CT Ravi Case: ಸಿಟಿ ರವಿ ಕೇಸ್‌ ಬಗ್ಗೆ ಹೊಸ ಅಪ್ಡೇಟ್​ ಕೊಟ್ಟ ಗೃಹ ಸಚಿವ ಜಿ. ಪರಮೇಶ್ವರ್, ಏನದು

ಎಂಎಲ್‌ಸಿ ಸಿಟಿ ರವಿ ಪ್ರಕರಣದ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್‌ ಅವರು ಮಾತನಾತನಾಡಿದ್ದಾರೆ. ಸಿ.ಟಿ ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರಿಗೆ ಅವಾಚ್ಯ ಶಬ್ದಗಳನ್ನು ಬಳಸಿ ಬೈದಿದ್ದಾರೆ ಎನ್ನುವುದು ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಸಿಟಿ ರವಿ ತಲೆಗೆ ಹೊಡೆದಿರುವ ಬಗ್ಗೆಯೂ ಜೋರು ಚರ್ಚೆ ನಡೆದಿತ್ತು. ಇದೀಗ ಈ ಕೇಸ್‌ನಲ್ಲಿನ ಹೊಸ ಅಪ್‌ಡೇಟ್‌ ಬಗ್ಗೆ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಅವರ ಮೇಲೆ ಬಿಜೆಪಿಯವರು ಮಾಡಿರುವ ಆರೋಪದ ಬಗ್ಗೆಯೂ ಅವರು ಮಾತನಾಡಿದ್ದಾರೆ. ಸಚಿವ ಪ್ರಿಯಾಂಕಾ ಖರ್ಗೆ ಕೇಸ್‌ನ ಬಗ್ಗೆಯೂ ಅವರು ಮಾತನಾಡಿದ್ದಾರೆ. ಪ್ರಿಯಾಂಕಾ ಖರ್ಗೆ ಕೇಸ್‌ಗೆ ಸಂಬಂಧಿಸಿದಂತೆ ಪ್ರಕರಣವನ್ನು ಸಿಐಡಿಗೆ ಕೊಡಲಾಗಿದೆ ಎಂದು ಗೃಹ ಸಚಿವ ಡಾ.‌ ಜಿ.ಪರಮೇಶ್ವರ ಅವರು ಹೇಳಿದ್ದಾರೆ.

ವಿವಿಧ ವಿಷಯಗಳ ಬಗ್ಗೆ ಅವರು ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಸರ್ಕಾರದ ಸಚಿವರ ಮೇಲೆ ಅನವಶ್ಯಕವಾಗಿ ಆಪಾದನೆ ಮಾಡುತ್ತಿದ್ದಾರೆ. ಈ ರೀತಿ ಸರ್ಕಾರದ ಸಚಿವರ ಮೇಲೆ ಆಪಾದನೆ ಮಾಡುವುದು ಯಾವುದೇ ಸರ್ಕಾರಕ್ಕೂ ಸರಿ ಅನಿಸಲ್ಲ. ಡೆತ್‌ನೋಟ್‌ನಲ್ಲಿ ಅವರ ಹೆಸರು ಸಹ ಇಲ್ಲ ಅಂತಾ ಇಲಾಖೆಯ ಅಧಿಕಾರಿಗಳೇ ಹೇಳಿದ್ದಾರೆ. ಸಚಿವರ ಹೆಸರನ್ನು ಸುಮ್ಮನೆ ತಂದು ಸರ್ಕಾರಕ್ಕೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ. ಸತ್ಯಾಸತ್ಯತೆ ಹೊರಬರಲಿ ಎಂಬ ದೃಷ್ಟಿಯಿಂದ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿ ಸಿಐಡಿಗೆ ವಹಿಸಲಾಗಿದೆ ಎಂದು ಹೇಳಿದರು.

CID Investigation Speed into Ct Ravi Case Home Minister G Parameshwara says

ಈ ಪ್ರಕರಣ ಇನ್ನು ತನಿಖೆಯ ಹಂತದಲ್ಲಿ ಇದೆ. ತನಿಖೆಯ ವರದಿ ಬಂದ ನಂತರ ಮುಂದೆ ಏನು ಎನ್ನುವುದನ್ನು ಹೇಳೋಣ. ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಜೀನಾಮೆ ಕೊಡುವ ಅವಶ್ಯಕತೆ ಇಲ್ಲ. ಇದರಲ್ಲಿ ಅನವಶ್ಯಕವಾಗಿ ಅವರ ಹೆಸರನ್ನು ತೆಗೆದುಕೊಂಡು ಬರಲಾಗುತ್ತಿದೆ. ಅನವಶ್ಯಕವಾಗಿ ರಾಜೀನಾಮೆ ಕೊಡುವಂತೆ ಒತ್ತಾಯ ಮಾಡಲಾಗುತ್ತಿದೆ ಎಂದಿದ್ದಾರೆ.

