ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳು: ಸುತ್ತೋಲೆ ವಾಪಸ್‌

|
Google Oneindia Kannada News

ದೇವನಹಳ್ಳಿ, ನವೆಂಬರ್‌ 9: ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳನ್ನು ಕಡ್ಡಾಯವಾಗಿ ಕರೆತರಬೇಕು ಎಂದು ಸುತ್ತೋಲೆ ಹೊರಡಿಸಿದ್ದ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು ವಿವಾದವಾಗುತ್ತಿದ್ದಂತೆ ಈ ಆದೇಶವನ್ನು 24 ಗಂಟೆಯಲ್ಲಿ ಹಿಂತೆಗೆದುಕೊಂಡಿದ್ದಾರೆ.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ನಾಡಪ್ರಭು ಕೆಂಪೇಗೌಡ ಪ್ರಗತಿ ಪ್ರತಿಮೆಯನ್ನು ನವೆಂಬರ್‌ 11 ರಂದು ನರೇಂದ್ರ ಮೋದಿ ಲೋಕಾರ್ಪಣೆ ಮಾಡುವ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳಿಂದ ನಿಗದಿತ ಸಂಖ್ಯೆಯ ವಿದ್ಯಾರ್ಥಿಗಳನ್ನು ಕರೆತರಬೇಕೆಂದು ನವೆಬರ್ 8 ರಂದು ಸುತ್ತೋಲೆಯನ್ನು ಹೊರಡಿಸಲಾಗಿತ್ತು.

ಮೋದಿ ಕಾರ್ಯಕ್ರಮಕ್ಕೆ ಪಿಯು ವಿದ್ಯಾರ್ಥಿಗಳನ್ನು ಕರೆತರಲು ಸುತ್ತೋಲೆ ಮೋದಿ ಕಾರ್ಯಕ್ರಮಕ್ಕೆ ಪಿಯು ವಿದ್ಯಾರ್ಥಿಗಳನ್ನು ಕರೆತರಲು ಸುತ್ತೋಲೆ

ವಿದ್ಯಾರ್ಥಿಗಳನ್ನು ಕರೆತರಲು ಬಸ್‌ಗಳನ್ನು ನಿಗದಿಪಡಿಸಿದ್ದು, ಅವು ನಿಗದಿತ ಸಮಯಕ್ಕೆ ಸರಿಯಾಗಿ ಸಂಬಂಧಿಸಿದ ಕಾಲೇಜುಗಳಿಂದ ಹೊರಡಲಿವೆ. ಆ ಬಸ್ಸುಗಳಿಗೆ ನೇಮಿಸಿರುವ ನೋಡಲ್‌ ಅಧಿಕಾರಿಗಳು ಹಾಗೂ ಪ್ರಾಂಶುಪಾಲರು ವಿದ್ಯಾರ್ಥಿಗಳನ್ನು ಕ್ಷೇಮವಾಗಿ ಕಾರ್ಯಕ್ರಮಕ್ಕೆ ಕರೆತಂದು ಕಾರ್ಯಕ್ರಮ ಮುಗಿದ ಬಳಿಕ ವಾಪಸ್‌ ಕರೆದೊಯ್ಯಬೇಕು. ತಪ್ಪಿದಲ್ಲಿ ಮುಂದಿನ ಆಗು ಹೋಗುಗಳಿಗೆ ಪ್ರಾಂಶುಪಾಲರೇ ಜವಾಬ್ದಾರರು ಹೇಳಿದ್ದರು.

