E-Khata: ಎ & ಬಿ ಖಾತಾ ನೋಂದಣಿ, ಕಂದಾಯ ಇಲಾಖೆ ಸ್ಪಷ್ಟನೆಗಳು

ಬೆಂಗಳೂರು, ಮಾರ್ಚ್‌ 13: ಕರ್ನಾಟಕ ಸರ್ಕಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮಾದರಿಯಲ್ಲಿ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಎ-ಖಾತಾ ಮತ್ತು ಬಿ-ಖಾತಾ ನೋಂದಣಿ ಮಾಡಿಕೊಂಡು ಇ-ಖಾತಾ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಿದೆ. ಆದರೆ ಈ ಕುರಿತು ಕೆಲವು ಉಪ ನೋಂದಣಾಧಿಕಾರಿಗಳು ಗೊಂದಲವನ್ನು ಉಂಟು ಮಾಡಿದ್ದಾರೆ. ಎ-ಖಾತಾ, ಬಿ-ಖಾತಾ ಎರಡೂ ನೋಂದಣಿ ಮಾಡಿಸಬಹುದೇ? ಎಂದು ಗೊಂದಲ ಉಂಟಾಗಿತ್ತು.

ಈ ಕುರಿತು ಈಗ ಸ್ಪಷ್ಟನೆಯನ್ನು ನೀಡಲಾಗಿದೆ. ನೋಂದಣಿ ಪರಿವೀಕ್ಷಕರು ಮತ್ತು ಮುದ್ರಾಂಕ ಆಯುಕ್ತರಾದ ದಯಾನಂದ ಈ ಕುರಿತು ಸುತ್ತೋಲೆಯ ಮೂಲಕ ಸ್ಪಷ್ಟನೆಯನ್ನು ನೀಡಿದ್ದಾರೆ. ಇದರಿಂದಾಗಿ ಜನರಲ್ಲಿ, ಉಪ ನೋಂದಣಾಧಿಕಾರಿಗಳಲ್ಲಿ ಇದ್ದ ಗೊಂದಲಗಳು ದೂರವಾಗಿವೆ.

Circular On Registration Of A And B Khata And Issue E Khata

ಯಾವ ಖಾತೆ ಇದ್ದರೂ ನೋಂದಣಿ: ಈ ಸುತ್ತೋಲೆಯಲ್ಲಿ ಯಾವುದೇ ಸ್ಥಳೀಯ ಸಂಸ್ಥೆಗಳ ಅಡಿ ಬರುವ ಸ್ಥಿರಾಸ್ತಿಗಳಿಗೆ ಅನ್ವಯವಾಗುವಂತೆ ಕಡ್ಡಾಯ ಇ-ಸ್ವತ್ತು, ಇ-ಆಸ್ತಿಯ ಇ-ತಂತ್ರಾಂಶದಿಂದ ಮಾಹಿತಿಯನ್ನು ಪಡೆದು ಎ-ಖಾತಾ, ಬಿ-ಖಾತಾ ಯಾವುದೇ ಇದ್ದರೂ ನೋಂದಾಯಿಸಬೇಕು. ಇ-ಖಾತಾ ನೀಡಬೇಕು. ಈ ಕುರಿತು ಗೊಂದಲ ಬೇಡ ಎಂದು ತಿಳಿಸಿದ್ದಾರೆ.

ಇ-ತಂತ್ರಾಂಶದಡಿ ಇ-ಖಾತಾ ಹೊಂದಿರುವ ಬಿ-ಖಾತಾ ಆಸ್ತಿಗಳ ನೋಂದಣಿಗೆ ಕೆಲವು ಉಪ ನೋಂದಣಾಧಿಕಾರಿಗಳು ಗೊಂದಲಗಳನ್ನು ಸೃಷ್ಟಿಸುತ್ತಿದ್ದರು. ಆದ್ದರಿಂದ ಆಸ್ತಿ ಎ-ಖಾತಾ ಆಗಿರಲಿ, ಬಿ-ಖಾತಾ ಆಗಿರಲಿ ಇ-ಸ್ವತ್ತಿನ ಇ-ತಂತ್ರಾಂಶದಡಿ ನೋಂದಣಿಯಾಗಿ ಇ-ಖಾತಾ ಪಡೆದಿದ್ದರೆ ಆಸ್ತಿಗಳ ನೋಂದಣಿ ಮಾಡಬೇಕು ಎಂದು ಸುತ್ತೋಲೆ ಹೇಳಿದೆ.

