷದೊಳಗಿನ ಯುವತಿ ಮೇಲೆ ಅತ್ಯಾಚಾರ ಆರೋಪದಡಿ ಎಫ್‌ಐಆರ್ ದಾಖಲಾಗಿತ್ತು. ನಂತರ ಸರ್ಕಾರ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಿತ್ತು.

ಸುಮಾರು ಮೂರು ವರ್ಷಗಳಿಂದ ವಿವರವಾದ ತನಿಖೆ ನಡೆಸಿರುವ ಸಿಐಡಿ ಪೊಲೀಸರು 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ರಾಘವೇಶ್ವರ ಭಾರತೀ ಸ್ವಾಮೀಜಿ ಸೇರಿದಂತೆ 7 ಜನರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ ಮಾಡಲಾಗಿದೆ.
ಹಿಂದೆ ರಾಮಕಥಾ ಗಾಯಕಿ ರಾಘವೇಶ್ವರ ಭಾರತೀ ಸ್ವಾಮೀಜಿ ವಿರುದ್ಧ ಅತ್ಯಾಚಾರದ ದೂರು ದಾಖಲಿಸಿದ್ದರು. ಸಿಐಡಿ ಅಧಿಕಾರಿಗಳು ವಿಚಾರಣೆ ನಡೆಸಿ, ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಈ ಪ್ರಕರಣದಲ್ಲಿ ಸ್ವಾಮೀಜಿ ಆರೋಪ ಮುಕ್ತರಾಗಿದ್ದಾರೆ.












Click it and Unblock the Notifications