circular issued to bring students to PM Modi program Taken Back

ಮಂಗಳವಾರ ಹೊರಡಿಸಿದ್ದ ಸುತ್ತೋಲೆ ಮಾಧ್ಯಮಗಳಲ್ಲಿ ಸೋರಿಕೆಯಾಗಿರುವ ವಿಷಯ ಗೊತ್ತಾಗುತ್ತದೆ ಸಾಕಷ್ಟು ವಿರೋಧಗಳು ವ್ಯಕ್ತವಾದ ಹಿನ್ನೆಲೆ, ಎಚ್ಚೆತ್ತುಕೊಂಡ ಜಿಲ್ಲಾಧಿಕಾರಿ ಆರ್.ಲತಾ, ಸುತ್ತೋಲೆ ವಾಪಸು ಪಡೆಯುವಂತೆ ಸೂಚಿಸಿದ್ದರು. ಅದರ ಬೆನ್ನೆಲೇ ಪದವಿ ಪೂವರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ರಾತ್ರಿ ಮತ್ತೊಂದು ಸುತ್ತೋಲೆ ಹೊರಡಿಸಿ, ಈ ಮೊದಲಿಗೆ ಹೊರಡಿಸಿದ್ದ ಸುತ್ತೋಲೆಯನ್ನ 24 ಗಂಟೆಯಲ್ಲಿ ವಾಪಸ್ ಪಡೆದಿರುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ಜಿಲ್ಲಾಧಿಕಾರಿ ಲತಾ ಪ್ರತಿಕ್ರಿಯಿಸಿ, ಅಂಥ ಯಾವುದೇ ಸೂಚನೆ ಅಥವಾ ಚರ್ಚೆ ನಮ್ಮ ಕಡೆಯಿಂದ ಆಗಿಲ್ಲ. ನಾನು ಯಾವುದೇ ಕಾಲೇಜಿನ ಉಪನ್ಯಾಸಕರು ಮತ್ತು ಪ್ರಾಂಶುಪಾಲರನ್ನು ಭೇಟಿ ಮಾಡಿಲ್ಲ. ಈ ಬಗ್ಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜೊತೆ ಚರ್ಚಿಸುತ್ತೇನೆ ಎಂದಿದ್ದಾರೆ.

ಈ ಆದೇಶ ಕುರಿತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಬಿಜೆಪಿ ಸರ್ಕಾರದ ಅಡಿಯಲ್ಲಿ ಶಿಕ್ಷಣ ಇಲಾಖೆಯು ಒಂದಲ್ಲ ಒಂದು ವಿಷಯದ ಮೇಲೆ ಗೂಂಡಾಗಿರಿ ಮಾಡುತ್ತಿದೆ. ಬಿಜೆಪಿಯ ಸಭೆ, ಸಮಾರಂಭಗಳಿಗೆ ಜನರು ಬರುತ್ತಿಲ್ಲ. ಹೀಗಾಗಿ ಶಾಲಾ ಕಾಲೇಜು ವಿದ್ಯಾರ್ಥಿಗಳನ್ನು ಶೋಷಿಸಲು ಯತ್ನಿಸುತ್ತಿದೆ. ಸರ್ಕಾರದ ಈ ನಡೆ ಖಂಡನೀಯ ಎಂದು ಹೇಳಿದ್ದರು.

circular issued to bring students to PM Modi program Taken Back

ಇನ್ನೂ ಆದೇಶದ ಕುರಿತು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಮಾತನಾಡಿ, ಮೊದಲು ಇಂತಹ ಸುತ್ತೋಲೆ ಹೊರಡಿಸಿದ್ದು ಏಕೆ, ರದ್ದುಗೊಳಿಸಿದ್ದು ಏಕೆ? ಸಾರ್ವಜನಿಕ ಸಮಾರಂಭದಲ್ಲಿ ಪ್ರಧಾನಿ ಭಾಷಣ ಕೇಳಲು ವಿದ್ಯಾರ್ಥಿಗಳನ್ನು ಬಿಸಿಲಿನಲ್ಲಿ ಕೂರಿಸುವುದು ಏಕೆ? ಎಂದು ಪ್ರಶ್ನಿಸಿದ್ದರು.

ಸುತ್ತೋಲೆ ಕುರಿತು ಪ್ರತಿಕ್ರಿಯೆ ನೀಡಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾತನಾಡಿ, ಡಿಡಿಪಿಐ ಸುತ್ತೋಲೆಯನ್ನು ಹಿಂಪಡೆದಿದ್ದಾರೆ. ತಪ್ಪಿತಸ್ಥ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಪ್ರಧಾನ ಕಾರ್ಯದರ್ಶಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

English summary
circular issued to bring students to PM Modi's program was returned within 24 hours,directing principals of all colleges to bring an assigned number of students from their colleges to Prime Minister Narendra Modi’s events in the district on November 11
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X