ನಿತ್ಯಾನಂದ ಸ್ವಾಮಿಯ ವರದಿಯಲ್ಲೇನಿದೆ?

ರಾಮನಗರ, ನ.27 : ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸದಂತೆ ಬಿಡದಿ ಧ್ಯಾನಪೀಠದ ಸ್ವಯಂ ಘೋಷಿತ ದೇವಮಾನವ ಸ್ವಾಮಿ ನಿತ್ಯಾನಂದ ಅವರ ಪುರುಷತ್ವ ಪರೀಕ್ಷೆ ವರದಿಯನ್ನು ಸಿಐಡಿ ಪೊಲೀಸರು ಬುಧವಾರ ರಾಮನಗರ ಕೋರ್ಟ್‌ಗೆ ಸಲ್ಲಿಸಿದ್ದಾರೆ. ಪುರುಷತ್ವ, ಧ್ವನಿ ಪರೀಕ್ಷೆ ಸೇರಿ ಒಟ್ಟು 31 ಪುಟಗಳ ವರದಿಯನ್ನು ಸಲ್ಲಿಕೆ ಮಾಡಲಾಗಿದೆ.

ರಾಮನಗರ ಒಂದನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಮಂಜುಳಾ ಅವರಿಗೆ ಸಿಐಡಿ ವರದಿ ಸಲ್ಲಿಸಿದ್ದು, ವೈದ್ಯ ಪರೀಕ್ಷೆ ಸಂದರ್ಭದಲ್ಲಿ ಸಂಗ್ರಹಿಸಲಾದ ಮೂತ್ರ ಮತ್ತು ರಕ್ತದ ಸ್ಯಾಂಪಲ್‌ಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದೆ ಎಂದು ಸಿಐಡಿ ಪೊಲೀಸರು ಹೇಳಿದ್ದಾರೆ. [ಪುರುಷತ್ವ ಪರೀಕ್ಷೆ ಎಂದರೇನು? ಏಕೆ ಮಾಡ್ಬೇಕು?]

Swami Nithyananda

ಮೂತ್ರ ಮತ್ತು ರಕ್ತದ ಮಾದರಿಗಳನ್ನು ಪರೀಕ್ಷೆ ನಡೆಸಲು ಬೇಕಾದ ಸಾಧನ ಮತ್ತು ಸಲಕರಣೆಗಳು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇಲ್ಲದ ಕಾರಣದಿಂದ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು ಅಲ್ಲಿಯ ವರದಿಗಾಗಿ ಕಾಯುತ್ತಿದ್ದೇವೆ ಎಂದು ಸಿಐಡಿ ಹೇಳಿದೆ.[ಅಂತೂ ಆಯ್ತು ನಿತ್ಯಾ ಪುರುಷತ್ವ ಪರೀಕ್ಷೆ!]

ವರದಿ ಸಲ್ಲಿಕೆ ವೇಲೆ ನಿತ್ಯಾನಂದ ಸ್ವಾಮಿ ಮತ್ತು ಆತನ ಐವರು ಶಿಷ್ಯಂದಿರುವ ನ್ಯಾಯಾಲಯದಲ್ಲಿ ಖುದ್ದು ಹಾಜರಿದ್ದರು. ಕೋರ್ಟ್‌ನ ಹೊರಗೆ ಮಾಧ್ಯಮಗಳೊಂದಿಗೆ ಮಾತನಾಡಿದ ನಿತ್ಯಾನಂದ ಪರ ವಕೀಲ ರವಿ ನಾಯಕ್ ಅವರು, ಸಿಐಡಿ ವಕೀಲರು ಸಲ್ಲಿಸಿರುವ ಚಾರ್ಜ್‌ಶೀಟ್‌ನಲ್ಲಿ 48 ಸಾಕ್ಷ್ಯಗಳನ್ನು ಪ್ರಸ್ತಾಪ ಮಾಡಿದ್ದಾರೆ. ಆದರೆ ಸಾಕ್ಷಿಗಳ ಹೇಳಿಕೆ ದಾಖಲಿಸಿಲ್ಲ ಈ ಬಗ್ಗೆ ಕೋರ್ಟ್‌ ಗಮನಕ್ಕೆ ತರಲಾಗುತ್ತದೆ ಎಂದರು.

ನಿತ್ಯಾನಂದ ಸ್ವಾಮೀಜಿಯ ದೈಹಿಕ ಬೆಳವಣಿಗೆ ವಯಸ್ಸಿಗೆ ತಕ್ಕಂತೆ ನಡೆದಿದೆ. ಅವರು ಪುರುಷ ಸಹಜ ಲಕ್ಷಣಗಳನ್ನು ಹೊಂದಿ­ದ್ದಾರೆ ಎಂಬ ಸಂಗತಿಗಳನ್ನು ವೈದ್ಯಕೀಯ ವರದಿ ಒಳಗೊಂಡಿದೆ. ಪ್ರಕರಣದ ವಿಚಾರಣೆಯನ್ನು ಡಿ.3ಕ್ಕೆ ನ್ಯಾಯಾಲಯ ಮುಂದೂಡಿದ್ದು, 2015ರ ಜ.12ರಂದು ನಡೆಯುವ ವಿಚಾರಣೆಗೆ ಖುದ್ದು ಹಾಜರಾಗುವಂತೆ ನಿತ್ಯಾನಂದ ಸ್ವಾಮಿಗೆ ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+