ಎಂ.ಎಂ.ಕಲಬುರ್ಗಿ ಹತ್ಯೆ ತನಿಖೆಗೆ ವಿಶೇಷ ತಂಡ ರಚನೆ

By: ಒನ್ ಇಂಡಿಯಾ ಪ್ರತಿನಿಧಿ
Subscribe to Oneindia Kannada

ಬೆಂಗಳೂರು, ಮಾರ್ಚ್ 11 : 'ಹಿರಿಯ ಸಂಶೋಧಕ ಎಂ.ಎಂ.ಕಲಬುರ್ಗಿ ಅವರ ಹತ್ಯೆಯ ತನಿಖೆ ನಡೆಸಲು ಸಿಐಡಿ ವಿಶೇಷ ತನಿಖಾ ತಂಡ ರಚನೆ ಮಾಡಲಾಗಿದೆ. ತನಿಖೆ ಮುಂದುವರೆದಿದೆ, ತಪ್ಪಿತಸ್ಥರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ' ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಗುರುವಾರ ಮಾತನಾಡಿದ ಪರಮೇಶ್ವರ ಅವರು, 'ಎಂ.ಎಂ.ಕಲಬುರ್ಗಿ ಅವರ ಹತ್ಯೆ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಹಂತಕರ ಬಗ್ಗೆ ಸುಳಿವು ಸಿಕ್ಕಿದೆ. ಅದರ ಬಗ್ಗೆ ಹೆಚ್ಚಿನ ಮಾಹಿತಿ ಬಹಿರಂಗಪಡಿಸಲು ಸಾಧ್ಯವಿಲ್ಲ' ಎಂದು ತಿಳಿಸಿದರು. [ಕಲಬುರ್ಗಿ ಹತ್ಯೆಯಾಗಿ 2 ತಿಂಗಳು : ಎತ್ತ ಸಾಗಿದೆ ತನಿಖೆ?]

mm kalburgi

'ಹತ್ಯೆ ಪ್ರಕರಣದ ತನಿಖೆ ನಡೆಸಲು ಸಿಐಡಿಯ ವಿಶೇಷ ತಂಡವನ್ನು ರಚನೆ ಮಾಡಲಾಗಿದೆ. ಕೆಲವು ಸಾಕ್ಷಿಗಳು ಸಿಕ್ಕಿವೆ. ಶೀಘ್ರದಲ್ಲೇ ಆರೋಪಿಯನ್ನು ಬಂಧಿಸುವ ಸಾಧ್ಯತೆ ಇದೆ. ಹತ್ಯೆ ನಡೆದ ಸ್ಥಳದಲ್ಲಿ ಸರಿಯಾದ ಸಾಕ್ಷಿ ಆಧಾರ ಸಿಕ್ಕಿರಲಿಲ್ಲ. ಆದ್ದರಿಂದ ತನಿಖೆ ವಿಳಂಬವಾಗಿತ್ತು' ಎಂದು ಸಚಿವರು ವಿವರಣೆ ನೀಡಿದರು. ['ಕಲಬುರ್ಗಿ ಹತ್ಯೆ ತನಿಖೆ ಸಿಬಿಐಗೆ ವಹಿಸಲು ಸಿದ್ಧ']

'ವಿಚಾರವಾದಿಗಳಾದ ದಾಬೋಲ್ಕರ್, ಗೋವಿಂದ ಪನ್ಸಾರೆ ಹಾಗೂ ಕಲಬುರ್ಗಿ ಹತ್ಯೆಯಲ್ಲಿ ಬಳಕೆಯಾದ ಗುಂಡುಗಳಲ್ಲಿ ಸಾಮ್ಯತೆ ಇದೆ ಎಂದು ವಿಧಿ ವಿಜ್ಞಾನ ಪ್ರಯೋಗಾಲಯದ ತಜ್ಞರು ದೃಢ ಪಡಿಸಿದ್ದಾರೆ. ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುತ್ತದೆ' ಎಂದು ಪರಮೇಶ್ವರ ಅವರು ಹೇಳಿದರು. [ಕಲಬುರ್ಗಿ ಹತ್ಯೆಯ ತನಿಖೆ ವಿಳಂಬಕ್ಕೆ ಯಾರು ಕಾರಣ?]

2015ರ ಆಗಸ್ಟ್ 30ರಂದು ಧಾರವಾಡದ ಕಲ್ಯಾಣ ನಗರದ ನಿವಾಸದಲ್ಲಿ ಎಂ.ಎಂ.ಕಲಬುರ್ಗಿ ಅವರ ಹತ್ಯೆ ನಡೆದಿತ್ತು. ಮೊದಲು ಸ್ಥಳೀಯ ಪೊಲೀಸರು ತನಿಖೆ ಆರಂಭಿಸಿದ್ದರು. ನಂತರ ಸರ್ಕಾರ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿತ್ತು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
Karnataka Home Minister Dr.G.Parameshwara on Thursday said, special squads formed to investigate Professor M.M.Kalburgi murder case. Criminal Investigation Department (CID) was following leads of murder. Kalburgi who was shot at his residence at Kalyan Nagar Dharwad on August 30th, 2015.
Please Wait while comments are loading...