ರಾಜ್ಯದ ಎಲ್ಲಾ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಗ್ರಾಮ ಪಂಚಾಯಿತಿ ಅಧೀನದಲ್ಲಿರುವ ಸ್ವತ್ತುಗಳಿಗೆ ಕಡ್ಡಾಯವಾಗಿ ಇ-ಆಸ್ತಿ, ಇ-ಸ್ವತ್ತು ಬಳಕೆ ಮಾಡಿಕೊಂಡು ನೋಂದಣಿ ಪ್ರಕ್ರಿಯೆ ನಡೆಸಲು ಸೂಚಿಸಲಾಗಿದೆ. ಉಪ ನೋಂದಣಾಧಿಕಾರಿ ಅನಗತ್ಯ ಗೊಂದಲವನ್ನು ಉಂಟು ಮಾಡಬೇಡಿ ಎಂದು ಸೂಚನೆ ಕೊಡಲಾಗಿದೆ.

ಉಪ ನೋಂದಣಾಧಿಕಾರಿಗಳು ತಮ್ಮ ವ್ಯಾಪ್ತಿಯ ಸ್ಥಿರಾಸ್ತಿಗಳಿಗೆ ಕಡ್ಡಾಯವಾಗಿ ಇ-ತಂತ್ರಾಶದಿಂದ ನಿಶ್ಚಿತವಾದ ಇ-ಸ್ವತ್ತು ಹಾಗೂ ಇ-ಆಸ್ತಿಯನ್ನು ಇ-ತಂತ್ರಾಂಶದಿಂದ ಮಾಹಿತಿ ಪಡೆದು ನಿಶ್ಚಿತವಾದ ಇ-ಸ್ವತ್ತು ಹಾಗೂ ಇ-ಆಸ್ತಿಯನ್ನು ಇ-ತಂತ್ರಾಂಶದಿಂದ ಮಾಹಿತಿ ಪಡೆದು ಎ-ಖಾತೆ ಅಥವ ಬಿ-ಖಾತೆ ಯಾವುದೇ ಇದ್ದರೂ ನೋಂದಣಿ ಮಾಡಲು ಸೂಚನೆ ನೀಡಿ ಎಂದು ಸುತ್ತೋಲೆಯಲ್ಲಿ ಹೇಳಿದ್ದಾರೆ.

ಕರ್ನಾಟಕ ಸರ್ಕಾರದ ಈ ಹಿಂದಿನ ಎಲ್ಲಾ ಸುತ್ತೋಲೆ, ಪತ್ರಗಳಲ್ಲಿನ ನಿರ್ದೇಶನಗಳನ್ನು ಉಲ್ಲಂಘನೆ ಮಾಡಿ ನೋಂದಣಿ ಮಾಡಲು ಅವಕಾಶವಿಲ್ಲ ಎಂದು ಸುತ್ತೋಲೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ಅಲ್ಲದೇ ಈ ಸುತ್ತೋಲೆಯಲ್ಲಿ ಕೇಂದ್ರ ಕಛೇರಿ ನಿರ್ದೇಶನಗಳನ್ನು ಉಲ್ಲಂಘಿಸಿ ಸ್ಥಿರಾಸ್ತಿಗಳನ್ನು ನೋಂದಣಿ ಮಾಡುವ ಉಪ ನೋಂದಣಿಕಾರಿಗಳ ವಿರುದ್ಧ ಕೆಸಿಎಸ್‌ಆರ್‌ ನಿಯಮಗಳಡಿ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆಯನ್ನು ನೀಡಿದ್ದಾರೆ.

ಬೆಳಗಾವಿಯಲ್ಲಿ ಡಿಸೆಂಬರ್‌ನಲ್ಲಿ ನಡೆದ ಅಧಿವೇಶನದಲ್ಲಿಯೇ ಇ-ಖಾತಾ ಕುರಿತು ಕರ್ನಾಟಕ ಸರ್ಕಾರ ಸ್ಪಷ್ಟನೆಯನ್ನು ನೀಡಿತ್ತು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಇ-ಖಾತಾ ವ್ಯವಸ್ಥೆಯನ್ನು ಮೊದಲು ಜಾರಿಗೊಳಿಸಲಾಯಿತು. ಬಳಿಕ ಉಳಿದ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗೆ ಇದನ್ನು ವಿಸ್ತರಣೆ ಮಾಡಲಾಯಿತು.

