ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಘವೇಶ್ವರ ಶ್ರೀಗಳ ಜಾಮೀನು ರದ್ದುಗೊಳಿಸಿ : ಸಿಐಡಿ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 06 : ಅತ್ಯಾಚಾರ ಆರೋಪ ಎದುರಿಸುತ್ತಿರುವ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಸ್ವಾಮೀಜಿಗಳು ಪಡೆದಿರುವ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ ಸಿಐಡಿ ಕೋರ್ಟ್ ಮೆಟ್ಟಿಲೇರಿದೆ. ಸಿಐಡಿ ಸೂಚನೆಯಂತೆ ಶ್ರೀಗಳು ವೈದ್ಯಕೀಯ ಪರೀಕ್ಷೆಗೆ ಹಾಜರಾಗುತ್ತಿಲ್ಲ ಎಂದು ಸಿಐಡಿ ಅರ್ಜಿಯಲ್ಲಿ ಹೇಳಿದೆ.

ವಿಶೇಷ ಸರ್ಕಾರಿ ಅಭಿಯೋಜಕ ಬಿ.ಎ.ಬೆಳ್ಳಿಯಪ್ಪ ಅವರು ಸೋಮವಾರ ಸೆಷನ್ಸ್ ಕೋರ್ಟ್‌ಗೆ ಸಿಐಡಿ ಪರವಾಗಿ ಅರ್ಜಿ ಸಲ್ಲಿಸಿದ್ದು, ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ವೈದ್ಯಕೀಯ ಪರೀಕ್ಷೆಗೆ ಶ್ರೀಗಳು ಹಾಜರಾಗಿಲ್ಲ. ಅವರ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ. [ಶ್ರೀಗಳ ವಿರುದ್ಧದ ಚಾರ್ಜ್ ಶೀಟ್ ನಲ್ಲೇನಿದೆ ಏನಿದೆ?]

raghaveshwara swamiji

ರಾಮಕಥಾ ಗಾಯಕಿ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದೆ. ನಂತರ ಶ್ರೀಗಳಿಗೆ ಸೆ.30ರಂದು ವೈದ್ಯಕೀಯ ಪರೀಕ್ಷೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ. [ರಾಘವೇಶ್ವರ ಶ್ರೀಗಳ ಪುರುಷತ್ವ ಪರೀಕ್ಷೆ ಆಗಿಲ್ಲ ಮುಂದೇನು?]

ತಾವು ಈಗಾಗಲೇ ಡಿಎನ್‌ಎ ಪರೀಕ್ಷೆಗೆ ಹಾಜರಾಗಿದ್ದೇನೆ ಉಳಿದ ಮೂರು ಪರೀಕ್ಷೆಗಳು ಅಗತ್ಯವಿಲ್ಲ ಎಂದು ಪತ್ರ ಬರೆದಿರುವ ಶ್ರೀಗಳು ವೈದ್ಯಕೀಯ ಪರೀಕ್ಷೆಗೆ ಹಾಜರಾಗಿಲ್ಲ. ಆದ್ದರಿಂದ ಆವರ ಜಾಮೀನನ್ನು ರದ್ದುಗೊಳಿಸಬೇಕು ಎಂದು ಸಿಐಡಿ ಅರ್ಜಿಯಲ್ಲಿ ಮನವಿ ಮಾಡಿದೆ. [ಬಂಧನದ ಭೀತಿಯಿಂದ ಪಾರಾದ ರಾಘವೇಶ್ವರ ಶ್ರೀಗಳು]

ಎರಡು ಪ್ರಕರಣಗಳು : ರಾಮಕಥಾ ಗಾಯಕಿ ಮೇಲಿನ ಅತ್ಯಾಚಾರ ಪ್ರಕರಣ ಮತ್ತು ಯಕ್ಷಗಾನ ಕಲಾವಿದೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ರಾಘವೇಶ್ವರ ಶ್ರೀಗಳು ಜಾಮೀನು ಪಡೆದಿದ್ದಾರೆ. ಈ ಜಾಮೀನನ್ನು ರದ್ದುಗೊಳಿಸುವಂತೆ ಸಿಐಡಿ ಕೋರ್ಟ್ ಮೆಟ್ಟಿಲೇರಿದೆ.

English summary
The Criminal Investigation Department(CID)has filed an application before the sessions court to cancel the bail granted to Ramachandrapura math Raghaveshwara Bharathi Swamiji who is facing two rape charges.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X