ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಶೋಕ್ ಖೇಣಿ ವಿರುದ್ಧದ ತನಿಖೆಗೆ ಸುಪ್ರೀಂ ಒಪ್ಪಿಗೆ

|
Google Oneindia Kannada News

ಬೆಂಗಳೂರು, ಜುಲೈ 07 : ನೈಸ್ ಸಂಸ್ಥೆ ಮುಖ್ಯಸ್ಥ ಮತ್ತು ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಅಶೋಕ್ ಖೇಣಿ ಅವರ ಪೌರತ್ವಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಒಪ್ಪಿಗೆ ನೀಡಿದೆ. ಅಶೋಕ್ ಖೇಣಿ ಅವರ ಶಾಸಕ ಸ್ಥಾನ ರದ್ದುಗೊಳಿಸಬೇಕೆಂದು ಕೋರಿ ಟಿ.ಜೆ.ಅಬ್ರಾಹಂ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಅಶೋಕ್ ಖೇಣಿ ಅವರು ಅಮೆರಿಕದ ನಾಗರೀಕನಾಗಿದ್ದು ಭಾರತೀಯ ಪೌರತ್ವವನ್ನು ಹೊಂದಿಲ್ಲ. ಆದರೆ, ಅವರು ಬೀದರ್ ದಕ್ಷಿಣ ಕ್ಷೇತ್ರದಿಂದ ರಾಜ್ಯ ವಿಧಾನಸಭೆಗೆ ಆರಿಸಿ ಬಂದಿದ್ದಾರೆ. ಅವರ ಶಾಸಕ ಸ್ಥಾನವನ್ನು ರದ್ದುಗೊಳಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ಕೋರ್ಟ್ ಮೆಟ್ಟಿಲೇರಿದ್ದಾರೆ.

ashok kheny

ಸೋಮವಾರ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಚ್.ಎಲ್.ದತ್ತು ನೇತೃತ್ವದ ತ್ರಿ ಸದಸ್ಯರ ಪೀಠ ಅರ್ಜಿಯ ವಿಚಾರಣೆಗೆ ಒಪ್ಪಿಗೆ ನೀಡಿದೆ ಮತ್ತು ಶಾಸಕ ಅಶೋಕ್ ಖೇಣಿ ಅವರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಮುಂದೂಡಿದೆ. [ನರೇಂದ್ರ ಮೋದಿಗೆ ದೇವೇಗೌಡರು ಪತ್ರ ಬರೆದಿದ್ದೇಕೆ?]

ಟಿ.ಜೆ.ಅಬ್ರಾಹಂ ಅವರು ಅಶೋಕ್ ಖೇಣಿ ಶಾಸಕ ಸ್ಥಾನ ರದ್ದುಗೊಳಿಸುವಂತೆ ಕೋರಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ, 2014ರಲ್ಲಿ ಕೋರ್ಟ್ ಅರ್ಜಿಯನ್ನು ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಅರ್ಜಿಯ ವಿಚಾರಣೆ ಆರಂಭವಾಗಿದೆ.

ನಕಲಿ ಗುರುತಿನ ಚೀಟಿ ಹೊಂದಿದ್ದಾರೆ : ಟಿ.ಜೆ.ಅಬ್ರಾಹಂ ಅವರು ತಮ್ಮ ಅರ್ಜಿಯಲ್ಲಿ ಅಶೋಕ್ ಖೇಣಿ ಅವರು ಬೀದರ್ ದಕ್ಷಿಣ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿಲ್ಲ. ನಕಲಿ ಮತದಾರರ ಗುರುತಿನ ಚೀಟಿ ಹೊಂದಿದ್ದಾರೆ. ಆದ್ದರಿಂದ ಅವರ ಶಾಸಕ ಸ್ಥಾನವನ್ನು ರದ್ದುಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.

2013ರ ವಿಧಾನಸಭೆ ಚುನಾವಣೆಗೆ ಕರ್ನಾಟಕ ಮಕ್ಕಳ ಪಕ್ಷದಿಂದ ಬೀದರ್ ದಕ್ಷಿಣ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಅಶೋಕ್ ಖೇಣಿ ಅವರು 47,763 ಮತಗಳನ್ನು ಪಡೆದು ಜೆಡಿಎಸ್‌ನ ಬಂಡೆಪ್ಪ ಕಾಶೆಂಪುರ ಅವರ ವಿರುದ್ಧ ಜಯಗಳಿಸಿ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದಾರೆ. [ಮಾಹಿತಿ : indiavotes]

English summary
The Supreme Court of India on Monday issued a notice to Bidar South MLA and Managing Director of Nandi Infrastructure Corridor Enterprises (NICE) Ashok Kheny in citizenship controversy.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X