ಬೇಕಾಗುವ ದಾಖಲೆಗಳು: ಸರ್ಕಾರದ ಮಾಹಿತಿಯಂತೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ದಿನಾಂಕ 10/09/2024ರ ಅಂತ್ಯದವರೆಗೆ ಅನಧಿಕೃತ ಬಡಾವಣೆಗಳಲ್ಲಿ ನಿರ್ಮಿಸಿಕೊಂಡಿರುವ ನಿವೇಶನ/ ಕಟ್ಟಡಗಳಿಗೆ ಬಿ-ಖಾತೆ ನೀಡಲು ಅವಕಾಶ ಕಲ್ಪಿಸಿಕೊಡಲಾಗಿದೆ. ಆಸ್ತಿ ಮಾಲೀಕರು ಪಟ್ಟಣ ಪಂಚಾಯಿತಿ ಕಚೇರಿಯನ್ನು ಸಂಪರ್ಕಿಸಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು.

ಎ-ಖಾತೆ ಪಡೆಯಲು ಆಸ್ತಿಗೆ ಸಂಬಂಧಿಸಿದ ಸ್ವತ್ತಿನ ಮಾಲೀಕತ್ವ ಸಾಬೀತು ಮಾಡಿಸುವ ನೋಂದಾಯಿತ ಮಾರಾಟ ಪತ್ರಗಳು/ ದಾನ ಪತ್ರ/ ವಿಭಾಗ ಪತ್ರಗಳು ಅಥವಾ ಸರ್ಕಾರದ ನಿಗಮ ಮಂಡಳಿಗಳಿಂದ ನೀಡಲಾದ ಹಕ್ಕುಪತ್ರಗಳು/ ಮಂಜೂರಾತಿ ಪತ್ರಗಳು, ಕಂದಾಯ ಇಲಾಖೆಯಿಂದ 94 ಸಿ.ಸಿ. ಅಡಿ ನೀಡಲಾದ ಹಕ್ಕುಪತ್ರ ದಾಖಲೆಗಳು ಬೇಕು.

ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯಾದ ದೃಢೀಕೃತ ಪ್ರತಿ ಮತ್ತು ನಿವೇಶನ ಬಿಡುಗಡೆ ಪತ್ರ. ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪತ್ರ. ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಶೀದಿ. ಮಾಲೀಕರ ಫೋಟೋ ಮತ್ತು ಸ್ವತ್ತಿನ ಫೋಟೋ. ಮಾಲೀಕರ ಗುರುತಿನ ದಾಖಲೆ ಪ್ರತಿ ಮತ್ತು ಕಟ್ಟಡವಿದ್ದಲ್ಲಿ ವಿದ್ಯುಚ್ಛಕ್ತಿ ಬಿಲ್ ಪ್ರತಿಗಳನ್ನು ಸಲ್ಲಿಸಬೇಕು

ಆಸ್ತಿ ಮಾಲೀಕರು ಬಿ-ಖಾತೆ ಪಡೆಯಲು ಆಸ್ತಿಗೆ ಸಂಬಂಧಿಸಿದಂತೆ ಸ್ವತ್ತಿನ ಮಾಲೀಕತ್ವ ಸಾಬೀತು ಪಡಿಸುವ ದಿನಾಂಕ 10/09/2024ರ ಪೂರ್ವದಲ್ಲಿ ನೋಂದಾಯಿತ ಮಾರಾಟ ಪತ್ರಗಳು/ ದಾನ ಪತ್ರ/ ವಿಭಾಗ ಪತ್ರಗಳು/ ಹಕ್ಕು ಖುಲಾಸೆ ಪತ್ರಗಳು.

ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪತ್ರ. ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಶೀದಿ. ಮಾಲೀಕರ ಫೋಟೋ ಮತ್ತು ಸ್ವತ್ತಿನ ಫೋಟೋ. ಮಾಲೀಕರ ಗುರುತಿನ ದಾಖಲೆ ಪ್ರತಿಗಳನ್ನು ಸಲ್ಲಿಸುವುದು. ಮೂರು ತಿಂಗಳೊಳಗೆ ದಾಖಲೆಗಳನ್ನು ಸಲ್ಲಿಸಿ ಖಾತೆಯನ್ನು ಪಡೆಯಬಹುದಾಗಿದೆ.