ತನಿಖೆ ಸಿಬಿಐಗೆ ಪರಮೇಶ್ವರ್ ಹೇಳಿದ್ದೇನು ?

ಇನ್ನು ಈ ಪ್ರಕರಣವನ್ನು ಸಿಬಿಐಗೆ ಕೊಡಬೇಕು ಎನ್ನುವ ಬಿಜೆಪಿ ನಾಯಕರು ಒತ್ತಾಯಿಸುತ್ತಿರುವ ಬಗ್ಗೆ ಮಾತನಾಡಿದ ಅವರು, ಎಲ್ಲಾ ಪ್ರಕರಣಗಳನ್ನು ಸಿಬಿಐಗೆ ವಹಿಸಲು ಆಗುವುದಿಲ್ಲ. ಸಿಐಡಿ ಸಹ ಸಮರ್ಥವಾಗಿದೆ.‌ ಅನೇಕ ಪ್ರಕರಣಗಳಲ್ಲಿ ಸಿಐಡಿ ತನಿಖೆಯ ವರದಿ ಬಂದಿದೆಯಲ್ಲವೇ ಎಂದು ಅವರು ಪ್ರಶ್ನೆ ಮಾಡಿದ್ದಾರೆ. ಬಿಜೆಪಿಯ ನಾಯಕರು ಹೇಳಿದ್ದೆಲ್ಲ ಕೇಳುವುದಕ್ಕೆ ಆಗಲ್ಲ. ಅವರು ಒಳ್ಳೆಯ ಸಲಹೆ, ಸೂಚನೆ ಕೊಟ್ಟರೆ ಕೇಳುತ್ತೇವೆ. ಅನವಶ್ಯಕವಾಗಿ ಎಲ್ಲದರಲ್ಲೂ ರಾಜಕೀಯ ಮಾಡಲು ಹೋದರೆ ಕೇಳುವುದಿಲ್ಲ ಎಂದಿದ್ದಾರೆ.

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ - ಸಿಟಿ ರವಿ ಪ್ರಕರಣದ ಬಗ್ಗೆ ಹೊಸ ಅಪ್‌ಡೇಟ್‌

ಇನ್ನು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಸಿಟಿ ರವಿ ಪ್ರಕರಣದ ಬಗ್ಗೆಯೂ ಗೃಹ ಸಚಿವ ಜಿ. ಪರಮೇಶ್ವರ್ ಅವರು ಮಾತನಾಡಿದ್ದಾರೆ. ಈ ಪ್ರಕರಣ ಇದೀಗ ರಾಜ್ಯದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಸಿಟಿ ರವಿ ಅವರು ಸಹ ಈ ಸಂಬಂಧ ರಾಜ್ಯಪಾಲರನ್ನು ಭೇಟಿ ಮಾಡಿ ಚರ್ಚೆ ಮಾಡಿದ್ದಾರೆ. ರಾಜ್ಯಪಾಲರಿಗೂ ಸಿಟಿ ರವಿ ಮನವಿ ಸಲ್ಲಿಸಿದ್ದಾರೆ. ಈ ರೀತಿ ಇರುವಾಗಲೇ ಗೃಹ ಸಚಿವ ಜಿ. ಪರಮೇಶ್ವರ್ ಅವರು ಮಾತನಾಡಿದ್ದಾರೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಮೇಲೆ ಶಾಸಕ ಸಿ.ಟಿ.ರವಿ ಅವಾಚ್ಯ ಪದ ಬಳಕೆ ಮಾಡಿರುವ ಪ್ರಕರಣದ ಸತ್ಯಾಸತ್ಯತೆ ಹೊರಬರಬೇಕಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ತಮ್ಮ‌ ಕೆಲಸವನ್ನು ಪ್ರಾರಂಭಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಈ ಮೂಲಕ ತನಿಖೆ ಪ್ರಗತಿಯಲ್ಲಿದೆ ಹಾಗೂ ತನಿಖೆ ಚುರುಕುಗೊಳಿಸಲಾಗಿದೆ ಎನ್ನುವ ಸುಳಿವನ್ನು ಅವರು ಕೊಟ್ಟಿದ್ದಾರೆ.

ಇನ್ನು ಮುಂದುವರಿದು ಸಾರ್ವಜನಿಕರು ಬಹಳ ಎಚ್ಚರಿಕೆಯಿಂದ ಹೊಸ ವರ್ಷದ ಸಂಭ್ರಮಾಚರಣೆ ಮಾಡಬೇಕು. ಈ ಸಂಬಂಧ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿ, ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ. ಅಗತ್ಯ ಬಂದೋಬಸ್ತ್‌ ಸಹ ಕೈಗೊಳ್ಳಲಾಗಿದೆ. ಯಾರಿಗೂ ತೊಂದರೆಯಾಗದಂತೆ ಎಲ್ಲರೂ ಹೊಸ ವರ್ಷ ಆಚರಿಸಬೇಕು ಎಂದು ಅವರು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+