ಡಿಕೆ ರವಿ ಸಾವಿನ ಪ್ರಕರಣ ಸಿಐಡಿ ತನಿಖೆಗೆ
ಬೆಂಗಳೂರು, ಮಾ. 17 : ಐಎಎಸ್ ಅಧಿಕಾರಿ ಡಿಕೆ ರವಿ ಅವರ ನಿಗೂಢ ಸಾವಿನ ತನಿಖೆಯನ್ನು ಸಿಐಡಿಗೆ ವಹಿಸುತ್ತಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ತಿಳಿಸಿದ್ದಾರೆ. ಆದರೆ, ಪ್ರತಿಪಕ್ಷಗಳು ಸಿಐಡಿ ತನಿಖೆ ನಡೆಸಬೇಕು ಎಂದು ಪಟ್ಟು ಹಿಡಿದಿವೆ.
ಮಂಗಳವಾರ ವಿಧಾನಸಭೆ ಮತ್ತು ವಿಧಾನಪರಿಷತ್ತಿನಲ್ಲಿ ಡಿಕೆ ರವಿ ಸಾವಿನ ಪ್ರಕರಣದ ಕುರಿತು ಚರ್ಚೆ ನಡೆಯಿತು. ಪ್ರಕರಣವನ್ನು ಸಿಬಿಐ ತನಿಖೆಗೆವಹಿಸಬೇಕು ಎಂದು ಪ್ರತಿಪಕ್ಷಗಳು ಒತ್ತಾಯಿಸಿದವು. ಡಿಕೆ ರವಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಿಕೆ ನೀಡಿರುವ ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ಅವರ ವಿರುದ್ಧ ಪ್ರತಿಪಕ್ಷದ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು. [ಡಿಕೆ ರವಿ ಸಾವು : ಪ್ರಮುಖ ಬೆಳವಣಿಗೆಗಳು]

ವಿಧಾನಸಭೆಯಲ್ಲಿ ಉತ್ತರ ನೀಡಿದ ಗೃಹ ಸಚಿವ ಕೆಜೆ ಜಾರ್ಜ್ ಅವರು, ವೈಯಕ್ತಿಕ ಕಾರಣಗಳಿಂದ ರವಿ ಅವರ ಸಾವು ಸಂಭವಿಸಿದೆ ಎಂಬ ಸುಳಿವು ಸಿಕ್ಕಿದೆ. ಆ ನಿಟ್ಟಿನಲ್ಲಿ ಪೊಲೀಸರು ಮೇಲ್ನೋಟಕ್ಕೆ ಆತ್ಮಹತ್ಯೆ ಎಂದು ಹೇಳಿಕೆ ನೀಡಿದ್ದಾರೆ ಎಂದರು. [ಡಿಕೆ ರವಿ ಊರು ದೊಡ್ಡಕೊಪ್ಪಲು ಗ್ರಾಮಕ್ಕೆ ದಾರಿ]
ಬೆಂಗಳೂರು ಪೊಲೀಸರೇ ಈ ಪ್ರಕರಣದ ತನಿಖೆ ನಡೆಸಲಿದ್ದಾರೆ. [ರವಿ ಸಾವಿಗೆ ಕಾರಣವೇನು? ಓಟ್ ಹಾಕಿ] ಇದು ಸಮರ್ಪಕವಾಗಿಲ್ಲ ಎಂದು ಅನ್ನಿಸಿದರೆ ಸಿಬಿಐಗೆ ವಹಿಸುವ ಬಗ್ಗೆ ಚಿಂತನೆ ನಡೆಸಲಾಗುವುದು ಕೆಜೆ ಜಾರ್ಜ್ ಹೇಳಿದರು. ಗೃಹ ಸಚಿವರ ಉತ್ತರಕ್ಕೆ ಪ್ರತಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದವು. [ದಕ್ಷ ಐಎಎಸ್ ಅಧಿಕಾರಿ ದಿವಂಗತ ಡಿಕೆ ರವಿ ವ್ಯಕ್ತಿಚಿತ್ರ]
ಮುಖ್ಯಮಂತ್ರಿಗಳ ಉತ್ತರ : ಪ್ರತಿಪಕ್ಷದ ಸದಸ್ಯರ ಗದ್ದಲದಿಂದಾಗಿ ಪ್ರಕರಣದ ಬಗ್ಗೆ ಉತ್ತರ ನೀಡಿದ ಸಿದ್ದರಾಮಯ್ಯ ಅವರು ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ ಎಂದು ಹೇಳಿದರು. ಆದರೆ, ಪ್ರತಿಪಕ್ಷಗಳು ಸಿಬಿಐಗೆ ವಹಿಸುವಂತೆ ಒತ್ತಾಯಿಸಿದ್ದರಿಂದ ಕಲಾಪವನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಲಾಯಿತು.












Click it and Unblock the Notifications