ಪುರಸಭೆ ವ್ಯಾಪ್ತಿ: ಪುರಸಭೆ ವ್ಯಾಪ್ತಿಯ ಆಸ್ತಿ ಮಾಲೀಕರಿಗೆ ಸಹ ದಿನಾಂಕ 10/09/2024ರ ಅಂತ್ಯದವರೆಗೆ ಅನಧಿಕೃತ ಬಡಾವಣೆಗಳಲ್ಲಿ ನಿರ್ಮಿಸಿಕೊಂಡಿರುವ ನಿವೇಶನ/ ಕಟ್ಟಡಗಳಿಗೆ ಬಿ-ಖಾತೆ ನೀಡಲು ಅವಕಾಶ ಕಲ್ಪಿಸಿಕೊಡಲಾಗಿದ್ದು, ಆಸ್ತಿ ಮಾಲೀಕರು ಪುರಸಭೆ ಕಚೇರಿಯನ್ನು ಸಂಪರ್ಕಿಸಬಹುದು.

ಎ-ಖಾತೆ ಪಡೆಯಲು ಆಸ್ತಿಗೆ ಸಂಬಂಧಿಸಿದ ಸ್ವತ್ತಿನ ಮಾಲೀಕತ್ವ ಸಾಬೀತು ಮಾಡಿಸುವ ನೋಂದಾಯಿತ ಮಾರಾಟ ಪತ್ರಗಳು/ ದಾನ ಪತ್ರ/ ವಿಭಾಗ ಪತ್ರಗಳು ಅಥವಾ ಸರ್ಕಾರದ ನಿಗಮ ಮಂಡಳಿಗಳಿಂದ ನೀಡಲಾದ ಹಕ್ಕುಪತ್ರಗಳು/ ಮಂಜೂರಾತಿ ಪತ್ರಗಳು, ಕಂದಾಯ ಇಲಾಖೆಯಿಂದ 94 ಸಿ.ಸಿ. ಅಡಿ ನೀಡಲಾದ ಹಕ್ಕುಪತ್ರ.

ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯಾದ ದೃಢೀಕೃತ ಪ್ರತಿ ಮತ್ತು ನಿವೇಶನ ಬಿಡುಗಡೆ ಪತ್ರ ಅಗತ್ಯವಿದೆ. ಇದರ ಜೊತೆಗೆ ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪತ್ರ. ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಶೀದಿ. ಮಾಲೀಕರ ಫೋಟೋ ಮತ್ತು ಸ್ವತ್ತಿನ ಫೋಟೋ. ಮಾಲೀಕರ ಗುರುತಿನ ದಾಖಲೆ ಪ್ರತಿ ಮತ್ತು ಕಟ್ಟಡವಿದ್ದಲ್ಲಿ ವಿದ್ಯುಚ್ಛಕ್ತಿ ಬಿಲ್ ಪ್ರತಿಗಳನ್ನು ಸಲ್ಲಿಸುವುದು.

ಬಿ-ಖಾತೆ ಪಡೆಯಲು ಆಸ್ತಿಗೆ ಸಂಬಂಧಿಸಿದಂತೆ ಸ್ವತ್ತಿನ ಮಾಲೀಕತ್ವ ಸಾಬೀತು ಪಡಿಸುವ ದಿನಾಂಕ 10/09/2024ರ ಪೂರ್ವದಲ್ಲಿ ನೋಂದಾಯಿತ ಮಾರಾಟ ಪತ್ರಗಳು/ ದಾನ ಪತ್ರ/ ವಿಭಾಗ ಪತ್ರಗಳು/ ಹಕ್ಕು ಖುಲಾಸೆ ಪತ್ರಗಳು ಅತ್ಯವಿದೆ.

ಇದರ ಜೊತೆಗೆ ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪತ್ರ. ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಶೀದಿ. ಮಾಲೀಕರ ಫೋಟೋ ಮತ್ತು ಸ್ವತ್ತಿನ ಫೋಟೋ. ಮಾಲೀಕರ ಗುರುತಿನ ದಾಖಲೆ ಪ್ರತಿಗಳನ್ನು ಸಲ್ಲಿಸಬೇಕು. ಮೂರು ತಿಂಗಳೊಳಗೆ ದಾಖಲೆಗಳನ್ನು ಸಲ್ಲಿಸಿ ಖಾತೆಯನ್ನು ಪಡೆಯಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+